- ಎಂ.ಡಿ ಮಶಾಖ ಚಿತ್ತಾಪುರ
ಚಿತ್ತಾಪುರ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಎಚ್. ಕಾಂತರಾಜ್ ಅವರ ನೇತೃತ್ವದಲ್ಲಿ ನಡೆಸಿದ ಸಾಮಾಜಿಕ, ಶೈಕ್ಷಣಿಕ, ಜೌದ್ಯೋಗಿಕ ಸಮೀಕ್ಷೆಯ ವರದಿ ಸ್ವೀಕರಿಸಿ ಶೀಘ್ರವೇ ಬಿಡುಗಡೆ ಮಾಡಬೇಕು ಎಂದು ಕೋಲಿ ಸಮಾಜದ ತಾಲೂಕು ಅಧ್ಯಕ್ಷ ರಾಮಲಿಂಗ ಬಾನಾರ್ ಅವರ ನೇತೃತ್ವದಲ್ಲಿ ಮುಖಂಡರು ಪಟ್ಟಣದ ತಹಶೀಲ್ ಕಚೇರಿ ಎದರುಗಡೆ ಇಂದು ಮಧ್ಯಾಹ್ನ ಗಂಟೆಗೆ ಪ್ರತಿಭಟನೆ ನಡೆಸಿದರು.
ನಂತರ ಮುಖ್ಯಮಂತ್ರಿ ಅವರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೋಲಿ ಸಮಾಜದ ಅನೇಕ ಮುಖಂಡರು, ಪದಾಧಿಕಾರಿಗಳು ಸೇರಿದಂತೆ ಇತರರು ಇದ್ದರು.