666 ಹುದ್ದೆಗಳ ಅಂತಿಮ ಪಟ್ಟಿ ಪ್ರಕಟ; ಸಮಿತಿಯ ಹೋರಾಟಕ್ಕೆ ಸ್ಪಂದನೆ

ಕಲಬುರಗಿ: ಅದರಂತೆ ಕೆ.ಪಿ.ಎಸ್.ಸಿ. ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳಿಗೆ ಅಂತಿಮ ಪಟ್ಟಿ ಪ್ರಕಟಿಸಲು ನಿರಂತರವಾಗಿ ಮನವರಿಕೆ ಮಾಡಿರುವಂತೆ ಕೆ.ಪಿ.ಎಸ್.ಸಿ.ಯಿಂದ ಆಯಾ ಇಲಾಖೆಗಳ 666 ಹುದ್ದೆಗಳ ಅಂತಿಮ ಪಟ್ಟಿ ಪ್ರಕಟವಾಗಿರುವುದು ಸಂತಸ ತಂದಿದೆ. ಸದರಿ ರಾಜ್ಯಮಟ್ಟದ ಮೆರಿಟ್ ಆಯ್ಕೆ ಹುದ್ದೆಗಳಲ್ಲಿ 371ನೇ(ಜೆ) ಕಲಂ ಮೀಸಲಾತಿಯಂತೆ ನೂರಾರು ಜನ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳು ಆಯ್ಕೆಯಾಗಿರುವುದು ಸಂತೋಷದ ವಿಷಯವಾಗಿದೆ ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಅಧ್ಯಕ್ಷರಾದ ಲಕ್ಷ್ಮಣ ದಸ್ತಿಯವರು ಸಂತಸ ವ್ಯಕ್ತಪಡಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಶುಭ ಕೋರಿದ್ದಾರೆ.

ಕೆ.ಪಿ.ಎಸ್.ಸಿ.ಯಲ್ಲಿ ಸುಮಾರು ದಿನಗಳಿಂದ ಗ್ರಾಮೀಣ ಕುಡಿಯುವ ನೀರು ಮತು ನೈರ್ಮಲ್ಯ ಇಲಾಖೆಯ ನಗರ ಯೋಜನೆ ಇಲಾಖೆ, ಜಲ ಸಂಪನ್ಮೂಲ ಇಲಾಖೆ, ಕಾರ್ಮಿಕ ಇಲಾಖೆಪೌರಾಡಳಿತ ಇಲಾಖೆ, ರೇಶ್ಮೆ ಇಲಾಕೆಯ  ಸುಮಾರು 666 ಹುದ್ದೆಗಳ ಮೊದಲನೇ ಪಟ್ಟಿ ಪ್ರಕಟಿಸಿ ಅಂತಿಮ ಪಟ್ಟಿಗೆ ಸುಮಾರು ದಿನಗಳಿಂದ ನೆನೆಗುದಿಗೆ ಹಾಕಲಾಗಿತ್ತು.

ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಗೆ ಕಳೆದ ಎರಡು ತಿಂಗಳು ಪೂರ್ವದಲ್ಲಿ ಮನವರಿಕೆ ಮಾಡಿರುವಂತೆ ಬೃಹತ್ ಸಭೆಯನ್ನು ನಡೆಸಿ ಕಲ್ಯಾಣ ಕರ್ನಾಟಕ ಸಚಿವರಿಗೆ ಹೋರಾಟದ ಮೂಲಕ ಪತ್ರ ಸಲ್ಲಿಸಲಾಗಿತ್ತು ಎಂದು ತಿಳಿಸಿದ್ದಾರೆ.

ಕೆ..ಟಿ. ಆದೇಶ ಪ್ರಶ್ನಿಸಿ  ಫಲಾನುಭವಿ ಅಭ್ಯರ್ಥಿಗಳು ಉಚ್ಛ ನ್ಯಾಯಾಲಯದಲ್ಲಿ ದಾವೆಹೂಡಿದ್ದರು. ಉಚ್ಛ ನ್ಯಾಯಾಲಯ ನೇಮಕಾತಿ ಸುತ್ತೋಲೆಯನ್ನು ಎತ್ತಿ ಹಿಡಿದು ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಿಸಲು ಆದೇಶಿಸಿತ್ತು. ಆದರೆ ಕೆ.ಪಿ.ಎಸ್.ಸಿ.ಯಲ್ಲಿ ಅಧ್ಯಕ್ಷರು ಮತು ಕಾರ್ಯದರ್ಶಿ ಹಾಗೂ ಆಡಳಿತ ಮಂಡಳಿಯ ಸಮನ್ವಯತೆಯ ಕೊರತೆಯಿಂದ ಆಯಾ ಇಲಾಖೆಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲು ವಿನಾಕಾರಣ ವಿಳಂಬವಾಗಿತ್ತು.

ಫಲಾನುಭವಿ ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಿಸಲು ಸಮಿತಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ .ಟಿ.ಬಿ.ಟಿ. ಸಚಿವರಾದ ಪ್ರಿಯಾಂಕ್ ಖರ್ಗೆ ಇವರಿಗೆ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಪಾಟೀಲವರಿಗೆ ಅದರಂತೆ ಕೆ.ಪಿ.ಎಸ್.ಸಿ. ಅಧ್ಯಕ್ಷರಿಗೆ, ಕಾರ್ಯದರ್ಶಿಗಳಿಗೆ ನಿರಂತರವಾಗಿ ವಿಶೇಷ ಮನವರಿಕೆ ಮಾಡಿತು.

ಅದರಂತೆ ಸಮಿತಿ ಫಲಾನುಭವಿ ಅಭ್ಯರ್ಥಿಗಳಿಗೆ ಧೈರ್ಯ ತುಂಬಿ ಕಳೆದ ಎರಡು ತಿಂಗಳಿನಿಂದ ನಿರಂತರವಾಗಿ ನಡೆಸಿರುವ ಹೋರಾಟದ ಫಲಸ್ವರೂಪ ರಾಜ್ಯದ ಅದರಲ್ಲೂ ವಿಶೇಷವಾಗಿ ಕಲ್ಯಾಣ ಕರ್ನಾಟಕದ ಅರ್ಹ ಮೆರಿಟ್ ಅಭ್ಯರ್ಥಿಗಳಿಗೆ 371ನೇ(ಜೆ) ಕಲಂ ಮೀಸಲಾತಿಯಂತೆ ನ್ಯಾಯ ಸಿಕ್ಕಿರುವುದು ಸ್ವಾಗತಾರ್ಹವಾದ ವಿಷಯವಾಗಿದೆ ಎಂದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

9 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

11 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

18 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

18 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

19 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago