ಕಲಬುರಗಿ: ಲಾರಿ ಮತ್ತು ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ತಾಪುರ ತಾಲ್ಲೂಕಿನ ಲಾಡ್ಲಾಪುರ ಹಲಕರ್ಟಿ ಮಧ್ಯೆ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಶನಿವಾರ ರಾತ್ರಿ 9 ಗಂಟೆಗೆ ಜರುಗಿದೆ.
ಪಟ್ಟಣದ 6ನೇ ವಾರ್ಡ್ ನಿವಾಸಿ ಸೂರ್ಯಕಾಂತ ಸೂರ್ಯಕಾಂತ ಭೀಮರಾಯ ಮುಂಡರಗಿ(21) ಮೃತಪಟ್ಟ ಯುವಕ.
ಯಾದಗಿರಿಯ ಪ್ರಗತಿ ಪದವಿ ಕಾಲೇಜಿನಲ್ಲಿ ಬಿಎ ಅಂತಿಮ ವರ್ಷ ಓದುತ್ತಿದ್ದ ಸೂರ್ಯಕಾಂತ ಕಾಲೇಜ್ನಿಂದ ವಾಡಿ ಕಡೆ ತೆರಳುತ್ತಿದ್ದಾಗ ಎದುರಿಗೆ ವೇಗವಾಗಿ ಬಂದ ಸಿಮೆಂಟ್ ತುಂಬಿದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಸುದ್ದಿ ತಿಳಿಯುತ್ತಿದ್ದಂತೆ ವಾಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…