ಕಲಬುರಗಿ: ಭಾರತೀಯ ಸಂಸ್ಕೃತಿಯನ್ನು ವಿದೇಶಿ ಸಂಸ್ಕೃತಿಯಾಗಲಿ ಅಥವಾ ಬೇರೆ ಯಾವುದೇ ಸಂಸ್ಕೃತಿಯ ತೌಲನಿಕ ಅಧ್ಯಯನ ಮಾಡುವುದು ಬಹಳ ಮುಖ್ಯ ವಾಗಿದೆ ಎಂದು ನೇಪಾಳದ ಕಠ್ಮಂಡು ತ್ರಿಭುವನ್ ವಿಶ್ವವಿದ್ಯಾಲಯದ ಹಿಂದಿ ಪ್ರಾಧ್ಯಾಪಕರಾದ ಡಾ. ಶ್ವೇತಾ ದೀಪ್ತಿ ಅಭಿಪ್ರಾಯ ವ್ಯಕ್ತಪಡಿಸಿದರು.
ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಹಿಂದಿ ವಿಭಾಗದ ವತಿಯಿಂದ ಹಮ್ಮಿಕೊಂಡ ಒಂದು ದಿನದ ಅಂತರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣದಲ್ಲಿ ಆಶಯ ನುಡಿಗಳನ್ನು ಆಡಿದರು. ಕಾರ್ಯಕ್ರಮವನ್ನು ಪ್ರೊ.ಧನ್ಯಕುಮಾರ ಬಿರಾಜದಾರ ರಾಷ್ಟ್ರೀಯ ಮಹಾ ಮಂತ್ರಿಗಳು ಅಖಿಲ ಭಾರತೀಯ ಹಿಂದಿ ಮಹಾಸಭಾ ಹೊಸದಿಲ್ಲಿ ಇವರು ಉದ್ಘಾಟಿಸಿದರು.
ಇಂದು ಭಾಷಾ ಸಂಸ್ಕೃತಿಯನ್ನು ಅರಿತುಕೊಳ್ಳುವುದು ಬಹಳ ಮುಖ್ಯವಾಗಿದೆ ಎಂದು ಹೇಳಿದರು ಕಾರ್ಯಕ್ರಮದ ಅಧ್ಯಕ್ಚತೆಯನ್ನು ಪ್ರಾಚಾರ್ಯರಾದ ಡಾ.ರಾಜೇಂದ್ರ ಕೊಂಡಾ ವಹಿಸಿಕೊಂಡು ಮಾತನಾಡುತ್ತಾ ಹಿಂದಿ ವಿಭಾಗದವರು ಆಯೋಜಿಸಿರುವ ಈ ಅಂತರಾಷ್ಟ್ರೀಯ ಮಟ್ಟದ ವಿಚಾರಸಂಕಿರಣ ನಮ್ಮ ಮಹಾವಿದ್ಯಾಲಯದ ಇತಿಹಾಸದಲ್ಲಿ ಒಂದು ಹೊಸ ಸಾಧನೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಉಪಪ್ರಾಚಾರ್ಯರಾದ ಡಾ.ವೀಣಾ ಹೆಚ್ ,ಉಮಾ ಆರ್, ಸುಷ್ಮಾ ಕುಲಕರ್ಣಿ,ಕವಿತಾ ಠಾಕುರ, ಡಾ.ಸವಿತಾ ತಿವಾರಿ,ಡಾ.ದೀಪಾ ರಾಗಾ,ಡಾ.ನೀತಾ ಬೋಸ್ಲೆ,ನಿವೃತ್ತ ಪ್ರಾಚಾರ್ಯರಾದ ಡಾ.ವಿಜಯಲಕ್ಚ್ಮಿ ಕೊಸಗಿ,ಆನಂದರಾಯ ಶೆರಿಕಾರ ಹಾಗೂನಿವೃತ್ತ ಪ್ರಾಧ್ಯಾಪಕರಾದ ಡಾ.ವಿಜಯಕುಮಾರ್ ಪರುತೆ ಹಾಗೂ ಮಹಾವಿದ್ಯಾಲಯದ ಬೋಧಕ ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು.
ಹಿಂದಿ ವಿಭಾಗದ ಮುಖ್ಯಸ್ಥರು ಹಾಗೂ ವಿಚಾರಸಂಕಿರಣದ ಸಂಘಟಕರಾದ ಡಾ.ಪ್ರೇಮಚಂದ ಚವ್ಹಾಣ ಪ್ರಾಸ್ತಾವಿಕ ಮಾತನಾಡಿ ಸರ್ವರನ್ನು ಸ್ವಾಗತಿಸಿದರು,ಕುಮಾರಿ ಶೃತಿ ಕುಲಕರ್ಣಿ ಪ್ರಾರ್ಥಿಸಿದರು,ಡಾ.ವಿಲಾಸ ಸೊಲಂಕಿ ಕಾರ್ಯಕ್ರಮ ನಿರ್ವಹಿಸಿದರು ಎಂದು ಮಹಾವಿದ್ಯಾಲಯದ ನ್ಯಾಕ್ ಸಂಯೋಜಕರಾದ ಡಾ. ಮೋಹನರಾಜ್ ಪತ್ತಾರ ಪತ್ರಿಕಾ ಪ್ರಕಟಣೆಗಾಗಿ ತಿಳಿಸಿದ್ದಾರೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…