ಕಲಬುರಗಿ: ಬೀದಿಬದಿ ವ್ಯಾಪಾರಿಗಳ ಸಮಗ್ರ ಕಲ್ಯಾಣಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರ ವಿಶೇಷ ಯೋಜನೆ ರೂಪಿಸಬೇಕು ಮತ್ತು ಈ ವರ್ಗದ ಕಲ್ಯಾಣಕ್ಕಾಗಿ ಪ್ರತ್ಯೇಕ ಬಜೆಟ್ ಮಂಡಿಸಬೇಕು ಎಂದು ಬೀದಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಜಗನ್ನಾಥ ಸೂರ್ಯವಂಶಿ ಅವರು ಆಗ್ರಹಿಸಿದ್ದಾರೆ.
ಬೀದಿಬದಿ ವ್ಯಾಪಾರಿಗಳ ಜೀವನೋಪಾಯದ ರಕ್ಷಣೆ ಮತ್ತು ಬೀದಿಬದಿ ವ್ಯಾಪಾರದ ನಿಯಂತ್ರಣ ಕಾಯ್ದೆ-2014 ಯನ್ನು ಸಮರ್ಪಕವಾಗಿ ಅನುಷ್ಠಾನ ಗೊಳಿಸುವುದರ ಜತೆಯಲ್ಲಿ ಪ್ರತ್ಯೇಕ ಬಜೆಟ್ ನಲ್ಲಿ ಅನುದಾನವನ್ನು ಮೀಸಲಿಡಬೇಕು ಎಂದು ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ರೈತರಿಗೆ ಮತ್ತು ಕಟ್ಟಡ ಕಾರ್ಮಿಕರಿಗೆ ನೀಡುವಷ್ಟು ಆದ್ಯತೆಯನ್ನು ಬೀದಿಬದಿ ವ್ಯಾಪಾರಿಗಳಿಗೂ ನೀಡಬೇಕು.
ಕೇಂದ್ರ ಮತ್ತು ರಾಜ್ಯ ಸರ್ಕಾರ ತಮ್ಮ ಬಜೆಟ್ ಮಂಡನೆಯಲ್ಲಿ ಈ ವಗ9ವನ್ನು ಕಡಿಗಣಿಸಬಾರದು ಎಂದಿರುವ ಅವರು, ಅಸಂಘಟಿತ ಶ್ರಮಿಕ ವಗ9ಕ್ಕೆ ಸೇರಿದ ಬೀದಿಬದಿ ವ್ಯಾಪಾರಿಗಳಿಗೆ ರೈತರಿಗೆ ಹಾಗೂ ಕಟ್ಟಡ ಕಾರ್ಮಿಕರಿಗೆ ದೊರೆಯುವ ಎಲ್ಲ ಸೌಲಭ್ಯಗಳನ್ನು ಬೀದಿಬದಿ ವ್ಯಾಪಾರಿಗಳಿಗೂ ವಿಸ್ತರಿಸಬೇಕು ಎಂದು ಒತ್ತಾಯಿಸಿದ್ದಾರೆ.