ಕಲಬುರಗಿ; ಶರಣಬಸವ ವಿಶ್ವವಿದ್ಯಾಲಯದ ಮುಖ್ಯ ಕ್ಯಾಂಪಸ್‍ನಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪೂರ್ಣ ಪ್ರಮಾಣದ ಡ್ರೋನ್ ಪ್ರಯೋಗಾಲಯವನ್ನು ಸ್ಥಾಪಿಸಲು, ಕರ್ಣಾಟಕ ಬ್ಯಾಂಕ್ 2023-24ನೇ ಹಣಕಾಸು ವರ್ಷದಲ್ಲಿ ಬ್ಯಾಂಕಿನ ಕಾಪೆರ್Çರೇಟ್ ಸಾಮಾಜಿಕ ಹೊಣೆಗಾರಿಕೆ (ಅSಖ) ಉಪಕ್ರಮದ ಅಡಿಯಲ್ಲಿ 12.98 ಲಕ್ಷ ರೂಪಾಯಿಗಳ ಸಹಾಯವನ್ನು ನೀಡುತ್ತಿದೆ.
ವಿಶ್ವವಿದ್ಯಾಲಯದಲ್ಲಿ ಡ್ರೋನ್ ಪ್ರಯೋಗಾಲಯ ಸ್ಥಾಪನೆಗೆ, ಮುಂದಾಳತ್ವ ವಹಿಸಿದ ವಿವಿಯ ಡೀನ್ ಡಾ. ಲಕ್ಷ್ಮೀ ಪಾಟೀಲ್ ಮಾಕಾ ಈ ಕುರಿತು ಗುರುವಾರ ಕಲಬುರಗಿಯಲ್ಲಿ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಉಪಕರಣಗಳನ್ನು ಸಂಪೂರ್ಣ ಅಳವಡಿಸಿದ ನಂತರ ಉಪಕರಣಗಳನ್ನು ಪೂರೈಸಿದ ಏಜೆನ್ಸಿಗೆ ಕರ್ಣಾಟಕ ಬ್ಯಾಂಕ್ ನೇರವಾಗಿ ಪಾವತಿ ಮಾಡಲಿದೆ ಎಂದಿದ್ದಾರೆ.
ವಿಶ್ವವಿದ್ಯಾಲಯವು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪ್ರಯೋಗಾಲಯವನ್ನು ಸ್ಥಾಪಿಸಲು ಬ್ಯಾಂಕ್‍ನಿಂದ ಆರ್ಥಿಕ ನೆರವು ಪಡೆಯುತ್ತಿರುವುದು ಇದೇ ಮೊದಲು ಹಾಗೂ ಡ್ರೋನ್ ಪ್ರಯೋಗಾಲಯವನ್ನು ಸ್ಥಾಪಿಸಲು ಕರ್ಣಾಟಕ ಬ್ಯಾಂಕ್‍ನಿಂದ ಹಣವನ್ನು ಪಡೆಯುವುದು ವಿದ್ಯಾರ್ಥಿಗಳ ಕೌಶಲ್ಯಗಳನ್ನು ಹೆಚ್ಚಿಸುವಲ್ಲಿ ಬಹಳ ಅನುಕೂಲವಾಗುತ್ತದೆ ಎಂದು ತಿಳಿಸಿದ್ದಾರೆ.
ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ ಮಾತೋಶ್ರೀ ಡಾ. ದಾಕ್ಷಾಯಿಣಿ ಅವ್ವಾಜಿ, ಸಂಘದ ಕಾರ್ಯದರ್ಶಿ ಶ್ರೀ ಬಸವರಾಜ ದೇಶಮುಖ, ವಿವಿಯ ಉಪಕುಲಪತಿ ಡಾ. ನಿರಂಜನ ವಿ. ನಿಷ್ಠಿ, ಕುಲಚಿವ ಡಾ. ಅನಿಲಕುಮಾರ ಬಿಡವೆ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಡ್ರೋನ್ ಪ್ರಯೋಗಾಲಯವನ್ನು ಸ್ಥಾಪಿಸಲು ಹಣವನ್ನು ಯಶಸ್ವಿಯಾಗಿ ಪಡೆದಿದ್ದಕ್ಕಾಗಿ ಡಾ. ಲಕ್ಷ್ಮೀ ಪಾಟೀಲ್ ಮಾಕಾ ಅವರನ್ನು ಅಭಿನಂದಿಸಿ, ಶುಭಕೋರಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…