ವಾಡಿ: ದೇಶದ ಅತ್ಯುನ್ನತ ಪದವಿಯಾದ ಐಸಿಎಸ್ ಪರೀಕ್ಷೆಯಲ್ಲಿ ನಾಲ್ಕನೇ ರ್ಯಾಂಕ್ ಪಡೆದ ನೇತಾಜಿ ಸುಭಾಷಚಂದ್ರ ಬೋಸ್ ಅವರು ಪ್ರಮಾಣಪತ್ರಗಳನ್ನು ಹರಿದು ಹಾಕುವ ಮೂಲಕ ದೊಡ್ಡ ಹುದ್ದೆಯ ಅವಕಾಶವನ್ನು ಧಿಕ್ಕರಿಸುವ ಮೂಲಕ ಅಪ್ರತಿಮ ಕ್ರಾಂತಿಕಾರಿಯಾಗಿ ಹೊರ ಹೊಮ್ಮಿದರು ಎಂದು ಆಲ್ ಇಂಡಿಯಾ ಡೆಮಾಕ್ರೇಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್‍ಒ) ಜಿಲ್ಲಾಧ್ಯಕ್ಷೆ ಸ್ನೇಹಾ ಕಟ್ಟಿಮನಿ ಹೇಳಿದರು.
ಪಟ್ಟಣದಲ್ಲಿ ಬುಧವಾರ ಆಲ್ ಇಂಡಿಯಾ ಡೆಮಾಕ್ರೇಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್‍ಒ) ಹಾಗೂ ಆಲ್ ಇಂಡಿಯಾ ಡೆಮಾಕ್ರೇಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಸಂಘಟನೆಗಳ ನೇತೃತ್ವದಲ್ಲಿ ಏರ್ಪಡಿಸಲಾಗಿದ್ದ ನೇತಾಜಿ ಸುಭಾಷಚಂದ್ರ ಬೋಸ್ ಅವರ ಭಾವಚಿತ್ರ ಮೆರವಣಿಗೆ ಉದ್ಘಾಟಿಸಿ ಅವರು ಮಾತನಾಡಿದರು.
ಬ್ರಿಟೀಷರು ನೀಡುವ ಗುಲಾಮಿ ನೌಕರಿ ಮಾಡುವುದಕಿಂತ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಶೋಷಣೆ ದಬ್ಬಾಳಿಕೆಯಿಂದ ಕೂಡಿದ ಬ್ರಿಟೀಷ್ ವ್ಯವಸ್ಥೆಯ ಹೆಡೆಮುರಿ ಕಟ್ಟಬೇಕು ಎಂಬ ಪಣ ತೊಟ್ಟರು.
ಅನ್ಯಾಯಗಳನ್ನು ಕಂಡು ಸಿಡಿಯುತ್ತಿದ್ದ ನೇತಾಜಿಯವರು ಸಾಮಾಜಿಕ ಮತ್ತು ಆರ್ಥಿಕ ಸಮಾನತೆಯ ಸಮಾಜದ ಕನಸು ಕಂಡಿದ್ದರು. ಅವರ ಕನಸಿನ ಸಮಾಜವಾದ ವ್ಯವಸ್ಥೆ ಸ್ಥಾಪನೆಗೆ ಅಂದಿನ ಕೆಲ ಸಂಧಾನಪರ ಸ್ವಾತಂತ್ರ್ಯ ಹೋರಾಟಗಾರರು ಅಡ್ಡಗಾಲು ಹಾಕಿದ್ದರು ಎಂದು ದೂರಿದರು.
