- ಎಂ.ಡಿ ಮಶಾಖ ಚಿತ್ತಾಪುರ
ಕಲಬುರಗಿ; ಎನ್ವಿ ಮೈದಾನದಲ್ಲಿ ಕೋಲಿ ಸಮಾಜದ ಹಿರಿಯ ಮುಖಂಡರಾದ ಎಂಎಲ್ಲಿ ತಿಪ್ಪಣ್ಣಪ್ಪ ಕಮಕನೂರ ಅವರ ನೇತೃತ್ವದಲ್ಲಿ ಫೆ.25ರಂದು ನಡೆಯುವ ಕೋಲಿ ಸಮಾಜದ ಬೃಹತ್ ಸಮಾವೇಶ ಯಶಸ್ಸಿಗೆ ಕೋಲಿ ಸಮಾಜದ ಎಲ್ಲ ಮುಖಂಡರು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಕೈಜೋಡಿಸಬೇಕು ಎಂದು ಕೋಲಿ ಸಮಾಜದ ತಾಲೂಕು ಉಪಾಧ್ಯಕ್ಷ ಕಾಶಪ್ಪ ಡೋಣಗಾಂವ ಹಾಗೂ ನಗರಾಧ್ಯಕ್ಷ ರಾಜೇಶ ಹೋಳಿಕಟ್ಟಿ ತಿಳಿಸಿದರು.
ಪಟ್ಟಣದ ಅಂಬಿಗರ ಚೌಡಯ್ಯ ಸಮುದಾಯ ಭವನದಲ್ಲಿ ಇಂದು ಬೆಳಗ್ಗೆ 10 ಗಂಟೆ 30 ನಿಮಿಷಕ್ಕೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಮಾವೇಶಕ್ಕೆ ಚಿತ್ತಾಪುರ ತಾಲೂಕಿನ ಕೆಲ ಕೋಲಿ ಸಮಾಜದ ಮುಖಂಡರು ಬಹಿಷ್ಕಾರ ಹಾಕುವ ಹೇಳಿಕೆ ನೀಡಿದ್ದಾರೆ.
ಅದು ಅವರ ವೈಯಕ್ತಿಕ ವಿಚಾರ, ಸಮಾಜದ ನಿರ್ಣಯ ಅಲ್ಲ. ಕೆಲವರು ತಮ್ಮ ಸ್ವ ಹಿತಾಸಕ್ತಿ ಹಾಗೂ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಸಮಾವೇಶಕ್ಕೆ ವಿರೋಧ ಮಾಡುತ್ತಿದ್ದಾರೆ. ಇಂತಹ ಹೇಳಿಕೆಗಳಿಗೆ ಸಮಾಜದವರು ಕಿವಿಗೊಡಬಾರದು. ಅಂದಿನ ಸಮಾವೇಶಕ್ಕೆ ತಾಲೂಕಿನಿಂದ 25 ಸಾವಿರ ಜನರು ಪಾಲ್ಗೊಳ್ಳಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಕೋಲಿ ಸಮಾಜದ ಯುವ ಮುಖಂಡರು ಹಾಗೂ ಪದಾಧಿಕಾರಿಗಳು ಇದ್ದರು.