ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಪುರುಷರ ಚೆಸ್ಸ್ ತಂಡವು ತಮಿಳುನಾಡಿನ ತಿರುಚಿಪಳ್ಳಿಯ ಭಾರತಿದಾಸನ್ ವಿಶ್ವವಿದ್ಯಾಲಯದಲ್ಲಿ ಜ. 26 ರಿಂದ 29, 2024 ರವರೆಗೆ ನಡೆಯಲಿರುವ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಪಂದ್ಯದಲ್ಲಿ ಭಾಗವಹಿಸಲು ಆಯ್ಕೆ ಮಾಡಲಾಗಿದೆ.
ತಂಡದ ನಾಯಕ ಅಮೀನ ಸೈಫ್ ಸದಸ್ಯರಾಗಿ ಮಹೇಶ, ಸಾಗರ, ಮತ್ತು ದಿಲೀಪ ಭಾಗವಹಿಸುವರು. ತಂಡದ ವ್ಯವಸ್ಥಾಪಕರಾಗಿ ಎಸ್. ಬಿ. ವಿಜ್ಞಾನ ಮಾಹಾವಿದ್ಯಾಲಯದ ಅಧ್ಯಾಪಕ ಶ್ರೀಶೈಲ ತೆರೆಳುವರು.
ಪಂಧ್ಯದಲ್ಲಿ ಯಶಸ್ವಿ ಯಾಗಲೆಂದು ಕುಲಪತಿ ಪ್ರೊ. ದಯಾನಂದ ಅಗಸರ, ಕುಲಸಚಿವ ಡಾ. ಬಿ. ಶರಣಪ್ಪ, ಮೌಲ್ಯಮಾಪನ ಕುಲಸಚಿವ ಪ್ರೊ. ಜ್ಯೋತಿ ಧಮ್ಮ ಪ್ರಕಾಶ್, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಎನ್. ಜಿ. ಕಣ್ಣೂರು, ಸಂಯೋಜಕ ಹಾಗೂ ಪ್ರಾಂಶುಪಾಲ ಡಾ. ಎಸ್. ಹೆಚ್. ಜಂಗೆ, ಡಾ. ಚಂದ್ರಕಾಂತ ಬಿರಾದಾರ, ಪ್ರಶಾಂತಕುಮಾರ್ ಡಿ, ಅರುಣ್ ಕುಮಾರ್ ಹೆಚ್. ತಂಡಕ್ಕೆ ಶುಭ ಹಾರೈಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…