ಬಿಸಿ ಬಿಸಿ ಸುದ್ದಿ

ಭಾರತ ಹಲವು ವೈಶಿಷ್ಟ್ಯಗಳ ಬೀಡು

ಕಲಬುರಗಿ: ವಿದ್ಯಾರ್ಥಿಗಳಲ್ಲಿನ ಜ್ಞಾನ, ಕೌಶಲದ ವಿಷಯಗಳು ಪ್ರದರ್ಶನವಾಗಬೇಕಾದರೆ ಅವರಿಗೆ ಪ್ರದರ್ಶನಗಳು ಸಹಕಾರಿಯಾಗುತ್ತವೆ ಎಂದು ಆಳಂದ ವಲಯ ಸಿ ಆರ್ ಪಿ ದತ್ತಪ್ಪ ಸುಳ್ಳನ ಅಭಿಪ್ರಾಯಪಟ್ಟರು.

ಶನಿವಾರ ಆಳಂದ ಪಟ್ಟಣದ ಎಸ್‍ಆರ್‍ಜಿ ಆಂಗ್ಲ್ ಮಾಧ್ಯಮ ಶಾಲೆಯಲ್ಲಿ ಹಮ್ಮಿಕೊಂಡಿದ್ದ ‘ ಭಾರತ ದರ್ಶನ’ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಗತ್ತು ದಿನೇ ದಿನೇ ತಾಂತ್ರಿಕತೆಯಿಂದ ವೇಗವಾಗಿ ಬೆಳೆಯುತ್ತಿದೆ ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕೌತುಕತೆಯಿಂದ ವಿಷಯಗಳನ್ನು ಅಭ್ಯಾಸ ಮಾಡಬೇಕು ಅಲ್ಲದೇ ತಂತ್ರಜ್ಞಾನದ ಲಾಭವನ್ನು ಪಡೆಯಲು ಮುಂದೆ ಬರಬೇಕು ಎಂದು ಹೇಳಿದರು.

ವಿದ್ಯಾರ್ಥಿ ಜೀವನವು ಆಸಕ್ತಿ ಮತ್ತು ಅಭಿರುಚಿಯ ಮೇಲೆ ನಿಂತಿದೆ ಅದಕ್ಕಾಗಿ ಯಾವುದೇ ವಿಷಯಗಳನ್ನೂ ಅಭ್ಯಾಸ ಮಾಡಿದರು ಆಸಕ್ತಿಯಿಂದ ಮಾಡಬೇಕು ಅಂದಾಗಲೇ ಆ ವಿಷಯದ ಪ್ರಭುತ್ವ ನಮ್ಮಲ್ಲಿ ಬರುತ್ತದೆ ಎಂದು ಮಾಹಿತಿ ನೀಡಿದರು.

ಭಾರತ ದರ್ಶನ ಪ್ರದರ್ಶನದಲ್ಲಿ ಭಾರತದ ವಿವಿಧ 28 ರಾಜ್ಯ ಮತ್ತು 8 ಕೇಂದ್ರಾಡಳಿತ ಪ್ರದೇಶಗಳ ಕಲೆ, ನೃತ್ಯ, ಉಡುಪು, ಸಂಸ್ಕøತಿ, ಆಹಾರ, ಆಚಾರ, ವಿಚಾರ ಸೇರಿದಂತೆ ವಿವಿಧ ಮಾದರಿಗಳನ್ನು ಪ್ರದರ್ಶಿಸಲಾಯಿತು. ಮಂಗಳಯಾನ, ಚಂದ್ರಯಾನ, ಇಸ್ರೋ, ಸ್ವಾತಂತ್ರ್ಯ ಹೋರಾಟಗಾರರು, ರಾಮ ಮಂದಿರ, ತಾಜಮಹಲ, ಮೌಂಟ್ ಎವರೆಸ್ಟ್ ಶಿಖರ, ಸುಂದರಬನ ಕಾಡುಗಳು, ದೇಶದ ದಾರ್ಶಿನಿಕರು, ಅನುಭಾವಿಗಳು, ಪ್ರಮುಖ ಅನ್ವೇಷಣೆಗಳು, ಅನುಭವ ಮಂಟಪ, ಮೈಸೂರು ಅರಮನೆ, ಭಾರತೀಯ ಸಂವಿಧಾನ, ವಚನಕಾರರು, ಸೂಫಿ ಸಂತರು, ಕಸದಿಂದ ರಸ ತೆಗೆಯುವ ಕೌಶಲ, ಸೋಲಾರ, ಹಳ್ಳಿ ಸೊಬಗು, ನಗರೀಕರಣ, ಹಸ್ತ ಮುದ್ರಿಕೆಯಲ್ಲಿ ಹೂವುಗಳು, ಪ್ರಾಣಿಗಳು, ಪಕ್ಷಿಗಳು ಸೇರಿದಂತೆ ನೂರಾರು ಮಾದರಿಗಳನ್ನು ವಿಭಿನ್ನವಾಗಿ ವಿದ್ಯಾರ್ಥಿಗಳು ಪ್ರದರ್ಶಿಸಿದರು.

ನರ್ಸರಿಯಿಂದ 10ನೇ ತರಗತಿಯವರೆಗಿನ ಸುಮಾರು 1000 ಜನ ವಿದ್ಯಾರ್ಥಿಗಳು ಪ್ರದರ್ಶನದಲ್ಲಿ ಭಾಗವಹಿಸಿ ತಮ್ಮ ಪ್ರಾತ್ಯಕ್ಷಿಕೆಗಳನ್ನು ಪ್ರಸ್ತುತಪಡಿಸಿದರು. ವೇದಿಕೆಯ ಮೇಲೆ ಸಂಸ್ಥೆಯ ಆಡಳಿತಾಧಿಕಾರಿ ಡಾ. ರಾಘವೇಂದ್ರ ಚಿಂಚನಸೂರ, ಕಸಾಪ ತಾಲೂಕಾ ಅಧ್ಯಕ್ಷ ಹಣಮಂತ ಶೇರಿ, ಶಾಲೆಯ ಪ್ರಾಚಾರ್ಯೆ ಜ್ಯೋತಿ ವಿಶಾಖ್ ಇದ್ದರು.

ಶಿಕ್ಷಕಿ ಪವಿತ್ರಾ ಕಾರ್ಯಕ್ರಮ ನಿರ್ವಹಿಸಿದರು. ಪ್ರದರ್ಶನದಲ್ಲಿ ಪಾಲಕರು, ಮಕ್ಕಳು ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

11 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

21 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

21 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

21 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago