ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವ ಗುಣ ರೂಢಿಸಿಕೊಳ್ಳಿ

0
159

ಕಲಬುರಗಿ: ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವ ಗುಣವನ್ನು ರೂಢಿಸಿಕೊಂಡು ತಾವು ಕಲಿಯುವ ವಿದ್ಯಾ ಸಂಸ್ಥೆಗಳಲ್ಲಿ ಸಿಕ್ಕಿದ ಅವಕಾಶಗಳನ್ನು ಸದುಪಯೋಗಿಸಿಕೊಂಡು ಉತ್ತಮ ವಿಚಾರಧಾರೆಯೊಂದಿಗೆ ಜ್ಞಾನ ಸಂಪಾದಿಸಿ ಉನ್ನತ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬಹುದು ಎಂದು ಹಿರಿಯ ಸಾಹಿತಿ ಡಾ. ಸ್ವಾಮಿರಾವ ಕುಲಕರ್ಣಿ ಹೇಳಿದರು.

ಎಕೆಆರ್ ದೇವಿ ವಿಜ್ಞಾನ ಪದವಿಪೂರ್ವ ಕಾಲೇಜಿನ ವತಿಯಿಂದ ಕಾಲೇಜಿನ ಆವರಣದಲ್ಲಿ ಬುಧವಾರ ಆಯೋಜಿಸಿದ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ಸಾಂಸ್ಕøತಿಕ ಸಂಭ್ರಮ’ ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

Contact Your\'s Advertisement; 9902492681

ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಜ್ಞಾನಕ್ಕಿಂತ ಮಿಗಿಲಾದದ್ದು ಯಾವುದು ಇಲ್ಲ. ವಿದ್ಯೆಯನ್ನು ಸಂಪಾದಿಸುವುದೆಂದರೆ ಅದೊಂದು ತಪಸ್ಸು. ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಮುಖ್ಯ. ಶಿಸ್ತಿನಿಂದ ಸಾಧನೆಗೈಯ್ಯಲು ಸಾಧ್ಯ. ವಿದ್ಯಾರ್ಥಿಗಳು ತಾವು ವಿದ್ಯಾರ್ಜನೆಗೈಯ್ಯುತ್ತಿರುವ ಸಂಸ್ಥೆಯನ್ನು ತಮ್ಮ ಮನೆಯಂತೆ ಪ್ರೀತಿ ಕಾಳಜಿಯಿಂದ ಗೌರವಿಸಬೇಕು ಎಂದು ಸಲಹೆ ನೀಡಿದರು.
ಕಾಲೇಜಿನ ಆಡಳಿತಾಧಿಕಾರಿ ವಿದ್ಯಾಸಾಗರ ದೇಶಮುಖ ಸಮಾರಮಭದ ಅಧ್ಯಕ್ಷತೆ ವಹಿಸಿದ್ದರು.

ಶರಣರಾಜ್ ಛಪ್ಪರಬಂದಿ, ಎಂ.ವಿ.ಎಸ್. ಸುಬ್ರಹ್ಮಣ್ಯಂ, ಕಿರಣ ಗೋಡಬಾಲೆ, ಡಾ. ಶಿವರಾಜ ಪಾಟೀಲ ಬಸವರಾಜ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here