- ಎಂ.ಡಿ ಮಶಾಖ ಚಿತ್ತಾಪುರ
ಚಿತ್ತಾಪುರ; ಸಂವಿಧಾನದ 75ನೇ ವರ್ಷಾಚರಣೆ ನಿಮಿತ್ತ ಜನವರಿ 26 ರಿಂದ 1 ತಿಂಗಳು ಕರ್ನಾಟಕದಲ್ಲಿ ಸಂಚರಿಸುತ್ತಿರುವ ಸಂವಿಧಾನ ಜಾಗೃತಿ ಜಾಥಾ ಯಾತ್ರೆಗೆ ಚಿತ್ತಾಪುರ ತಾಲೂಕಿನ ಮೊಗಲಾ ಗ್ರಾಮದಲ್ಲಿ ಇಂದು ರಾತ್ರಿ 7 ಗಂಟೆಗೆ ಅದ್ಧೂರಿಯಾಗಿ ಸ್ವಾಗತಿಸಲಾಯಿತು.
ಇದೇ ವೆಳೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂವಿಧಾನದ ಜಾಗೃತಿ ಜಾಥಾದ ಮೆರವಣಿಗೆ ನಡೆಯಿತು.
ಶಾಲಾ ವಿದ್ಯಾರ್ಥಿಗಳು ಡಾ. ಬಾಬಾ ಸಾಹೇಬ್ ಅಂಬೇಡ್ಕರ್, ಮಹಾತ್ಮ ಗಾಂಧೀಜಿ, ನೇತಾಜಿ ಅವರ ವೇಷ ಧರಸಿ ಗಮನ ಸೆಳೆದರು.
ಈ ಸಂದರ್ಭದಲ್ಲಿ ತಾಪಂ ಇಒ ನೀಲಗಂಗಾ ಬಬಲಾದ್, ಕ್ಷೇತ್ರ ಶಕ್ಷಣಾಧಿಕಾರಿ ಸಿದ್ಧವೀರಯ್ಯ ರುದ್ನೂರ್, ಮುಖ್ಯಗುರು ಸುರೇಶ ಸರಾಫ್ ಸೇರಿದಂತರ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಶಿಕ್ಷಕರು, ಗ್ರಾಮದ ಅನೇಕ ಮುಖಂಡರು ಹಾಗೂ ವಿದ್ಯಾರ್ಥಿಗಳು ಇದ್ದರು.