ಬಿಸಿ ಬಿಸಿ ಸುದ್ದಿ

ದಿಟ್ಟ ಗಣಾಚಾರಿ ಶರಣರೆಂದರೆ ಮಡಿವಾಳ ಮಾಚಿದೇವರು-ರಾಜನ್

ಶಹಾಬಾದ; ಕಲ್ಯಾಣದಲ್ಲಿ ಬಸವಣ್ಣನವರ ನೇತೃತ್ವದಲ್ಲಿ ನಡೆದ ಸಾಮಾಜಿಕ ಚಳುವಳಿಯ ಅಗ್ರನಾಯಕ ಮಡಿವಾಳ ಮಾಚಿದೇವರಾಗಿದ್ದರು ಎಂದು ಸಿ.ಎ.ಇಂಗಿನಶೆಟ್ಟಿ ಕಾಲೇಜಿನ ಉಪನ್ಯಾಸಕ ಪ್ರವೀಣ ರಾಜನ್ ಹೇಳಿದರು.

ಅವರು ಗುರುವಾರ ನಗರದ ರಾಷ್ಟ್ರಭಾಷಾ ಶಿಕ್ಷಣ ಸಮಿತಿಯಲ್ಲಿ ಆಯೋಜಿಸಲಾದ ಶರಣ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಲ್ಯಾಣ ಕ್ರಾಂತಿಯು ತನ್ನ ಕೊನೆಯ ದಿನಗಳಲ್ಲಿ ರಕ್ತಸಿಕ್ತವಾಗಿ ಮಾರ್ಪಟ್ಟಾಗ, ವಚನಗಳಿಗೆ ಸನಾತನಿಗಳಿಂದ ಆಪತ್ತು ವಿಪತ್ತು ಬಂದೊದಗಿದಾಗ, ವಚನಗಳ ಸಂರಕ್ಷಣೆಗೆ ಮುಂದಾದ ಧೀರ ಗಣಾಚಾರಿ ಮಾಚಿದೇವರು. ಶರಣರು ತಮ್ಮ ವಿಚಾರಗಳನ್ನು, ಚಿಂತನೆಗಳನ್ನು, ಪ್ರಗತಿಪರ ಆಲೋಚನೆಗಳನ್ನು ವಚನಗಳಲ್ಲಿ ನಿರ್ಭಿಡೆಯಿಂದ ದಾಖಲಿಸಿದ್ದರು.

ವಚನಗಳು ಮುಂದಿನ ಜನಾಂಗಕ್ಕೆ ಸುರಕ್ಷಿತವಾಗಿ ತಲುಪಲು ಅವುಗಳ ಸಂರಕ್ಷಣೆ ಅತ್ಯಗತ್ಯವಾಗಿತ್ತು. ಹೀಗಾಗಿ ವಚನಗಳ ಕಟ್ಟನ್ನು ವ್ಯವಸ್ಥಿತವಾಗಿ ಸಂಗ್ರಹಿಸಿ, ಅವುಗಳನ್ನು ಒಂದೆಡೆ ಕ್ರೋಢೀಕರಿಸಿ, ಬಿಜ್ಜಳನ ಮಗ ಸೋವಿದೇವ ಹಾಗೂ ಅವನ ಸೈನ್ಯದ ದಾಳಿಯಿಂದ ಸಾಹಿತ್ಯ ಉಳಿಸಲು ಮಡಿವಾಳ ಮಾಚಿದೇವರು ಖಡ್ಗ ಹಿಡಿಯಬೇಕಾಯಿತು, ರಣರಂಗಕ್ಕೆ ಧುಮುಕ ಬೇಕಾಯಿತು. ಜನಪದಿಗರಂತೂ ಮಾಚಿದೇವರ ನಿμÉ್ಠ, ಭಕ್ತಿ, ಬದ್ಧತೆಯನ್ನು ಕೊಂಡಾಡಿದ್ದಾರೆ ಎಂದರು.

ಎಸ್.ಎಸ್.ನಂದಿ ಪ್ರೌಢಶಾಲೆಯ ಮುಖ್ಯಗುರು ಸುಧೀರ್ ಕುಲಕರ್ಣಿ ಮಾತನಾಡಿ, ಮಾಚಿದೇವರ ಹುಟ್ಟು ದೇವರ ಹಿಪ್ಪರಗಿಯಲ್ಲಾದರೂ ಅವರ ಕಾರ್ಯಕ್ಷೇತ್ರವು ಕಲ್ಯಾಣವಾಗಿತ್ತು. ಶರಣರ ಬಟ್ಟೆಗಳನ್ನು ಮಡಿ ಮಾಡುವ, ಅಂದರೆ ಶರಣರ ಬಟ್ಟೆಗಳನ್ನು ಒಗೆದು, ಹಸನುಗೊಳಿಸಿ ಶುಭ್ರ ಮಾಡಿ ಅವುಗಳನ್ನು ಅವರವರ ಮನೆಗಳಿಗೆ ತಲುಪಿಸುವ ಪಾವನ ಕಾಯಕವನ್ನು ಮಾಚಿದೇವರು ಕೈಗೊಂಡಿದ್ದರು.ಇವರ ವಚನಗಳಲ್ಲಿ ಕಲಿದೇವರ ದೇವಾ ಎಂಬ ಅಂಕಿತವನ್ನು ಕಾಣುತ್ತೇವೆ. ವಚನಗಳಲ್ಲಿ ನಿಷ್ಠುರತೆ, ಗಣಾಚಾರ, ಕಲಿತನ, ಸಾಮಾಜಿಕ ಕಳಕಳಿ, ವಿಡಂಬನೆ ಮತ್ತು ಟೀಕೆಗಳನ್ನು ಕಾಣುತ್ತೇವೆ ಎಂದರು.

ಮುಖ್ಯಗುರು ಮಲ್ಲಿನಾಥ ಪಾಟೀಲ, ಶಿಕ್ಷಕರಾದ ಮಹೇಶ್ವರಿ ಗುಳಿಗಿ,ವಿಜಯಲಕ್ಷ್ಮಿ.ವೆಂಕಟೇಶ, ಲತಾ ಸಾಳುಂಕೆ, ಗೀತಾ ಪುಂಡಲಿಕ್ ಸಿಪ್ಪಿ, ರಂಜಿತಾ ಹಿರೇಮಠ, ಭಾರತಿ ಚವ್ಹಾಣ,ಅರುಣ ಗಣೇಶ ಜಾಯಿ ಸೇರಿದಂತೆ ಅನೇಕರು ಹಾಜರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

11 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

21 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

21 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

21 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago