ಕಾಂಗ್ರೆಸ್ ನವರಿಗೆ ಕೇಸರಿ ಕಂಡರೆ ಆಗಲ್ಲ: ಬಿ.ವೈ. ವಿಜಯೇಂದ್ರ 

0
28

ಕಲಬುರಗಿ: ಲೋಕಸಭೆ ಚುನಾವಣೆ ಬಿ.ವೈ. ವಿಜಯೇಂದ್ರ ಹತ್ತಿರವಿದ್ದು, ಇಡೀ ದೇಶದಲ್ಲಿ ಬಿಜೆಪಿ ಪರ ಅಲೆ ಇದೆ. ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಕೊಟ್ಟ ಭರವಸೆಗಳನ್ನು ಈಡೇರಿಸಲಾಗುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಸೋಮವಾರ ಸಂಜೆ ನಗರದ ಎನ್. ವಿ. ಮೈದಾನದಲ್ಲಿ ಆಯೋಜಿಸಿದ್ದ ನೂತನ ರಾಜ್ಯಾಧ್ಯಕ್ಷರಿಗೆ ಅಭಿನಂದನಾ ಹಾಗೂ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗ್ಯಾರಂಟಿ ಜಾರಿಗೆ ತರಲು ರಾಜ್ಯದ ಖಜಾನೆ ಖಾಲಿ ಮಾಡಿದ್ದಾರೆ ಎಂದು ನೇರವಾಗಿ ರಾಜ್ಯ ಸರ್ಕಾರವನ್ನು ಚುಚ್ಚಿದರು.

Contact Your\'s Advertisement; 9902492681

ರಾಜ್ಯದಲ್ಲಿ ಬೀಕರ ಬರಗಾಲ ಉಂಟಾಗಿದ್ದು, ಪರಿಹಾರ ಒತ್ತಟ್ಟಿಗಿರಲಿ ಕನಿಷ್ಠ ವಿದ್ಯತ್ ಕೂಡ ರಾಜ್ಯ ಸರ್ಕಾರಕ್ಕೆ ನೀಡಲಾಗುತ್ತಿಲ್ಲ. ರೈತರ ಪರವಾಗಿ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ ಎಂದು ಆಪಾದಿಸಿದರು.

ಡಾ.‌ ಬಿ.ಅರ್. ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ, ಅವರ ಅಂತ್ಯ ಸಂಸ್ಕಾರಕ್ಕೆ ಜಾಗ ಕೊಡದ ಕಾಂಗ್ರೆಸ್ ಸರ್ಕಾರಕ್ಕೆ ಅಂಬೇಡ್ಕರ್ ಹೆಸರು ಹೇಳುವ ನೈತಿಕತೆ ಇಲ್ಲ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

ಪ್ರಧಾನಿ ನರೇಂದ್ರ ಮೋದಿಯವರ ಪ್ರಯತ್ನದಿಂದ ಅಂಬೇಡ್ಕರ್ ಗೆ ಗೌರವ ತರುವ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಆಡಳಿತ ಜನಪರ ಮತ್ತು ಜೀವಪರವಾಗಿಲ್ಲ. ಹೀಗಾಗಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಕಾರ್ಯಕರ್ತರು ಸೈನಿಕನಂತೆ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 140ಕ್ಕೂ ಸ್ಥಾನ ಬರುವರೆಗೆ ವಿಶ್ರಮಿಸುವುದಿಲ್ಲ ಎಂದು ಭರವಸೆ ನೀಡಿದರು.

ಇದಕ್ಕೂ ಮುನ್ನ ಬಿವೈವಿ ಅವರನ್ನು ನಗರದ ಆರಾಧ್ಯ ದೈವ ಶರಣಬಸವೇಶ್ವರ ದೇವಸ್ಥಾನದಿಂದ ತೆರೆದ ಜೀಪಿನಲ್ಲಿ ಮೆರವಣಿಗೆಯೊಂದಿಗೆ ವೇದಿಕೆವರೆಗೆ
ಕರೆ ತರಲಾಯಿತು.

ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ನಗರಾಧ್ಯಕ್ಷ ಚಂದು ಪಾಟೀಲ, ಸಂಸದ ಡಾ. ಉಮೇಶ ಜಾಧವ, ಶಾಸಕ ಬಸವರಾಜ ಮತ್ತಿಮಡು, ಡಾ.‌ ಅವಿನಾಶ ಜಾಧವ, ಎಂಎಲ್ಸಿ ಸುನೀಲ್ ವಲ್ಯಾಪುರೆ, ಬಿ.ಜಿ. ಪಾಟೀಲ, ಶಶೀಲ್ ನಮೋಶಿ, ಮಾಜಿ ಶಾಸಕರಾದ ದತ್ತಾತ್ರೇಯ ಪಾಟೀಲ, ರಾಜಕುಮಾರ ಪಾಟೀಲ ತೆಲ್ಕೂರ್, ರಾಜೂಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ, ಮುಖಂಡರಾದ ಮಾಲಿಕಯ್ಯ ಗುತ್ತೇದಾರ, ಸಿದ್ದಾಜಿ ಪಾಟೀಲ, ಶೋಭಾ ಬಾಣಿ, ಅವ್ವಣ್ಣ ಮ್ಯಾಕೇರಿ, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ವಿಶಾಲ ದರ್ಗಿ , ಹರ್ಷಾನಂದ ಗುತ್ತೇದಾರ, ಸಿದ್ರಾಮಪ್ಪ ಮಾಲಿ ಬಿರಾದಾರ ಇತರರು ವೇದಿಕೆಯಲ್ಲಿದ್ದರು.

ರಾಮಭಕ್ತರನ್ನು ಕಂಡರೆ ಯಾಕಿಷ್ಟು ಹೊಟ್ಟೆಕಿಚ್ಚು?

ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ರಾಮಭಕ್ತರನ್ನು ಕಂಡರೆ, ಕೇಸರಿ ಬಣ್ಣ ಕಂಡರೆ ಆಗುವುದಿಲ್ಲ.‌ ನಾವು ಅಂಬೇಡ್ಕರ್, ಜಗಜೀವನರಾಂ ಭಕ್ತರಲ್ಲದೆ ರಾಮ ಭಕ್ತರೂ ಆಗಿದ್ದೇವೆ. – ರಾಜೂಗೌಡ, ಮಾಜಿ ಸಚಿವ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here