ಎಐಡಿಎಸ್‍ಒ ನಗರ ಸಮಿತಿ ಕಾರ್ಯದರ್ಶಿ ಗೋವಿಂದ ಯಳವಾರ ಮಾತನಾಡಿ, ಪ್ರಸಕ್ತ ನಮ್ಮ ದೇಶದ ಸಾಮಾಜಿಕ ವ್ಯವಸ್ಥೆ ಮತ್ತೊಂದು ಕ್ರಾಂತಿಗಾಗಿ ಕೂಗುತ್ತಿದೆ. ಜಾತಿ, ಧರ್ಮ, ಧ್ವಜಗಳ ಹೆಸರಿನಲ್ಲಿ ನಮ್ಮ ರಾಜಕಾರಣಿಗಳು ಯುವಜನರ ಐಕ್ಯತೆಯನ್ನು ಒಡೆದು ಹಾಕುತ್ತಿದ್ದಾರೆ.
ಕೋಮು ಸಂಘರ್ಷಗಳು ಸಾಮಾಜದ ಅಶಾಂತಿಗೆ ಕಾರಣವಾಗುತ್ತಿವೆ. ಭಾರತೀಯರು ಎಂಬ ಭಾವಕ್ಕೆ ಕೋಮುವಾದ ದೊಡ್ಡ ಪೆಟ್ಟು ನೀಡುತ್ತಿದೆ. ಕುವೆಂಪು ಸಾರಿದ ಸರ್ವ ಜನಾಂಗದ ಶಾಂತಿಯ ತೋಟವಾಗಬೇಕಿದ್ದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾಂಗೀಯ ಘರ್ಷಣೆಗಳು ಭುಗಿಲೇಳುತ್ತಿವೆ. ವಿದ್ಯಾರ್ಥಿ ಯುವಜನರು ಭ್ರಷ್ಟ ರಾಜಕೀಯ ಪಕ್ಷಗಳ ನಾಯಕರ ಬಾಲಂಗೋಚಿಗಳಾಗದೆ ವೈಜ್ಞಾನಿಕ ಚಿಂತನೆಗಳ ತಳಹದಿಯಲ್ಲಿ ಸಂಘಟಿತರಾಗುವ ಮೂಲಕ ನೇತಾಜಿ ಬೋಸ್ ಅವರ ಕನಸು ನನಸು ಮಾಡಲು ಮುಂದಾಗಬೇಕು ಎಂದರು.
ನಿವೃತ್ತ ಹಿರಿಯ ಶಿಕ್ಷಕ ಅನೀಲಕುಮಾರ ಕುಲಕರ್ಣಿ ನೇತಾಜಿ ಭಾವಚಿತ್ರಕ್ಕೆ ಪುಷ್ಪಮಾಲೆ ಅರ್ಪಿಸುವ ಮೂಲಕ ವಿದ್ಯಾರ್ಥಿಗಳ ಪ್ರಭಾತ್‍ಪೇರಿಗೆ ಚಾಲನೆ ನೀಡಿದರು. ಎಐಡಿವೈಒ ಕಾರ್ಯದರ್ಶಿ ಗೌತಮ ಪರ್ತೂಕರ, ಎಐಡಿಎಸ್‍ಒ ಅಧ್ಯಕ್ಷ ವೆಂಕಟೇಶ ದೇವದುರ್ಗ, ಶಿಕ್ಷಕರಾದ ಗೀತಾ ಠಾಕೂರ, ಯಾಸ್ಮೀನ್ ಬೇಗಂ, ರುಕ್ಮಿಣಿ, ಮುಖಂಡರಾದ ಗೋದಾವರಿ ಕಾಂಬಳೆ, ಶರಣುಕುಮಾರ ದೋಶೆಟ್ಟಿ, ಶರಣು ಹೇರೂರ, ದತ್ತಾತ್ರೇಯ ಹುಡೇಕರ, ಸಂಪತಕುಮಾರ, ಜೈಭೀಮ್ ದಾಸರ, ರಾಜು ಒಡೆಯರಾಜ, ಮಹೆಬೂಬ್ ಸೇರಿದಂತೆ ವಿವಿಧ ಪ್ರೌಢ ಶಾಲೆಗಳ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸಿದ್ಧಾರ್ಥ ತಿಪ್ಪನೋರ ನಿರೂಪಿಸಿ, ವಂದಿಸಿದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…