ಎಂ.ಎಸ್. ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ರಕ್ತದಾನ ಶಿಬಿರ

0
15

ಕಲಬುರಗಿ: ಹೈ.ಕ.ಶಿ. ಸಂಸ್ಥೆಯ ಎಂ. ಎಸ್. ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ಹೈ.ಕ. ಶಿ. ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಲಿಂ. ಶ್ರೀ ಮಹಾದೇವಪ್ಪ ರಾಂಪೂರೆ ಯವರ 51 ನೇಯ ಪುಣ್ಯಸ್ಮರಣೆ ನಿಮಿತ್ಯ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ರಾ. ಸೇ. ಯೋಜನೆ ಘಟಕ, ಯುತ್ ರೆಡ್ ಕ್ರಾಸ್ ಘಟಕ ಹಾಗು ರೆಡ್ ರಿಬ್ಬನ್ ಕ್ಲಬ್‍ನ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಯಿತು.

ಈ ರಕ್ತದಾನ ಶಿಬಿರವನ್ನು ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಕಾಲೇಜಿನ ಶಸ್ತ್ರಚಿಕಿತ್ಸಾ ವಿಭಾಗದ ಪ್ರಾಧ್ಯಾಪಕರಾದ ಡಾ. ರಾಜಶೇಖರ ಪಾಟೀಲ ಉದ್ಘಾಟಿಸಿ ರಕ್ತದಾನದ ಮಹತ್ವವನ್ನು ಕುರಿತು ಮಾತನಾಡಿದರು. ಬಸವೇಶ್ವರ ಆಸ್ಪತ್ರೆಯ ಬ್ಲಡ್ ಬ್ಯಾಂಕ್ ಅಧಿಕಾರಿಯಾದ ಡಾ. ಶಿವಶೆಟ್ಟಿ ಅವರು ಮಾತನಾಡಿ ರಕ್ತದಾನ ಮಾಡುವದರಿಂದ ಅರೋಗ್ಯವನ್ನು ಕಾಪಾಡಿಕೊಳ್ಳ ಬಹುದೆಂದು ಹೇಳಿದರು.

Contact Your\'s Advertisement; 9902492681

ಕಾರ್ಯಕ್ರಮದ ಅಧ್ಯಕ್ಷೀಯ ನುಡಿಗಳನ್ನಾಡಿದ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ರಾಜಶೇಖರ ಬೀರನಳ್ಳಿ ಅವರು ಒಳ್ಳೆಯ ಆಹಾರ ಸೇವನೆ ಸೇವನೆ ಮಾಡುವುದರ ಜೊತೆಗೆ ಸಮಾಜ ಸೇವೆಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಬೇಕೆಂದು ಹೇಳಿದರು.

ಯುತ್ ರೆಡ್ ಕ್ರಾಸ್ ಹಾಗೂ ರಾ. ಸೇ. ಯೋಜನೆ ಕಾರ್ಯಕ್ರಮಾಧಿಕಾರಿಯಾದ ಡಾ. ಪ್ರಾಣೇಶ ಎಸ್ ಕಾಯ್ರಕ್ರಮದ ನಿರ್ವಹಣೆಯನ್ನು ಮಾಡಿದರು. ಡಾ.ಶಂಕ್ರಪ್ಪ ಕೆ ಸ್ವಾಗತಿಸಿದರು. ಮಹಾವಿದ್ಯಾಲಯದ ಎಲ್ಲಾ ಬೋಧಕ ಮತ್ತು ಬೋಧಕೆತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here