ಬಿಸಿ ಬಿಸಿ ಸುದ್ದಿ

ನಿಸ್ವಾರ್ಥ ಸೇವೆಯ ಸಂಕಲ್ಪದೊಂದಿಗೆ ಕಾರ್ಯಪ್ರವೃತ್ತರಾಗಿ: ಪ್ರೊ. ದಯಾನಂದ ಅಗಸರ

ಕಲಬುರಗಿ: ರಾಷ್ಟ್ರೀಯ ಸೇವಾ ಯೋಜನೆ ಶಿಬಿರಗಳಲ್ಲಿ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯಿಂದ ಸ್ಪರ್ಧಾ ಮನೋಭಾವ ಜೊತೆಗೆ ಆತ್ಮಸ್ಥೈರ್ಯ ಬೆಳೆಯುತ್ತದೆ. ‘ನನಗಾಗಿ ಅಲ್ಲ ನಿಮಗಾಗಿ’ ಎಂಬ ಸಂಕಲ್ಪದೊಂದಿಗೆ ನಿಸ್ವಾರ್ಥ ಸೇವೆಗೆ ಕಾರ್ಯಪ್ರವೃತ್ತರಾಗಿ ಎಂದು ಗುಲಬರ್ಗಾ ವಿಶ್ವವಿದ್ಯಾಲಯ ಕುಲಪತಿ ಪ್ರೊ. ದಯಾನಂದ ಅಗಸರ ಹೇಳಿದರು.

ಗುಲಬರ್ಗಾ ವಿಶ್ವವಿದ್ಯಾಲಯದ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ರಾಷ್ಟ್ರೀಯ ಸೇವಾ ಯೋಜನೆ ಕೋಶ ಹಾಗೂ ಗುಲಬರ್ಗಾ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕ ಇವುಗಳ ಸಹಯೋಗದಲ್ಲಿ ಆಯೋಜಿಸಿದ “ರಾಷ್ಟ್ರೀಯ ಭಾವೈಕ್ಯತಾ ಶಿಬಿರ” ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಭವಿಷ್ಯದ ಕನಸನ್ನು ನನಸಾಗಿಸಿಕೊಳ್ಳಲು ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಎನ್‌ಎಸ್‌ಎಸ್ ಮತ್ತು ಎನ್‌ಸಿಸಿ ಶಿಬಿರಗಳಲ್ಲಿ ತೊಡಗಿಸಿಕೊಂಡರೆ ಬಹುಮುಖ ವ್ಯಕ್ತಿತ್ವ ಬೆಳೆಸಿಕೊಳ್ಳಲು ಪ್ರೇರಣೆಯಾಗಲಿದೆ. ಯುವ ಸಮೂಹ ಸಾಧನೆಗೆ ಸ್ಪೂರ್ತಿ ದೊರೆಯಲಿದೆ. ಕರ್ನಾಟಕ ಸೇರಿದಂತೆ ತಮಿಳುನಾಡು, ತೆಲಂಗಾಣ, ಮಹರಾಷ್ಟ್ರ, ಮಧ್ಯಪ್ರದೇಶ ಮತ್ತು ಒರಿಸ್ಸಾ ರಾಜ್ಯದ ಪ್ರತಿನಿಧಿಗಳಾಗಿ ಆಗಮಿಸಿರುವ ವಿದ್ಯಾರ್ಥಿಗಳ ವಿಭಿನ್ನ ಸಂಸ್ಕೃತಿ ವಿನಿಮಯ ಜೊತೆಗೆ ಭಾತೃತ್ವ ಮತ್ತು ಐಕ್ಯತಾ ಮನೋಭಾವನೆ ವೃದ್ಧಿಗೊಳ್ಳಲಿದೆ ಎಂದ ಅವರು ಈ ಶಿಬಿರದಿಂದ ಉನ್ನತ ಕಲಿಕೆ ಪ್ರೋತ್ಸಾಹದ ಜೊತೆಗೆ ವೈವಿಧ್ಯಮಯ ಜ್ಞಾನ ಸಿಗಲಿದೆ. ಆದರಿಂದ ಶಿಬಿರಾರ್ಥಿಗಳು ಭವಿಷ್ಯದ ಕನಸನ್ನು ಈಡೇರಿಸಿಕೊಳ್ಳಲು ಮಹಾತ್ಮ ಗಾಂದಿ ಅವರ ಕಲ್ಪನೆಯಂತೆ ರಾಷ್ಟ್ರಸೇವೆ ಮತ್ತು ಭಾವೈಕ್ಯತಾ ಮನೋಭಾವನೆಯನ್ನು ರೂಪಿಸಿಕೊಳ್ಳಬೇಕು ಎಂದರು.

