ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ: ನೂತನ ದ.ಕ. ಜಿಲ್ಲಾಧಿಕಾರಿ ಸಿಂಧು ರೂಪೇಶ್ ಅಧಿಕಾರ ಸ್ವೀಕಾರ

0
85

ದಕ್ಷಿಣ ಕನ್ನಡ: ಸಸಿಕಾಂತ್ ಸೆಂಥಿಲ್ ರಾಜೀನಾಮೆ ಹಿನ್ನೆಲೆಯಲ್ಲಿ ಖಾಲಿರುವ ಹುದ್ದೆಗೆ ಒಂದು ದಿನದಲ್ಲೆ ನೂತನ  ಜಿಲ್ಲಾಧಿಕಾರಿಯಾಗಿ ಸಿಂಧು ಬಿ. ರೂಪೇಶ್ ಅವರಿಗೆ ನೇಮಕ ಮಾಡಿ ಅಧಿಕಾರ ವಹಿಸಿಕೊಳ್ಳಲು ಆದೇಶಿಲಾಗಿತ್ತು ಈ ಹಿನ್ನೆಲ್ಲೆಯಲ್ಲಿ ಶನಿವಾರ ಮಂಗಳೂರಿನಲ್ಲಿ ಅಧಿಕಾರ ಸ್ವೀಕರಿಸಿದರು.

ಅಪರ ಜಿಲ್ಲಾಧಿಕಾರಿ ರೂಪಾ ನೂತನ ಜಿಲ್ಲಾಧಿಕಾರಿಗಳನ್ನು ಸ್ವಾಗತಿಸಿದರು. ಮಂಗಳೂರು ಉಪವಿಭಾಗಾಧಿಕಾರಿ ರವಿಚಂದ್ರ ನಾಯ್ಕ್,  ತಹಶೀಲ್ದಾರ್ ಗುರುಪ್ರಸಾದ್ ಉಪಸ್ಥಿತರಿದ್ದರು.

Contact Your\'s Advertisement; 9902492681

ಸಿಂಧು ಅವರು ದಕ್ಷಿಣ ಕನ್ನಡ ಜಿಲ್ಲೆಯ ಎರಡನೇ ಮಹಿಳಾ ಜಿಲ್ಲಾಧಿಕಾರಿ. ಈ ಹಿಂದೆ, 1989 ರಲ್ಲಿ ರಂಜನಿ ಶ್ರೀಕುಮಾರ್ ಅವರು ಅವಿಭಜಿತ ದ.ಕ. ಜಿಲ್ಲೆಯ ಪ್ರಥಮ ಮಹಿಳಾ  ಜಿಲ್ಲಾಧಿಕಾರಿಯಾಗಿದ್ದರು. ಸಿಂದು ಬಿ. ರೂಪೇಶ್ ಅವರು ದ.ಕ. ಜಿಲ್ಲೆಯ 129 ನೇ ಜಿಲ್ಲಾಧಿಕಾರಿ. ಇದೇ ಮೊದಲ ಬಾರಿಗೆ ದ.ಕ. ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳೆರಡೂ ಹುದ್ದೆಗಳಲ್ಲಿ ಮಹಿಳೆಯರಿರುವುದು ವಿಶೇಷ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here