ಕಲಬುರಗಿ; ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ಗುಲಬರ್ಗಾ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕನೀಜ್ ಫಾತೀಮಾ ಅವರು ಬೆಂಗಳೂರಿನಿಂದ ಸ್ಟಾರ್ ವಿಮಾನದ ಮೂಲಕ ಫೆಬ್ರವರಿ 9 ರಂದು ಶುಕ್ರವಾರ ಬೆಳಿಗ್ಗೆ 9.35 ಗಂಟೆಗೆ ಕಲಬುರಗಿಗೆ ಆಗಮಿಸುವರು.
ನಂತರ ಅಂದು ಬೆಳಿಗ್ಗೆ 11 ಗಂಟೆಗೆ ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವತಿಯಿಂದ ಏರ್ಪಡಿಸಿರುವ ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ 4 ಗಂಟೆಗೆ ಕಲಬುರಗಿ ಜಿಲ್ಲಾ ಕಾಂಗ್ರೆಸ್ ಘಟಕದ ವತಿಯಿಂದ ಏರ್ಪಡಿಸಲಾಗಿರುವ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ಫೆಬ್ರವರಿ 10 ರಂದು ಶನಿವಾರ ಬೆಳಿಗ್ಗೆ 11 ಗಂಟೆಗೆ ಕಲಬುರಗಿ ತಾಲೂಕಿನ ಜಾಫರಾಬಾದ್ ಗ್ರಾಮದ ಸರ್ವೇ ನಂ. 21 ರಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ಹೈಟೆಕ್ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆ ಸ್ಥಳ ವೀಕ್ಷಣೆ ಮಾಡುವರು. ನಂತರ ಸಾರ್ವಜನಿಕ ಕುಂದುಕೊರತೆ ವಿಚಾರಣೆ ಹಾಗೂ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ಫೆಬ್ರವರಿ 11 ರಂದು ಭಾನುವಾರ ಬೆಳಿಗ್ಗೆ 11 ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಮೇಲ್ವಿಚರಣಾ ಸಮಿತಿ (ದಿಶಾ) ಸಭೆಯಲ್ಲಿ ಭಾಗವಹಿಸುವರು. ನಂತರ ಸಂಜೆ 5 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಹೈದ್ರಾಬಾದಿಗೆ ಪ್ರಯಾಣಿಸುವರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…