ಬಿಸಿ ಬಿಸಿ ಸುದ್ದಿ

ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ

ಕಲಬುರಗಿ: ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಣದ ಪಾತ್ರ ಬಹಳ ಮುಖ್ಯವಿದೆ. ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹ ನೀಡುವುದು ಶಿಕ್ಷಕರ ಜವಾಬ್ದಾರಿ ಎಂದು ಕುಲಸಚಿವ ಡಾ. ಶರಣಪ್ಪ ಹೇಳಿದರು.

ಗುಲಬರ್ಗಾ ವಿಶ್ವವಿದ್ಯಾಲಯದ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ವಿಶ್ವವಿದ್ಯಾಲಯದ ಕನ್ನಡ ಪೂರ್ವ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಾರ್ಷಿಕೋತ್ಸವ 2023-24 ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿ ‘ಏಳಿ ಎದ್ದೇಳಿ ಗುರಿ ಮಟ್ಟುವ ತನಕ ನಿಲ್ಲದಿರಿ’ ಎಂಬ ಸ್ವಾಮಿ ವಿವೇಕಾನಂದರ ವಾಣಿಯಂತಹ ಮಾತುಗಳ ಪ್ರೇರಣೆ ಅಗತ್ಯವಿದೆ. ಮಕ್ಕಳಲ್ಲಿ ಶಿಸ್ತು ಮತ್ತು ಅಧ್ಯಯನದ ಕಡೆಗೆ ಆಸಕ್ತಿ ಬೆಳೆಸಬೇಕು ಎಂದರು.

ಗೌರವ ಉಪಸ್ಥಿತಿವಹಿಸಿದ ವಿತ್ತಾಧಿಕಾರಿ ಪ್ರೊ. ರಾಜನಳ್ಕರ್ ಲಕ್ಷ್ಮಣ ಮಾತನಾಡಿ ಮಕ್ಕಳಿಗೆ ಪಠ್ಯದ ಜೊತೆಗೆ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವಿಕೆಯಿಂದ ಸೃಜನಶೀಲ ಮನಸ್ಸು ಬೆಳೆಯುತ್ತದೆ. ಅದಕ್ಕೆ ಪೋಷಕರು ಮತ್ತು ಶಿಕ್ಷಕರ ಪ್ರೋತ್ಸಾಹ ಅಗತ್ಯ ಎಂದರು. 0 ಶಾಲಾ ಮೇಲುಸ್ತುಧಾರರಾದ ಡಾ. ಚಂದ್ರಕಾಂತ ಬಿರಾದಾರ ಮಾತನಾಡಿದರು.

ಪ್ರಾಥಮಿಕ ಶಾಲೆಯ ಶಿಕ್ಷಕ ಸೂರ್ಯಕಾಂತ್ ಅಮರೆ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತವಿಕವಾಗಿ ಮಾತನಾಡಿದರು. ಸಿಂಡಿಕೇಟ್ ಸದಸ್ಯ ರಾಘವೇಂದ್ರ ಎಂ ಭೈರಪ್ಪ, ಶಾಲಾ ಸುಧಾರಣಾ ಸಮಿತಿ ಸದಸ್ಯರಾದ ಪ್ರೊ. ದೇವಿದಾಸ ಮಾಲೆ, ಬಿ. ಎಂ. ರುದ್ರವಾಡಿ, ಕಲಬುರಗಿ ದಕ್ಷಿಣ ವಲಯ ಸಮೂಹ ಸಂಪನ್ಮೂಲ ಅಧಿಕಾರಿ ಶ್ರೀಮತಿ ಈರಮ್ಮ ಉಪಸ್ಥಿತರಿದ್ದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕನ್ನಡ ಪೂರ್ವ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪೋಷಕರು, ವಿಶ್ವವಿದ್ಯಾಲಯದ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿ ಭಾಗವಹಿಸಿದ್ದರು.

ಕುಮಾರಿ ಪುಷ್ಪ ಅಂಕುಶ್ ಪ್ರಾರ್ಥಿಸಿದರು.ಶಿವಕುಮಾರ್ ಬಿ. ಸಾವಳಗಿ ವಂದಿಸಿದರು. ನಾಗೇಂದ್ರಪ್ಪ ಪಾಟೀಲ್ ಕಾರ್ಯಕ್ರಮ ನಿರ್ವಹಿಸಿದರು.

emedialine

Recent Posts

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

19 mins ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

21 mins ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

26 mins ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

29 mins ago

ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಬೇಡಿ

ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…

31 mins ago

ಸೇಡಂ: `ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭ ನಾಳೆ

ಸೇಡಂ (ಕಲಬುರಗಿ);  ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…

53 mins ago