ಬಿಸಿ ಬಿಸಿ ಸುದ್ದಿ

ಶರಣಬಸವಪ್ಪ ಅಪ್ಪರಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡಬೇಕು: ಡಾ.ಸಾರಂಗಧರ ಸ್ವಾಮೀಜಿ

ಕಲಬುರಗಿ: ಈ ಭಾಗದಲ್ಲಿ ಪೂಜ್ಯ ದೊಡ್ಡಪ್ಪ ಅಪ್ಪಾರವರು ಶೈಕ್ಷಣಿಕ ಗುಡಿ ಕಟ್ಟಿದರೇ, ಅವರ ಮಗನಾದ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾರವರು ಅದಕ್ಕೆ ಕಳಶ ಇಟ್ಟಿದ್ದಾರೆ. ಅವರ ಶೈಕ್ಷಣಿಕ ಕ್ರಾಂತಿಯನ್ನು ಗುರುತಿಸಿ, ಸರಕಾರ ಕರ್ನಾಟಕ ರತ್ನ ಹಾಗೂ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಬೇಕು ಎಂದು ಸಾರಂಗಮಠ ಶ್ರೀಶೈಲಂ ಹಾಗೂ ಸುಲಫಲ ಮಠದ ಪೂಜ್ಯ ಶ್ರೀ ಜಗದ್ಗುರು ಡಾ. ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಜೀ ಸರ್ಕಾರಕ್ಕೆ ಒತ್ತಾಯಿಸಿದರು.

ನಗರದ ಶರಣಬಸವ ಶತಮಾನೋತ್ಸವ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಪರಮ ಪೂಜ್ಯ ಲಿಂ.ದೊಡ್ಡಪ್ಪ ಅಪ್ಪಾ ಅವರ ೩೬ನೇ ಪುಣ್ಯಸ್ಮರಣೋತ್ಸವದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಲಬುರಗಿಯಲ್ಲಿಯ ಮಠಗಳು ಕಲ್ಯಾಣವಾಗಿ ಬೆಳಗಬೇಕಾದರೆ ಹಾಗೂ ಹೈದರಾಬಾದ್ ಕರ್ನಾಟಕ ಕಲ್ಯಾಣ ಕರ್ನಾಟಕ ಎಂದು ಬದಲಾಗಬೇಕಾದರೇ ಪೂಜ್ಯ ದೊಡ್ಡಪ್ಪ ಅಪ್ಪಾರವರವೇ ಪ್ರಮುಖ ಕಾರಣಿಭೂತರಾಗಿದ್ದಾರೆ ಎಂದು ಹೆಮ್ಮೆವ್ಯಕ್ತಪಡಿಸಿದರು.

ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಪರಮ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾ ಮಾತನಾಡಿ, ಶರಣಬಸವ ವಿಶ್ವವಿದ್ಯಾಲಯ ಸಂಶೋಧನಾ ಅಧ್ಯಯನಕ್ಕೆ ಹೆಚ್ಚಿನ ಒತ್ತು ನೀಡಿದೆ. ಈ ವಿಶ್ವವಿದ್ಯಾಲಯ ವೈಜ್ಞಾನಿಕ ಮತ್ತು ಕಲೆ, ಸಾಹಿತ್ಯಕ್ಕೆ ಹೆಚ್ಚಿನ ಬೆಂಬಲ ನೀಡಿದೆ. ಈ ಸಂಸ್ಥೆ ಹಣ ಗಳಿಸಬೇಕು ಎನ್ನುವ ಹಂಬಲಕ್ಕಿಂತ, ಜನ ಬೆಳೆಯಬೇಕು ಹಂಬಲ ಹೊಂದಿದೆ. ಶಿಕ್ಷಣಕ್ಕಾಗಿ ಈ ಸಂಸ್ಥೆ ಹಣ ವ್ಯಯಮಾಡಿದದಕ್ಕಿಂತ ಹೆಚ್ಚಿನ ಸಂಪತ್ತು ಶ್ರೀ ಶರಣಬಸವೇಶ್ವರರು ಈ ಸಂಸ್ಥೆಗೆ ಕರುಣಿಸಿದ್ದಾರೆ ಎಂದು ಹೇಳಿದರು.

