ಮತದಾನ ಮಾಡಲು ಪ್ರೇರಣೆ ನೀಡುವುದು ಮತದಾರರ ದಿನ; ನ್ಯಾ.ಮಾರುತಿ ಕೆ

0
13

ಸುರಪುರ: ರಾಷ್ಟ್ರೀಯ ಚುನಾವಣಾ ಆಯೋಗದ ಸಂಸ್ಥಾಪನಾ ದಿವನಾದ ಜನವೆರಿ 25 ನ್ನು ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದ್ದು,ಈ ದಿನವೂ ಎಲ್ಲರು ಕಡ್ಡಾಯವಾಗಿ ಮತದಾನ ಮಾಡಲು ಪ್ರೇರಣೆ ನೀಡುತ್ತದೆ ಎಂದು ದಿವಾಣಿ ನ್ಯಾಯಾಧೀಶರಾದ ಮಾರುತಿ ಕೆ ಅವರು ಮಾತನಾಡಿದರು.

ತಾಲೂಕು ಆಡಳಿತ ಮತ್ತು ನ್ಯಾಯಾಂಗ ಇಲಾಖೆ ವತಿಯಿಂದ ನಗರದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ 14ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,17 ವರ್ಷ 6 ತಿಂಗಳು ದಾಟಿದ ಎಲ್ಲರು ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಣಿ ಮಾಡಿಕೊಳ್ಳಲು ಈ ದಿನವನ್ನು ಆಚರಿಸಲಾಗುವುದು ಎಂದು ತಿಳಿಸಿದರು.

Contact Your\'s Advertisement; 9902492681

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ಕೆ.ವಿಜಯಕುಮಾರ ಮಾತನಾಡಿ,ವರ್ಷದಲ್ಲಿ ನಾಲ್ಕು ಬಾರಿ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಣಿಗೆ ಅವಕಾಶ ನೀಡಲಾಗಿದ್ದು 18 ವರ್ಷ ತುಂಬಿದ ಎಲ್ಲರು ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಳ್ಳುವಂತೆ ತಿಳಿಸಿದರು.ಅಲ್ಲದೆ ಚುನಾವಣೆಯಲ್ಲಿ ಮತದಾನ ಮಾಡುವುದು ಪ್ರತಿಯೊಬ್ಬ ಮತದಾರನಿಗೆ ದೊರೆಯುವ ಉತ್ತಮ ಅವಕಾಶವಾಗಿದೆ,ಅದರ ಮೂಲಕ ತಮಗೆ ಬೇಕಾದ ಒಳ್ಳೆಯ ಅಭ್ಯರ್ಥಿಯನ್ನು ನೇಮಕಗೊಳಿಸಿಕೊಳ್ಳಬಹುದು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಹೆಚ್ಚುವರಿ ದಿವಾಣಿ ನ್ಯಾಯಾಧೀಶರಾದ ಬಸವರಾಜ,ವಕೀಲರ ಸಂಘದ ತಾಲೂಕು ಅಧ್ಯಕ್ಷ ರಮಾನಂದ ಕವಲಿ,ನ್ಯಾಯವಾದಿ ಯಲ್ಲಪ್ಪ ಹುಲಿಕಲ್ ಮಾತನಾಡಿದರು.ಚುನಾವಣಾ ಶಾಖೆಯ ಸಿರಸ್ತೆದಾರ ಅವಿನಾಶ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ನೂತನವಾಗಿ ಮತದಾರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಂಡ ಯುವ ಮತದಾರರಿಗೆ ಚುನಾವಣಾ ಗುರುತಿನ ಚೀಟಿ ವಿತರಿಸಲಾಯಿತು ಮತ್ತು ಕಡ್ಡಾಯ ಮತದಾನದ ಕುರಿತು ಎಲ್ಲರಿಗೂ ನ್ಯಾಯಾಧೀಶ ಮಾರುತಿ ಕೆ. ಅವರು ಪ್ರತಿಜ್ಞಾ ಸ್ವೀಕಾರ ಮಾಡಿಸಿದರು.ವಕೀ¯ರ ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಮಂಗಿಹಾಳ ವೇದಿಕೆಯಲ್ಲಿದ್ದರು. ಕಂದಾಯ ನಿರೀಕ್ಷಕ ಬಸವರಾಜ ಬಿರಾದಾರ ನಿರೂಪಿಸಿದರು,ಉಪ ತಹಸೀಲ್ದಾರ್ ರಾಜಾಸಾಬ್ ವಂದಿಸಿದರು.ಕಂದಾಯ ಇಲಾಖೆಯ ಸಿಬ್ಬಂದಿಗಳು ಹಾಗೂ ನೂರಾರು ಜನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ನಗರದ ತಾಲೂಕು ಪಂಚಾಯತಿ ಕಚೇರಿಯಲ್ಲಿ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಯಿತು.ತಾ.ಪಂ ಸಹಾಯಕ ಲೆಕ್ಕಾಧಿಕಾರಿ ನಾಗರಾಜ ಪ್ರತಿಜ್ಞಾವಿಧಿ ಬೋಧಿಸಿದರು,ಅಕೌಂಟೆಂಟ್ ಕೆಂಚಪ್ಪ,ಕಚೇರಿ ಸಹಾಯಕರಾದ ಭೀಮನಗೌಡ,ವಿಜಯಕುಮಾರ ಜೋಷಿ,ಜಯತೀರ್ಥ ಜೋಷಿ.ಮಲ್ಲು ದೇವಾಪುರ ಸೇರಿದಂತೆ ಅನೇಕರಿದ್ದರು.

ನಗರದ ಶ್ರೀ ಪ್ರಭು ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಯಿತು.ಕಾಲೇಜಿನ ಬೋಧಕ,ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಭಾಗವಹಿಸಿ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು.

ನಗರದ ಗೃಹರಕ್ಷಕ ದಳದ ಕಚೇರಿಯಲ್ಲಿ ರಾಷ್ಟ್ರೀಯ ಮತದಾರರ ದಿವನ್ನು ಆಚರಿಸಲಾಗಿದೆ.ಕಂಪನಿ ಕಮಾಂಡರ್ ಯಲ್ಲಪ್ಪ ಹುಲಿಕಲ್ ಪ್ರತಿಜ್ಞಾವಿಧಿ ಬೋಧಿಸಿದರು,ಸಿನಿಯರ್ ಪ್ಲಾಟೂನ್ ಕಮಾಂಡರ್ ವೆಂಕಟೇಶ್ವರ ಸುರಪುರ,ಪ್ಲಾಟೂನ್ ಕಮಾಂಡರ್ ರಮೇಶ ಅಂಬುರೆ ಸೇರಿದಂತೆ ಅನೇಕ ಜನ ಗೃಹರಕ್ಷಕ ದಳದ ಸಿಬ್ಬಂದಿಗಳು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here