ತೋಂಟದಾರ್ಯ ವಿದ್ಯಾಪಿಠದ ವಾರ್ಷಿಕ ಶೈಕ್ಷಣಿಕ ಸಾಂಸ್ಕೃತಿಕ ಕಾರ್ಯಕ್ರಮ ನಾಳೆ

0
19

ಜೇವರ್ಗಿ: ನಗರದ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ವಾರ್ಷಿಕ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಡಿಸೆಂಬರ್ 8ರಂದು ಸಾಯಂಕಾಲ 5 ಗಂಟೆಗೆ ಜಗದ್ಗುರು ತೋಂಟದಾರ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಲಿದೆ.

ಪೂಜ್ಯಶ್ರೀ ಜಗದ್ಗುರು ಲಿಂಗೈಕೆ ಡಾ. ತೋಂಟದ ಸಿದ್ದಲಿಂಗ ಮಹಾಸ್ವಾಮಿಗಳವರ ದಿವ್ಯ ಪ್ರಕಾಶದಲ್ಲಿ ಪೂಜ್ಯಶ್ರೀ ಜಗದ್ಗುರು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಶ್ರೀ ಜಗದ್ಗುರು ತೋಂಟದಾರ್ಯ ಸಂಸ್ಥಾನ ಮಠ ಯಡಿಯೂರು ಡಂಬಳ ಗದಗ ಇವರ ಕೃಪಾ ಆಶೀರ್ವಾದದೊಂದಿಗೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೂಜ್ಯಶ್ರೀ ಕೊರಣೇಶ್ವರ ಮಹಾಸ್ವಾಮಿಗಳು ತೋಂಟದಾರ್ಯ ಅನುಭವ ಮಂಟಪ ಆಳಂದ ಭಾಗವಹಿಸಲಿದ್ದು, ಉದ್ಘಾಟಕರಾಗಿ ದಕ್ಷಿಣ ಮತಕ್ಷೇತ್ರ ಶಾಸಕ ಅಲ್ಲಮಪ್ರಭು ಪಾಟೀಲ, ಮುಖ್ಯ ಅತಿಥಿಗಳಾಗಿ ಗುಲ್ಬರ್ಗ ವಿಶ್ವವಿದ್ಯಾಲಯ ಕುಲಸಚಿವ ಡಾ. ಬಿ. ಶರಣಪ್ಪ,  ಎಸ್. ಎಸ್. ಪಟ್ಟಣಶೆಟ್ಟರ್, ಜೇವರ್ಗಿ ಕ್ಷೇತ್ರ ಶಿಕ್ಷಣಾಧಿಕಾರಿ ಮದರ್ ಖಾನ್ ಪಠಾಣ, ಜೇವರ್ಗಿ ಪುರಸಭೆ ಮುಖ್ಯ ಅಧಿಕಾರಿ ಶಂಭುಲಿಂಗ ದೇಸಾಯಿ, ಖ್ಯಾತ ಗಣಕ ವಿಜ್ಞಾನಿ, ತೋಂಟದಾರ್ಯ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಮತ್ತು ಡಿಜೈನ ವಿಭಾಗದ ಪ್ರೊಫೆಸರ್ ವಿಜಯಕುಮಾರ್ ಮಾಲಗಿತ್ತಿ ಭಾಗವಹಿಸಲಿದ್ದಾರೆ ಎಂದು ಜಗದ್ಗುರು ತೋಂಟದಾರ್ಯ ವಿದ್ಯಾಪೀಠ ಸಂಸ್ಥೆಯ ಸ್ಥಾನಿಕ ಉಪಾಧ್ಯಕ್ಷರಾದ ಶಿವನಗೌಡ ಪಾಟೀಲ ಹಂಗರಗಿ ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here