ಕಲಬುರಗಿ; ಸಂವಿಧಾನ ಜಾಗೃತಿ ಜಾಥಾ ಅರನೇ ದಿನವು ಮುಂದುವರೆದಿದ್ದು, ಬುಧವಾರ ಜಿಲ್ಲೆಯ ಕೈಗಾರಿಕೆ ಪಟ್ಟಣಗಳಾದ ಚಿತ್ತಾಪೂರ-ಶಹಾಬಾದ ತಾಲೂಕಿನಲ್ಲಿ ಎರಡು ಸ್ಥಬ್ದಚಿತ್ರ ವಾಹನಗಳು ಸಂಚರಿಸಿ ಸಂವಿಧಾನ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದವು. ಮೆರವಣಿಗೆ, ಕುಣಿತ, ಕಲಾ ಪ್ರದರ್ಶನದಿಂದ ಪ್ರಜಾಪ್ರಭುತ್ವ ವ್ಯವಸ್ಥೆ ನೀಡಿದ ಸಂವಿಧಾನದ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ.
ಸಂವಿಧಾನ ಅಂಗೀಕಾರಗೊಂಡು 75 ವರ್ಷ ಪೂರ್ಣ ಹಿನ್ನೆಲೆಯಲ್ಲಿ ಕಳೆದ ಜ.26 ರಿಂದ ಅರಂಭವಾಗಿರುವ ಈ ಜಾಥಾವು ಬುಧವಾರ ಚಿತ್ತಾಪೂರ ತಾಲೂಕಿನ ಅಳ್ಳೊಳ್ಳಿ ಗ್ರಾಮದಲ್ಲಿ ಯುವಕರ ಪಡೆ ಬೈಕ್ ರ‌್ಯಾಲಿ ಮೂಲಕ ತಮ್ಮೂರಿಗೆ ಜಾಗೃತಿ ಜಾಥಾವನ್ನು ಸ್ವಾಗತಿಸಿದರು. ಕೆಲವರಂತು ಅಂಬೇಡ್ಕರ ಮೂರ್ತಿ ಹೊತ್ತ ವಾಹನ ಕಂಡು ಕುಣಿದು ಕುಪ್ಪಳಿಸಿದರು. ಮಾಲಗತ್ತಿ ಗ್ರಾಮದಲ್ಲಿ ಶಾಲಾ ಮಕ್ಕಳು ಅಂಬೇಡ್ಕರ ಭಾವಚಿತ್ರ, ಸಂವಿಧಾನ ಪೀಠಿಕೆ ಪೋಸ್ಟರ್ ಹಿಡಿದು ಸಂಭ್ರಮಿಸಿದರು.
ಅಲ್ಲೂರ(ಬಿ) ಗ್ರಾಮದಲ್ಲಿ ಲಂಬಾಣಿ ಮಹಿಳೆಯರ ಸಾಂಪ್ರದಾಯಿಕ ನೃತ್ಯ, ಡೊಳ್ಳು ಕುಣಿತ ಗಮನ ಸೆಳೆಯಿತು. ತಾಲೂಕ ಪಂಚಾಯತ್ ಇ.ಓ. ನೀಲಗಂಗಾ ಬಬಲಾದ ಅವರು ಸಂವಿಧಾನ ಕುರಿತು ಮಾತನಾಡಿದರು. ಗ್ರಾಮದ ಜನಪ್ರತಿನಿಧಿಗಳು, ಮುಖಂಡರು, ಅಪಾರ ಸಂಖ್ಯೆಯಲ್ಲಿ ಮಹಿಳೆಯರು, ಶಾಲಾ ಮಕ್ಕಳು ಸಾಕ್ಷಿಯಾದರು.
ಅವಿಭಜಿತ ಚಿತ್ತಾಪೂರ ತಾಲೂಕಿನ ಶಹಾಬಾದ, ರಾವೂರ, ಅಲ್ಲೂರ(ಬಿ), ಹೊನಗುಂಟಾ, ಸಾತನೂರ, ಮೋಗಲಾ, ಭಂಕೂರ, ಮಾಲಗತ್ತಿ, ಕರದಾಳ ಗ್ರಾಮದಲ್ಲಿ ಜಾಗೃತಿ ಜಾಥಾ ಸಂಚರಿಸಿತು. ಶಹಾಬಾದ ಪಟ್ಟಣಕ್ಕೆ ಬಂದ ರಥಕ್ಕೆ ತಹಶೀಲ್ದಾರ ಜಗದೀಶ ಮತ್ತು ನಗರಸಭೆಯ ಪೌರಾಯುಕ್ತೆ ಪಂಕಜಾ ಅವರು ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಹಳ್ಳಿಗಳಲ್ಲಿ ಜಾಗೃತಿ ಜಾಥಾಕ್ಕೆ ಮಹಿಳೆಯರು ಆರತಿ ಬೆಳಗಿ ಕುಂಭ ಕಳಸದೊಂದಿಗೆ ಸ್ವಾಗತಿಸಿದರು. ಇನ್ನು ಸಂವಿಧಾನ ಕುರಿತು ರಸಪ್ರಶ್ನೆ, ಪ್ರಬಂಧ, ಭಾಷಣ ಸ್ಪರ್ಧೆ ವಿಭಾಗದಲ್ಲಿ ವಿಜೇತರಾದ ಮಕ್ಕಳಿಗೆ ಸಂವಿಧಾನ ಪೀಠಿಕೆ, ಸಂವಿಧಾನ ಓದು ಪುಸ್ತಕ ಹಾಗೂ ಮೂಲಭೂತ ಕರ್ತವ್ಯಗಳ ಪುಸ್ತಕ ವಿತರಣೆ ಮಾಡಲಾಯಿತು.
ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರಗಳು ಭಾರತದ ಸಂವಿಧಾನ ಪೀಠಿಕೆ ವಾಚನ, ನ್ಯಾಯ, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಕುರಿತು ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿಕಲ್ಪನೆ, ಬಸವಣ್ಣನವರ ವಚನಗಳು ಮತ್ತು ಭಾರತ ಸಂವಿಧಾನದಲ್ಲಿ ವಚನಗಳ ಪ್ರಸ್ತುತತೆ, ಜಿಲ್ಲೆಯ ಐತಿಹಾಸಿಕ ಸ್ಥಳ, ಕಲೆ, ಸಂಸ್ಕೃತಿ ಬಿಂಬಿಸುವುದರ ಜೊತೆಗೆ ಸಾಹಿತ್ಯ ದಿಗ್ಗಜರ ಪರಿಚಯ ಮಾಡಿಕೊಡಲಾಗುತ್ತಿದೆ. ಇದೇ ಸಂದರ್ಭದಲ್ಲಿ ಸಂವಿಧಾನ ಪೀಠಿಕೆ ವಾಚನ, ಪ್ರತಿಜ್ಞೆ ಬೋಧನೆ ಮಾಡಿಸಲಾಯಿತು.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಚೇತನ ಗುರಿಕರ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…