ಎಚ್.ಬಿ.ಪಾಟೀಲ ಅವರಿಗೆ ರಾಜ್ಯ ಸದ್ಭಾವನಾ ಪ್ರಶಸ್ತಿ

ಕಲಬುರಗಿ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ, ಬೆಂಗಳೂರು ವತಿಯಿಂದ ಉಪನ್ಯಾಸಕ, ಸಮಜ ಸೇವಕ ಎಚ್.ಬಿ.ಪಾಟೀಲ ಅವರಿಗೆ 2023-24ನೇ ಸಾಲಿನ ಸ್ವಾಮಿ ವಿವೇಕಾನಂದ ರಾಜ್ಯ ಸದ್ಭಾವನಾ ಪ್ರಶಸ್ತಿ ದೊರೆತಿದೆ.

ಪ್ರತಿವರ್ಷ ರಾಜ್ಯದ ಪ್ರತಿ ಜಿಲ್ಲೆಗೆ ಒಂದರಂತೆ ನೀಡುವ ರಾಜ್ಯ ಮಟ್ಟದ ಪ್ರಶಸ್ತಿಯು ಪ್ರಸ್ತುತ ವರ್ಷ ಕಲಬುರಗಿ ಜಿಲ್ಲೆಯಿಂದ ಇವರನ್ನು ಆಯ್ಕೆ ಮಾಡಲಾಗಿದೆ. ವಿಜಯಯಪುರ ಜಿಲ್ಲೆಯ ಮುದ್ದೇಬಿಹಾಳ್‍ನ ವಿ.ಬಿ.ಸಿ ಪ್ರೌಢಶಾಲೆಯ ಮೈದಾನದಲ್ಲಿ ಭಾನುವಾರ ಸಂಜೆ ಜರುಗಿದ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಎಚ್.ಬಿ.ಪಾಟೀಲ ಅವರ ನಿಸ್ವಾರ್ಥ ಸಮಾಜ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ. ಪಾಟೀಲ ಅವರಿಗೆ ಜಿಲ್ಲೆಯ ಅನೇಕ ಸಂಘ-ಸಂಸ್ಥೆಗಳು, ಮಹನೀಯರು ಅಭಿನಂದಿಸಿದ್ದಾರೆ.

ಕಾರ್ಯಕ್ರಮದಲ್ಲಿ ಡಾ.ಶಿವಕುಮಾರ ಸ್ವಾಮೀಜಿ, ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ, ಒಕ್ಕೂಟದ ರಾಜ್ಯಾಧ್ಯಕ್ಷ ಡಾ.ಎಸ್.ಬಾಲಾಜಿ, ಪ್ರಮುಖರಾದ ಮಹೇಂದ್ರಕುಮಾರ ನಾಯಕ, ನೇತಾಜಿ ಆರ್.ನಲವಡೆ, ಪಲ್ಲವಿ ನಾಡಗೌಡ್, ಸಂಗೀತಾ ನಾಡಗೌಡ್, ಸಿ.ಬಿ.ಅಸ್ಕಿ, ಅಮರನಾಥ ಶಿವಮೂರ್ತಿ, ಮಹಾದೇವಪ್ಪ ಎಸ್. ಬಿರಾದಾರ, ಸಿದ್ದೇಶ್ ಸ್ವಾಮಿ ಸೇರಿದಂತೆ ಮುಂತಾದವರು ಇದ್ದರು.

emedialine

Recent Posts

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

2 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

7 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

7 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

9 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

20 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

23 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420