ಗುಲಬರ್ಗಾ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಹಾಗೂ ವಿದ್ಯಾ ವಿಷೇಯಕ ಪರಿಷತ್ತ ಸದಸ್ಯ ಪ್ರೊ. ಎನ್. ಬಿ ನಡುವಿನಮನಿ ಮಾತನಾಡಿ ಭಾರತದ ಸಂವಿಧಾನದ ಆಶಯದಂತೆ ದೇಶ ಪ್ರಗತಿ ಸಾಧಿಸಲು ಯುವಕರಲ್ಲಿ ತಾಳ್ಮೆ ಮತ್ತು ಸಹನೆ ಗುಣಗಳನ್ನು ಅಳವಡಿಸಿಕೊಳ್ಳಬೇಕು. ಜೊತೆಗೆ ಸಾಂವಿಧಾನಿಕ ನೀತಿ ಮತ್ತು ಮೌಲ್ಯಗಳನ್ನು ಪಾಲಿಸಬೇಕು. ಸಮಾಜ ಸೇವೆಗೆ ಸಕ್ರಿಯವಾಗಿ ಸಮರ್ಪಿಸಿಕೊಳ್ಳಲು ರಾಷ್ಟ್ರೀಯ ಭಾವೈಕ್ಯತೆ ಮತ್ತು ಸಾಮಾಜಿಕ ಸಾಮರಸ್ಯ ಮನೋಭಾವನೆಯನ್ನು ವಿದ್ಯಾರ್ಥಿ ಜೀವನದಲ್ಲಿ ಬೆಳೆಸಿಕೊಳ್ಳಬೇಕಿದೆ. ದೇಶದ ಪ್ರತಿಯೊಬ್ಬ ಪ್ರಜೆ ಆರ್ಥಿಕ ಸ್ವಾತಂತ್ರ್ಯ ಸಾಮಾಜಿಕ ಸ್ವಾತಂತ್ರ್ಯ ಮತ್ತು ಧಾರ್ಮಿಕ ಸ್ವಾತಂತ್ರ್ಯ ಪಡೆದಾಗ ಮಾತ್ರ ರಾಷ್ಟ್ರ ಸಮಗ್ರ ಬೆಳವಣಿಗೆ ಸಾಧಿಸಲು ಸಾಧ್ಯವಾಗುತ್ತದೆ ಎಂದರು.

ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಕೋಶದ ಸಂಯೋಜಕ ಡಾ. ಎನ್.ಜಿ. ಕಣ್ಣೂರು ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕುಲಸಚಿವ ಡಾ. ಬಿ. ಶರಣಪ್ಪ ಉಪಸ್ಥಿತರಿದ್ದರು.

ವಿಶ್ವವಿದ್ಯಾಲಯದ ಗ್ರಂಥಾಲಯದಿಂದ ಕಾರ್ಯಸೌಧದವರೆಗೆ ರಾಸೇಯೋ ಶಿಬಿರಾರ್ಥಿಗಳು ಜಾಥಾ ಮೆರವಣಿಗೆ ನಡೆಸಲಾಯಿತು. ವಿವಿಧ ರಾಜ್ಯಗಳ ಸ್ವಯಂ ಸೇವಕರು, ತಂಡದ ಮಾರ್ಗದರ್ಶಕರು ಭಾಗವಹಿಸಿದ್ದರು. ಎಂಎಸ್‌ಐ ಪದವಿ ಕಾಲೇಜಿನ ಎನ್‌ಎಸ್‌ಎಸ್ ಅಧಿಕಾರಿ ಡಾ. ಪ್ರಾಣೇಶ್ ಕಾರ್ಯಕ್ರಮ ನಿರ್ವಹಿಸಿದರು. ಗುವಿವಿಯ ಸಂಗೀತ ವಿಭಾಗದ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಡಾ. ಮೇರಿ ಮೆಥೋಸ್ ಅತಿಥಿ ಪರಿಚಯಿಸಿದರು. ಶಿಬಿರಾರ್ಥಿಗಳು ಎನ್‌ಎಸ್‌ಎಸ್ ಗೀತೆ ಪ್ರಸ್ತುತಪಡಿಸಿದರು. ಕೊನೆಯಲ್ಲಿ ರಾಷ್ಟ್ರಗೀತೆ ಹಾಡಿದರು.

ರಾಷ್ಟ್ರೀಯ ಭಾವೈಕ್ಯತಾ ಶಿಬಿರದಲ್ಲಿ ರಾಜ್ಯಗಳಿಂದ ಸುಮಾರು 140 ಶಿಬಿರಾರ್ಥಿಗಳು ಒಳಗೊಂಡಂತೆ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ರಾಸೇಯೋ ಅಧಿಕಾರಿಗಳು ಹಾಗೂ ಸ್ವಯಂಸೇವಕರು ಭಾಗವಿಸಿದ್ದರು.

ಏಳು ದಿನಗಳ ಈ ಶಿಬಿರದಲ್ಲಿ ರಾಷ್ಟ್ರೀಯ ಭಾವೈಕ್ಯತೆ, ಐಕ್ಯತಾ ಮತ್ತು ರಾಷ್ಟ್ರ ಸೇವಾ ಮನೋಭಾವ ಬೆಳೆಸುವು ನಿಟ್ಟಿನಲ್ಲಿ ವಿಷಯ ಪರಿಣಿತರಿಂದ ವಿಶೇಷ ಉಪನ್ಯಾಸಗಳನ್ನು ಆಯೋಜಿಸಲಾಗಿದೆ. ಯೋಗ, ಶ್ರಮದಾನ ಕಾರ್ಯಕ್ರಮಗಳ ಜೊತೆಗೆ ವಿವಿಧ ರಾಜ್ಯಗಳ ಸಂಸ್ಕೃತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. -ಡಾ. ಎನ್. ಈ. ಕಣ್ಣೂರು*
ರಾಸೇಯೋ ಸಂಯೋಜಕರು, ಗುಲಬರ್ಗಾ ವಿಶ್ವವಿದ್ಯಾಲಯ, ಕಲಬುರಗಿ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

20 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago