ಅಂಬೇಡ್ಕರ್ ಪುತ್ಥಳಿಗೆ ಅವಮಾನ; ಆರೋಪಿಗಳ ಆಸ್ತಿ ಮುಟ್ಟುಗೋಲು ಮಾಡಲು ಆಗ್ರಹ

ಕಲಬುರಗಿ; ಹೊರವಲಯದ ಕೋಟನೂರು (ಡಿ) ಗ್ರಾಮದ ಲುಂಬಿಣಿ ಉದ್ಯಾನದಲ್ಲಿನ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಅವಮಾನ ಮಾಡಿರುವುದನ್ನು ಬಹುಜನ ಸಮಾಜ ಪಾರ್ಟಿ ಜಿಲ್ಲಾ ಸಮಿತಿ ಖಂಡಿಸುತ್ತದೆ. ಬಂಧಿಸಿ ಅವರೆಲ್ಲರ ಮೇಲೆ ಗೂಂಡಾ ಕೇಸು ದಾಖಲಿಸಿ ಸರಕಾರ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಂಡು, ಗುಂಡಾ ಕೇಸಿನಿಂದ ಹೊರಬಂದ ಮೇಲೆ ಇವರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಬಹುಜನ ಸಮಾಜ ಪಕ್ಷದ ಜಿಲ್ಲಾ ಅಧ್ಯಕ್ಷರಾದ ಸುನೀಲ ಇಂಗನಕಲ್ಲ ಆಗ್ರಹಿಸಿದ್ದಾರೆ.

ಕೃತ್ಯ ಮಾಡಿರುವವರನ್ನು ಈಗಾಗಲೇ ಜಿಲ್ಲಾಡಳಿತ ಪತ್ತೆಹಚ್ಚಿ ಕೆಲವು ಆರೋಪಿಗಳನ್ನು ಬಂಧಿಸಿದ್ದು, ಇನ್ನುಳಿದ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ ಅವರು ಶ್ರೀರಾಮನ ಪ್ರಾಣಪ್ರತಿಷ್ಠಾಪನೆ ದಿನದಂದೆ ಇಂತಹ ಕೃತ್ಯ ಎಸಗಿರುವುದು ದೇಶದಾದ್ಯಂತ ಇರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದವರು. ಧಾರ್ಮಿಕ ಅಲ್ಪಸಂಖ್ಯಾತರಾದ ಎಲ್ಲಾ ಬಹುಜನರಿಗೆ ಮಾಡಿದಂತಹ ಅನ್ಯಾಯವಾಗಿರುತ್ತದೆ ಎಂದು ತಿಳಿಸಿದ್ದಾರೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರ ಮೇಲೆ ದೌರ್ಜನ್ಯಗಳು ನಡೆದರೆ ಮತ್ತು ರಾಷ್ಟ್ರೀಯ ನಾಯಕರ ಮೇಲೆ ಇಂತಹ ಕೃತ್ಯಗಳು ನಡೆದರೆ ಅದಕ್ಕೆ ಆಯಾಯ ಜಿಲ್ಲಾ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸರ್ಕಾರ ಹೇಳಿದ್ದು. ಈ ಕೃತ್ಯದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇತ್ತೀಚೆಗೆ ರಾಷ್ಟ್ರೀಯ ನಾಯಕರಿಗೆ ಅಪಮಾನ ಮಾಡುವ, ಪ್ರತಿಮೆ ಧ್ವಂಸ ಮಾಡುವ, ಪ್ರತಿಮೆ ವಿಕಾರಗೊಳಿಸುವ ಪ್ರಕರಣಗಳು ಹೆಚ್ಚುತ್ತಿದ್ದು, ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ರಾಷ್ಟ್ರೀಯ ನಾಯಕರ ಎಲ್ಲಾ ಪ್ರತಿಮೆಗಳು ಪೊಲೀಸ್ ರಕ್ಷಣೆ ನೀಡಬೇಕು ಮತ್ತು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಮುಂಜಾಗ್ರತೆ ವಹಿಸಬೇಕೆಂದು ಆಗ್ರಹಿಸಿದ್ದಾರೆ.

emedialine

Recent Posts

ಆಳಂದ: ಗುಂಡಿಕ್ಕಿ ಮಾಜಿ ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ

ಅಳಂದ: ಮಾಜಿ ಗ್ರಾಮ ಪಂಚಾಯತಿ ಸದಸ್ಯ ಓರ್ವನನ್ನು ಗುಂಡಿಕ್ಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಖಾನಾಪುರ ಜಿಟ್ಗಾ ರಸ್ತೆಯಲ್ಲಿ…

1 hour ago

ಕಲಬುರಗಿಯಲ್ಲಿ ಆಶಾ ಕಾರ್ಯಕರ್ತೆಯರ ಬೃಹತ್ ಜಾಥಾ

ಕಲಬುರಗಿ: ಸರಕಾರಿ ನೌಕರರೆಂದು ಪರಿಗಣಿಸಿ ಸಮಾಜಿಕ ಭದ್ರತೆ ಒದಗಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಎರಡು…

2 hours ago

ಯಾದಗಿರಿ: APD ಸಂಸ್ಥೆಯಿಂದ ವಿಶೇಷ ಚೇತನ, ವಯಸ್ಕರಿಗೆ ಆರೋಗ್ಯ ಮೇಳ

ಯಾದಗಿರಿ: ಇಲ್ಲಿನ ಸ್ಟೇಷನ್ ಏರಿಯಾ ಲಾಡೀಸ್ ಗಲ್ಲಿ ಅಂಗನವಾಡಿ ಕೇಂದ್ರದಲ್ಲಿ ದಿ ಅಸೋಸಿಯೇಷನ್ ಆಫ ಪೀಪಲ್ ವಿಥ್ ಡಿಸೇಬಲಿಟಿ (ಎ.ಪಿ.ಡಿ)…

2 hours ago

ನಾಳಿನ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನ್ಯಾಯವಾದಿ ಕೋರಿಕೆ

ಕಲಬುರಗಿ: ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್ 15ರಂದು ಸರ್ಕಾರ ಹಮ್ಮಿಕೊಂಡಿರುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಎಲ್ಲ ನ್ಯಾಯವಾದಿಗಳು ಹೆಚ್ಚಿನ…

12 hours ago

ಕೊಪ್ಪಳದಲ್ಲಿ ವಧು ವರರ ಸಮಾವೇಶ, ಪ್ರತಿಭಾ ಪುರಸ್ಕಾರ

ಕಲಬುರಗಿ: ಎಲ್ಲಾ ಜಾತಿಯನ್ನು ಗೌರವಿಸು, ನಿನ್ನ ಜಾತಿಯನ್ನು ಆರಾಧಿಸು ಎಂಬ ಭಾವನೆಯೊಂದಿಗೆ ಕೊಪ್ಪಳ ಜಿಲ್ಲಾ ಗಾಣಿಗ ಸಮಾಜ, ಡಾ.ಚೌಧರಿ ಮತ್ತು…

12 hours ago

ಪ್ರಜಾಪ್ರಭುತ್ವ ದಿನಾಚರಣೆ ಹಿನ್ನಲೆ ಮಾನವ ಸರಪಳಿ ಯಶಸ್ವಿಗೊಳಿಸಿ; ಜಗದೀಶ ಚೌರ್

ಶಹಾಬಾದ: ಇದೆ ಸೆಪ್ಟೆಂಬರ್ 15ರಂದು ಕರ್ನಾಟಕ ಸರ್ಕಾರದಿಂದ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನಲೆಯಲ್ಲಿ ಬೀದರ ಜಿಲ್ಲೆಯಿಂದ ಚಾಮರಾಜನಗರದವರೆಗೆ ರಾಜ್ಯದ್ಯಾದಂತ ಏಕಕಾಲಕ್ಕೆ ದಾಖಲೆ…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420