ಬಿಸಿ ಬಿಸಿ ಸುದ್ದಿ

ಎನ್‍ಆರ್‍ಎಲ್‍ಎಂ ಅಭಿಯಾನ

ಕಲಬುರಗಿ: ಗ್ರಾಮೀಣ ಭಾಗದ ಮಹಿಳಾ ಸ್ವಸಹಾಯ ಗುಂಪಿನ ಅದ್ಯಕ್ಷರಾದ ನನಗೆ ನವದೆಹಲಿ ನೋಡುವ ಭಾಗ್ಯ ದೋರೆತಿದ್ದು ತುಂಬಾ ಖುಷಿ ತಂದಿದೆ, ನಾನು ಅತಿ ಹತ್ತಿರದಿಂದ ಕೆಂಪು ಕೋಟೆಯಲ್ಲಿ ಮಾನ್ಯ ಪ್ರಧಾನ ಮಂತ್ರಿಯವರು ಧ್ವಜಾರೋಹಣ ಮಾಡಿರುವುದನ್ನು ನೋಡಿದ್ದೆನೆ. ಇಂತಹ ಒಂದು ದೊಡ್ಡ ಕಾರ್ಯಕ್ರಮ ನೋಡುತ್ತೆನೆಂದು ಭಾವಿಸಿರಲಿಲ್ಲ. ಈ ಕಾರ್ಯಕ್ರಮದಲ್ಲಿ ನಾನು ಮಹಿಳಾ ಸ್ವಸಹಾಯ ಗುಂಪಿನಲ್ಲಿರುವುದಿಂದ ಇಂತಹ ಅವಕಾಶ ಸಿಕ್ಕಿದೆ. ನಮ್ಮ ಮಹಿಳಾ ಸಂಘದ ಇತರೆ ಸದಸ್ಯರು ಸಹ ಈ ಒಂದು ಅವಕಾಶ ನೀಡಿರುವುದು ತುಂಬಾ ಖುಷಿ ತಂದಿದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನವದೆಹಲಿಯಲ್ಲಿ ನಡೆದ ಗಣರಾಜ್ಯೋತ್ವವ ಪರೇಡ್‍ನಲ್ಲಿ ಅಥಿತಿಗಳಾಗಿ ಭಾಗವಹಿಸಿದ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಗಂಗಾಂಬಿಕಾ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ, ಬೋಧನ ಕಾರ್ಯಕಾರಿ ಸಮಿತಿಯ ಸದಸ್ಯರಾದ ಲಲಿತಾಬಾಯಿ ಆನಂದರಾಯ ಇವರ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ.

ಕಮಲಾಪೂರ ತಾಲ್ಲೂಕಿನ ಮಹಾಗಾಂವ ಅಕ್ಕಮಹಾದೇವಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಕಾರ್ಯಕಾರಿ ಸಮಿತಿಯ ಸದಸ್ಯರಾದ sಸಂಗೀತಾ ಮಲ್ಲಿಕಾರ್ಜುನ ಇವರು ನಾನು ಒಕ್ಕೂಟದ ಕಾರ್ಯಕಾರಿ ಸಮಿತಿಯ ಸದಸ್ಯರಾಗಿರುವುದರಿಂದ ನವದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವ ಭಾಗ್ಯ ದೋರೆತಿರುವುದು ನನಗೆ ತುಂಬಾ ಸಂತೋಷ. ಸಂಜೀವಿನಿ-ಎನ್‍ಆರ್‍ಎಲ್‍ಎಂ ಯೋಜನೆಯ ರಾಜ್ಯ ಕಾರ್ಯಕ್ರಮ ವ್ಯವಸ್ಥಾಪಕರಾದ ಎಂ.ಕೆ. ಅಲಿ ಸರ್ ಹಾಗೂ ಲೂಸಿ ಮೇಡಂರವರು ನಮ್ಮನ್ನು ಸುರಕ್ಷಿತವಾಗಿ ಕೆರದುಕೊಂಡು ಬಂದಿದ್ದಾರೆ ಎಂದು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಜಿಪಿಎಲ್‍ಎಫ್‍ನ ಕಾರ್ಯಕಾರಿ ಸಮಿತಿಯ ಸಮಿತಿಯ ಸದಸ್ಯರಿಗೆ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಭಂವಾರಸಿಂಗ್ ಮಿನಾ, ಹಾಗೂ ಯೋಜನಾ ನಿರ್ದೇಶಕರಾದ (ಡಿಆರ್‍ಡಿಎ) ಜಗದೇವ ಭೈರಗೊಂಡರವರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ಲೋಹಿತ್‍ಕುಮಾರ, ಜಿಲ್ಲಾ ವ್ಯವಸ್ಥಾಪಕರುಗಳಾದ ಅರುಣಕುಮಾರ ಹಾಗೂ ರೇವಪ್ಪ ಯುವ ವೃತ್ತಿಪರರಾದ ನಾಗರಾಜ ಹಾಜರಿದ್ದರು.

ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರು ಸಂಜೀವಿನಿ-ಎನ್‍ಆರ್‍ಎಲ್‍ಎಂ ಯೋಜನೆಯ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಸಬಲಿಕರಣವಾಗಬೇಕು. ಗ್ರಾಮೀಣ ಭಾಗದ ಮಹಿಳೆಯರಿಗೆ ಇದೊಂದು ಸುವರ್ಣಾವಕಾಶ ವಾಗಿದ್ದು ಇದರ ಮೂಲಕ ತಾವು ಸ್ವತಂತ್ರವಾಗಿ ಉದ್ದಿಮೇಗಳನ್ನು ಪ್ರಾರಂಭಮಾಡಿಕೊಂಡು ತಮ್ಮ ಜೀವನ ಸುಧಾರಿಸಿಕೊಳ್ಳಬೇಕು. ನಮ್ಮ ಜಿಲ್ಲೆಯಿಂದ ನವದೆಹಲಿ ಗಣರಾಜ್ಯೋತ್ಸವದಲ್ಲಿ ಭಾಗವಹಿಸಲು ಅವಕಾಶ ಸಿಕ್ಕಿದ್ದು, ನಮಗೆ ಸಂತೋಷ ತಂದಿದೆ. ಇನ್ನೂ ಇಂಥಹ ಅವಕಾಶಗಳನ್ನು ನಮ್ಮ ಮಹಿಳಾ ಸ್ವಸಹಾಯ ಗುಂಪುಗಳಿಗೆ ಸಿಗಲಿ. – ಭಂವಾರ್ ಸಿಂಘ ಮೀನಾ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್, ಕಲಬುರಗಿ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

3 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

3 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

3 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

20 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

22 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago