ಅಂಬೇಡ್ಕರ್ ಪುತ್ಥಳಿಗೆ ಅವಮಾನ; ಆರೋಪಿಗಳ ಆಸ್ತಿ ಮುಟ್ಟುಗೋಲು ಮಾಡಲು ಆಗ್ರಹ

0
15

ಕಲಬುರಗಿ; ಹೊರವಲಯದ ಕೋಟನೂರು (ಡಿ) ಗ್ರಾಮದ ಲುಂಬಿಣಿ ಉದ್ಯಾನದಲ್ಲಿನ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಅವಮಾನ ಮಾಡಿರುವುದನ್ನು ಬಹುಜನ ಸಮಾಜ ಪಾರ್ಟಿ ಜಿಲ್ಲಾ ಸಮಿತಿ ಖಂಡಿಸುತ್ತದೆ. ಬಂಧಿಸಿ ಅವರೆಲ್ಲರ ಮೇಲೆ ಗೂಂಡಾ ಕೇಸು ದಾಖಲಿಸಿ ಸರಕಾರ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಂಡು, ಗುಂಡಾ ಕೇಸಿನಿಂದ ಹೊರಬಂದ ಮೇಲೆ ಇವರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಬಹುಜನ ಸಮಾಜ ಪಕ್ಷದ ಜಿಲ್ಲಾ ಅಧ್ಯಕ್ಷರಾದ ಸುನೀಲ ಇಂಗನಕಲ್ಲ ಆಗ್ರಹಿಸಿದ್ದಾರೆ.

ಕೃತ್ಯ ಮಾಡಿರುವವರನ್ನು ಈಗಾಗಲೇ ಜಿಲ್ಲಾಡಳಿತ ಪತ್ತೆಹಚ್ಚಿ ಕೆಲವು ಆರೋಪಿಗಳನ್ನು ಬಂಧಿಸಿದ್ದು, ಇನ್ನುಳಿದ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ ಅವರು ಶ್ರೀರಾಮನ ಪ್ರಾಣಪ್ರತಿಷ್ಠಾಪನೆ ದಿನದಂದೆ ಇಂತಹ ಕೃತ್ಯ ಎಸಗಿರುವುದು ದೇಶದಾದ್ಯಂತ ಇರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದವರು. ಧಾರ್ಮಿಕ ಅಲ್ಪಸಂಖ್ಯಾತರಾದ ಎಲ್ಲಾ ಬಹುಜನರಿಗೆ ಮಾಡಿದಂತಹ ಅನ್ಯಾಯವಾಗಿರುತ್ತದೆ ಎಂದು ತಿಳಿಸಿದ್ದಾರೆ.

Contact Your\'s Advertisement; 9902492681

ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರ ಮೇಲೆ ದೌರ್ಜನ್ಯಗಳು ನಡೆದರೆ ಮತ್ತು ರಾಷ್ಟ್ರೀಯ ನಾಯಕರ ಮೇಲೆ ಇಂತಹ ಕೃತ್ಯಗಳು ನಡೆದರೆ ಅದಕ್ಕೆ ಆಯಾಯ ಜಿಲ್ಲಾ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸರ್ಕಾರ ಹೇಳಿದ್ದು. ಈ ಕೃತ್ಯದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇತ್ತೀಚೆಗೆ ರಾಷ್ಟ್ರೀಯ ನಾಯಕರಿಗೆ ಅಪಮಾನ ಮಾಡುವ, ಪ್ರತಿಮೆ ಧ್ವಂಸ ಮಾಡುವ, ಪ್ರತಿಮೆ ವಿಕಾರಗೊಳಿಸುವ ಪ್ರಕರಣಗಳು ಹೆಚ್ಚುತ್ತಿದ್ದು, ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ರಾಷ್ಟ್ರೀಯ ನಾಯಕರ ಎಲ್ಲಾ ಪ್ರತಿಮೆಗಳು ಪೊಲೀಸ್ ರಕ್ಷಣೆ ನೀಡಬೇಕು ಮತ್ತು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಮುಂಜಾಗ್ರತೆ ವಹಿಸಬೇಕೆಂದು ಆಗ್ರಹಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here