ಕಲಬುರಗಿ; ಕೇಂದ ಮಂಡಿಸಿರುವ ಬಜೆಟ್ ಮ್ಯಾಜಿಕ್ ಷೋ ನಂತಿದೆ. ಜಾದೂಗಾರರ ಮಾತಿನಂತೆ ಕಂಗೊಳಿಸಿದೆ. ಕೇಂದ್ರ ಇಲ್ಲಿ ಬಿಚ್ಚಿ ಹೇಳದೆ ಅನೇಕ ಸಂಗತಿ ಮುಚ್ಚಿಟ್ಟಿದೆ. ಕೇವಲ ಕಣ್ಕಟ್ಟಿನ ಆಯವ್ಯಯ ಪತ್ರವಾಗಿದ್ದು ಅಂಕಿ ಸಂಖ್ಯೆಗಳನ್ನು ಮಾತ್ರ ಹೇಳುತ್ತ ಜನರನ್ನು ಮರಳು ಮಾಡುತ್ತಿದ್ದಾರೆಂದು ಶಾಸಕರಾದ ಅಲ್ಲಂಪ್ರಭು ಪಾಟೀಲ್ ಕೇಂದ್ರ ಬಜೆಟ್‌ಗೆ ಟೀಕಿಸಿದ್ದಾರೆ.
ರೂಫ್ ಟಾಪ್ ಸೋಲಾರ ಯೋಜನೆ ಜನಪ್ರೀಯಗೊಳಿಸುವಲ್ಲಿ ಕೇಂದ್ರ ರಾಜ್ಯದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹ ಜ್ಯೋತಿ ಮಾದರಿಯಲ್ಲಿಯೇ ಸೂರಿನ ಮೇಲೆ ಸೋಲಾರ್ ಮಾಡಿದವರಿಗೆ, 300 ಯೂನಿಟ್ ಉಚಿತ ನೀಡಲು ಹೊರಟಿದೆ. ಇದು ಒಂದು ರೀತಿಯಲ್ಲಿ ಕರುನಾಡಿನ ಯೋಜನೆಯ ನಕಲು ಮಾಡಿದಂತಿದೆ.
ಇನ್ನು ಡಾ. ಮಲ್ಲಿಕಾರ್ಜುನ ಖರ್ಗೆಯವರ ಕಸಿನ ಕೂಸಾಗಿರುವ ರೇಲ್ವೆ ವಿಭಾಗೀಯ ಕಚೇರಿಗೆ ಬಜೆಟ್‌ನಲ್ಲಿ ಹಣ ನೀಡದೆ ಇರೋದು ನಿಜಕ್ಕೂ ನಮಗೆಲ್ಲರಿಗೂ ನಿರಾಶೆ ಉಂಟು ಮಾಡಿದೆ ಂದು ಶಾಸಕರಾದ ಅಲ್ಲಂಪ್ರಭು ಪಾಟೀಲ್ ಹೇಳಿದ್ದಾರೆ.
ಕೇಂದ್ರ ಸರ್ಕಾರವು ತನ್ನ ಅಗತ್ಯಕ್ಕೆ ತಕ್ಕಂತೆ ಬಳಸಿಕೊಳ್ಳುತ್ತಿರುವುದು ಸ್ಪಷ್ಟವಾಗಿದೆ. ಕೇಂದ್ರ ಸರ್ಕಾರವು 25 ಕೋಟಿ ಮಂದಿಯನ್ನು ಬಡತನದ ತೆಕ್ಕೆಯಿಂದ ಹೊರತಂದಿರುವುದಾಗಿ ಹೇಳುತ್ತಿದೆ. ವಾಸ್ತವದಲ್ಲಿ ಜನತೆಯನ್ನು ಬಡತನದಿಂದ ಹೊರತರುವ ಯಾವುದೇ ನಿರ್ದಿಷ್ಟ ಯಜನೆಗಳನ್ನು ಹೇಳಿಲ್ಲ, ಅಂಕಿ ಸಂಖ್ಯೆ ನೀಡಿಲ್ಲವೆಂದು ಶಾಸಕರು ದೂರಿದ್ದಾರೆ.
ದೇಶದ ಮಹಿಳೆಯರು, ರೈತರು ಹಾಗೂ ಯುವಜನತೆಯ ಭವಿಷ್ಯದ ಮೇಲೆ ನೇರವಾಗಿ ಸಕಾರಾತ್ಮಕ ಪರಿಣಾಮ ಬೀರುವ ಯಾವುದೇ ಗುಣಾತ್ಮಕ ಸಂಗತಿಗಳನ್ನು ಈ ಬಜೆಟ್ ಹೊಂದಿಲ್ಲವೆಂದು ಅಲ್ಲಂಪ್ರಭು ಪಾಟೀಲರು ಟೀಕಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…