ಕಲಬುರಗಿ; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಫೆಬ್ರವರಿ 8 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಜೋಶ್ ಮ್ಯಾನೇಜ್‍ಮೆಂಟ್ ಆಂಡ್ ಸೊಲ್ಯೂಷನ್ಸ್‍ದಲ್ಲಿ ಬ್ಯಾಂಕಿಂಗ್ ಪ್ರೋಸೆಸ್ ಹುದ್ದೆಗೆ ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಯಾವುದೇ ಪದವಿ ಹಾಗೂ ಎಂಬಿಎ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 45 ವರ್ಷದೊಳಗಿರಬೇಕು. ಮ್ಯಾನುಫ್ಯಾಕ್ಚರಿಂಗ್ ಪ್ಲ್ಯಾಂಟ್ ಹುದ್ದೆಗೆ ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐಟಿಐ ಹಾಗೂ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 25 ವರ್ಷದೊಳಗಿರಬೇಕು.

ಆಧ್ಯಶ್ರೀ ಸೋಲಾರ್ ಗ್ರೂಪ್ಸ್‍ದಲ್ಲಿ ಏರಿಯಾ ಸೆಲ್ಸ್ ಮ್ಯಾನೇಜರ್ ಹುದ್ದೆಗೆ ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐಟಿಐ ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 28 ವರ್ಷದೊಳಗಿರಬೇಕು. ಬಿವರೇಜ್‍ದಲ್ಲಿ ಅಪ್ರೆಂಟಿಶಿಪ್‍ಗೆ ಐಟಿಐ ಎಲೆಕ್ಟ್ರಿಶಿಯನ್/ ಫಿಟ್ಟರ್ ವಿದ್ಯಾರ್ಹತೆ ಹೊಂದಿರಬೇಕು. ಮಶೀನ್ ಆಪರೇಟರ್ ಹುದ್ದೆಗೆ ಡಿಪ್ಲೋಮಾ ಎಲೆಕ್ಟ್ರಿಶಿಯನ್/ ಮೆಕ್ಯಾನಿಕಲ್ ವಿದ್ಯಾರ್ಹತೆ ಹೊಂದಿರೇಕು. ವಯೋಮಿತಿ 18 ರಿಂದ 25 ವರ್ಷದೊಳಗಿರಬೇಕು.

ಟ್ಯಾಲಿ ಸೋಲ್ಯೂಷನ್ಸ್‍ದಲ್ಲಿ ಬಿಸಿನೆಸ್ ಕನ್ಸಲಟಂಟ್ ಮತ್ತು ಟೆಲಿಕಾಲರ್ಸ್ ಹುದ್ದೆಗೆ ಪಿ.ಯು.ಸಿ, ಬಿ.ಬಿ.ಎ, ಬಿ.ಕಾಂ, ಬಿ.ಬಿ.ಎಂ, ಎಂ.ಬಿ.ಎ, ಎಂ.ಕಾಂ. ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು.

ಚೇತನ ಹೇಲ್ತ ಕೇರ್ ಸೋಲ್ಯೂಷನ್ಸ್‍ದಲ್ಲಿ ಕಂಪ್ಯೂಟರ ಆಪರೇಟರ್ ಹುದ್ದೆಗೆ ಎಸ್.ಎಸ್.ಎಲ್.ಸಿ ಹಾಗೂ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 25 ವರ್ಷದೊಳಗಿರಬೇಕು.

ಜೂಮಟೆಕ್ ಐಜಿದಲ್ಲಿ ಪ್ರೋಡೆಕ್ಷನ್/ಪ್ಯಾಕರ್ ಹುದ್ದೆಗೆ ಐ.ಟಿ.ಐ./ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು. ಹೆಚ್‍ಆರ್ ರಿಕ್ಯೂಟರ್, ಡೆಕ್ಸ್‍ಟಾಪ್ ಇಂಜನಿಯರಿಂಗ್, ಟೆಕ್ನಿಶಿಯನ್ ಸಪೋರಟ್ ಮತ್ತಿತರ ಹುದ್ದೆಗೆ ಯಾವುದೇ ಪದವಿ, ಬಿ.ಇ, ಬಿಟೆಕ್, ಬಿ.ಸಿ.ಎ, ಎಂ.ಸಿ.ಎ, ಎಂ.ಬಿ.ಎ, ಬಿಎಸ್‍ಸಿ ಹಾಗೂ ಐಟಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು.

ಮೆಡ್‍ಪ್ಲಸ್‍ದಲ್ಲಿ ಫಾರ್ಮಾಸಿಸ್ಟ್ ಹುದ್ದೆಗೆ ಡಿ.ಫಾರ್ಮ, ಬಿ.ಫಾರ್ಮ್ ಮತ್ತು ಎಂ.ಫಾರ್ಮ ವಿದ್ಯಾರ್ಹತೆ ಹೊಂದಿರಬೇಕು. ಸಿಎಸ್‍ಎ ಹುದ್ದೆಗೆ ಎಸ್.ಎಸ್.ಎಲ್.ಸಿ ಹಾಗೂ ಮೆಲ್ಪಟ್ಟ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 25 ವರ್ಷದೊಳಗಿರಬೇಕು.
ಕ್ರೆಡಿಟ್ ಎಕ್ಸಸ್ ಗ್ರಾಮೀಣದಲ್ಲಿ ಕೇಂದ್ರ ಮ್ಯಾನೇಜರ್ ಹುದ್ದೆಗೆ ಪಿ.ಯು.ಸಿ, ಐ.ಟಿ.ಐ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಪುರುಷರಿಗೆ ವಯೋಮಿತಿ 19 ರಿಂದ 28ವರ್ಷದೊಳಗಿರಬೇಕು. ಮಹಿಳೆಯರಿಗೆ 19 ರಿಂದ 36 ವರ್ಷದೊಳಗಿರಬೇಕು.

ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝೆರಾಕ್ಸ್, ರೆಸ್ಯೂಮ್ (ಬಯೋಡೆÀಟಾ) ಭಾವಚಿತ್ರಗಳು ಹಾಗೂ ಆಧಾರ್‍ಕಾರ್ಡ್ ದಾಖಲೆಗಳೊಂದಿಗೆ ಮೇಲ್ಕಂಡ ದಿನದಂದು ನಡೆಯುವ ನೇರ ಸಂದರ್ಶನದಲ್ಲ್ಲಿ ಭಾಗವಹಿಸಬಹುದಾಗಿದೆ.

ನೇರ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846, ಮೊಬೈಲ್ ಸಂಖ್ಯೆ 8003343944 (ಪ್ರತಿದಿನ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕರೆ ಮಾಡಬಹುದಾಗಿದೆ) ಗೆ ಸಂಪರ್ಕಿಸಲು ಕೋರಲಾಗಿದೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

7 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

10 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

10 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

10 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

10 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420