ಚವದಾಪುರಿಯ ಪೂಜ್ಯ ಶ್ರೀ.ಷ.ಬ್ರ.ಶ ರಾಜಶೇಖರ ಶಿವಾಚಾರ್ಯರು ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಶರಣಬಸವಪ್ಪ ಅಪ್ಪರವರಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡಬೇಕು ಎನ್ನುವ ಬಯಕ್ಕೆಗೆ ಬೆಂಬಲ ವ್ಯಕ್ತಪಡಿಸಿದರು.
ಡಾ. ನಾನಾಸಾಹೇಬ್ ನಿರೂಪಿಸಿದರು. ಡಾ. ಶಿವರಾಜ ಶಾಸ್ತ್ರಿ ಸ್ವಾಗತಿಸಿ, ಪ್ರಾಸ್ತಾವಿಕ ಭಾಷಣ ಮಾಡಿದರು. ಶರಣಬಸವೇಶ್ವರ ಸಂಗೀತ ವಿಭಾಗದವರು ಪ್ರಾರ್ಥನೆ ಗೀತೆ ಹಾಡಿದರು. ಪುಣ್ಯಸ್ಮರಣೋತ್ಸವ ನಿಮಿತ್ತ ಏರ್ಪಡಿಸಿದ್ದ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿ ಅಂತಿಮ ಸುತ್ತಿನ ವಿಜೇತರಾದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಮತ್ತು ನಗದು ಪುರಸ್ಕಾರ ನೀಡಲಾಯಿತು. ಶರಣಬಸವ ವಿಶ್ವವಿದ್ಯಾಲಯದಲ್ಲಿ ಪಿಎಚ್.ಡಿ ಪದವಿ ಅಧ್ಯಯನಕ್ಕೆ ನೊಂದಣಿ ಮಾಡಿದವರಿಗೆ ಹಾಗೂ ಪಿಎಚ್.ಡಿ ಪದವಿ ಪಡೆದಿರುವವರಿಗೆ ಸನ್ಮಾನಿಸಿ, ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು.

ಶರಣಬಸವೇಶ್ವರ ಸಂಸ್ಥಾನದಲ್ಲಿ ಶ್ರಾವಣ ಮಾಸದಲ್ಲಿ ಪ್ರತಿದಿನ ಜರುಗಿದ ಉಪನ್ಯಾಸವನ್ನು ಪತ್ರಿಕೆಯಲ್ಲಿ ಮುದ್ರಿಸಿದ ಹಾಗು ವಿದ್ಯುನ್ಮಾದ್ಯಮದಲ್ಲಿ ಪ್ರಸಾರಗೊಳಿಸಿದ ವರದಿಗಾರರನ್ನು ಸನ್ಮಾನಿಸಿ, ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು. ಇದೇ ಸಮಯದಲ್ಲಿ ನಾಗಭೂಷಣ ವಿ. ಮಹಾಂತಿನಮಠ ರಚಿಸಿದ ’ಕಲಬುರಗಿ ಮಹಾದಾಸೋಹ ಜ್ಯೋತಿ’ ಎಂಬ ಸ್ತೋತ್ರ ಹಾಗೂ ಭಕ್ತಿ ಗೀತೆಗಳ ಸಿಡಿ ಬಿಡಗಡೆ ಮಾಡಲಾಯಿತು. ಮಲ್ಲಿಕಾರ್ಜುನ ಮಣ್ಣೂರ ಹಾಡಿದರು. ಹಾವಗಿ ಸ್ವಾಮಿ ಶಾಸ್ತ್ರಿ ಬರೆದ ’ದ ಗಾಡ್ ಹು ಟಿಲ್ಡ್ ದ ಲ್ಯಾಂಡ್’ ಎಂಬ ಗ್ರಂಥ ಬಿಡುಗಡೆ ಮಾಡಲಾಯಿತು. ವಿದ್ಯಾರ್ಥಿ ಬಾಬು ಪಾಟೀಲ ಹಾಗೂ ಶಿವಾನಿ ಪೂಜ್ಯ ದೊಡ್ಡಪ್ಪ ಅಪ್ಪಾಜಿಯ ಕುರಿತು ಮಾತನಾಡಿದರು.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ವಿವಿ ಕುಲಪತಿ ಡಾ. ನಿರಂಜನ್ ನಿಷ್ಠಿ, ವಿವಿ ಸಮಕುಲಪತಿ ಡಾ.ವಿ.ಡಿ.ಮೈತ್ರಿ, ಕುಲಸಚಿವ ಡಾ.ಅನೀಲಕುಮಾರ ಬಿಡವೆ, ಮೌಲ್ಯಮಾಪನ ಕುಲಸಚಿವ ಡಾ. ಲಿಂಗರಾಜ ಶಾಸ್ತ್ರೀ, ಡೀನ್ ಡಾ.ಲಕ್ಷ್ಮಿ ಮಾಕಾ ಮತ್ತು ಡಾ. ಬಸವರಾಜ ಮಠಪತಿ, ಡಾ. ನೀಲಾಂಬಿಕಾ ಶೇರಿಕಾರ ಇತರರು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

11 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

21 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

21 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

21 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago