ಕಲಬುರಗಿ: ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ‘ಕಲ್ಯಾಣ ಕರ್ನಾಟಕ’ ವೆಂದು ಮರು ನಾಮಕರಣ ಮಾಡಲು ರಾಜ್ಯ ಸಚಿವ ಸಂಪುಟ ಸಭೆ ಮಹತ್ವದ ನಿರ್ಧಾರ ಕೈಗೊಂಡಿರುವುದು ಈ ಭಾಗದ ಜನರ ದಶಕಗಳ ಹಕ್ಕೊತ್ತಾಯಕ್ಕೆ ಮಾನ್ಯತೆ ದೊರಕಿದಂತಗಿದೆ. ಈ ನಿರ್ಣಯ ವನ್ನು ತೆಗೆದುಕೊಂಡ ಮುಖ್ಯ ಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ನವರಿಗೆ ಕಲ್ಯಾಣ ಕರ್ನಾಟಕದ ಪರವಾಗಿ ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾದ ಅಂಬಾರಾಯ ಅಷ್ಟಗಿ ಅಭಿನಂದನೆ ಸಲ್ಲಿಸಿದ್ದಾರೆ.
ಸ್ವಾತಂತ್ರ್ಯ ಪೂರ್ವದಲ್ಲಿ ಹೈದರಾಬಾದ್ ಪ್ರಾಂತ್ಯದಲ್ಲಿ ನಿಜಾಮರ ಆಳ್ವಿಕೆಯಿತ್ತು. ದೇಶಕ್ಕೆ ಸ್ವಾತಂತ್ರ್ಯ ಬಂದು ಭಾಷಾವಾರು ಪ್ರಾಂತ್ಯಗಳ ಆಧಾರದಲ್ಲಿ ರಾಜ್ಯಗಳ ರಚನೆ ಯಾದ ಬಳಿಕವೂ ಆಂಧ್ರಪ್ರದೇಶದ ಗಡಿಗೆ ಹೊಂದಿಕೊಂಡ ಜಿಲ್ಲೆಗಳನ್ನು ಹೈದರಾಬಾದ್ ಕರ್ನಾಟಕವೆಂದೆ ಗುರುತಿಸಲಾಗುತ್ತಿತ್ತು. ಸರ್ಕಾರದ ಈ ನಿರ್ಧಾರದಿಂದ ಶರಣರ, ದಾಸರ ಮತ್ತು ಸೂಫಿ ಸಂತರ ಹಾಗೂ ಸಮಾನತೆಯ ಹರಿಕಾರ ಅಣ್ಣ ಬಸವಣ್ಣ ನವರು ನಡೆದಾಡಿದ ಈ ಪ್ರದೇಶವನ್ನು ಕಲ್ಯಾಣ ಕರ್ನಾಟಕವೆಂದು ಮರು ನಾಮಕರಣ ಮಾಡಿರುವುದು ಸ್ವಾಗತಾರ್ಹವಾಗಿದೆ ಎಂದು ಹೋರಾಟಗಾರರೂ ಆದ ಅಂಬಾರಾಯ ಅಷ್ಠಗಿ ಹರ್ಷ ವ್ಯಕ್ತ ಪಡಿಸಿದ್ದಾರೆ..