ಗ್ಯಾರಂಟಿ ಯೋಜನೆಗಳಿಂದಾಗಿ ಜನರ ಆರ್ಥಿಕತೆ ಸದೃಢತೆಯಾಗುತ್ತಿದೆ; ಸಚಿವ ಪ್ರಿಯಾಂಕ್ ಖರ್ಗೆ

0
23

ಕಲಬುರಗಿ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದಾಗಿ ಜನರ ಆರ್ಥಿಕ ಸದೃಢತೆಗೆ ಕಾರಣವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲೆ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳಿ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಕಲಬುರಗಿ ವತಿಯಿಂದ ಆಯೋಜಿಸಲಾಗಿದ್ದ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

Contact Your\'s Advertisement; 9902492681

ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ 5,22,171 ಜನ ಫಲಾನುಭವಿ ಮಹಿಳೆಯರು ಲಾಭ ಪಡೆಯುತ್ತಿದ್ದಾರೆ. ಅನ್ನ ಭಾಗ್ಯ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ 19,16,144 ಫಲಾನುಭವಿಗಳು ಲಾಭ ಪಡೆಯುತ್ತಿದ್ದಾರೆ. ಶಕ್ತಿ ಯೋಜನೆಯಡಿಯಲ್ಲಿ ಪ್ರತಿನಿತ್ಯ ರಾಜ್ಯಾದ್ಯಂತ 60 ಲಕ್ಷ ಮಹಿಳೆಯರು, ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 21.05 ಕೋಟಿ ಮಹಿಳೆಯರು ಹಾಗೂ ಕಲಬುರಗಿ ಜಿಲ್ಲೆಯಲ್ಲಿ 4.27 ಕೋಟಿ ಮಹಿಳೆಯರು ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ 650 ಕೋಟಿ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಬೇಕಿತ್ತು ಅದರಲ್ಲಿ ಇನ್ನೂ 240 ಕೋಟಿ ಅನುದಾನ ಬಿಡುಗಡೆ ಮಾಡಬೇಕಿದೆ. ಯುವನಿಧಿ ಯೋಜನೆಯ ಲಾಭ ಪಡೆಯಲು ಜಿಲ್ಲೆಯಲ್ಲಿ 7,146 ವಿದ್ಯಾರ್ಥಿಗಳು ತಮ್ಮ ಹೆಸರು ನೋಂದಾಯಿಸಿದ್ದಾರೆ. ಗೃಹಜ್ಯೋತಿ ಯೋಜನೆಯಡಿಯಲ್ಲಿ ಕಲಬುರಗಿ ನಗರ ಹಾಗೂ ಗ್ರಾಮೀಣ ವ್ಯಾಪ್ತಿಯಲ್ಲಿ 5,28,530 ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ‌ ಎಂದರು.

” ಕೇಂದ್ರ ಸರ್ಕಾರ ಅನುದಾನ ನೀಡುವಲ್ಲಿ ತಾರತಮ್ಯ ಮಾಡುತ್ತಿದ್ದು ಇದರ ವಿರುದ್ದ’ ನನ್ನ ತೆರಿಗೆ ನನ್ನ ಹಕ್ಕು ‘ಘೋಷಣೆಯೊಂದಿಗೆ ರಾಜ್ಯ ಸರ್ಕಾರ ಕೇಂದ್ರದ ವಿರುದ್ದ ದೆಹಲಿಯಲ್ಲಿ ಪ್ರತಿಭಟನೆ ಮಾಡಲಾಯಿತು. ಕರ್ನಾಟಕ ಪ್ರತಿವರ್ಷ ಕೇಂದ್ರಕ್ಕೆ ತೆರಿಗೆ ರೂಪದಲ್ಲಿ
4.30 ಲಕ್ಷ ಕೋಟಿಯಲ್ಲಿ ಕೊಟ್ಟರೆ ಕೇಂದ್ರ ನಮ್ಮ ರಾಜ್ಯಕ್ಕೆ ಅನುದಾನದ ರೂಪದಲ್ಲಿ ಕೇವಲ 44,000 ಕೋಟಿ ಮಾತ್ರ ಕೊಡುತ್ತಿದೆ.

ತುಂಬಾ ಸರಳವಾಗಿ ಹೇಳುವುದಾದರೆ, ರೂ 100 ರಲ್ಲಿ ನಮ್ಮ ಕರ್ನಾಟಕಕ್ಕೆ ಕೇವಲ 13 ರೂ ಮಾತ್ರ ವಾಪಸ್ ಬರುತ್ತಿದೆ. ಆದರೆ, ಅದೇ ಉತ್ತರ ಪ್ರದೇಶಕ್ಕೆ‌ 330 ರೂಪಾಯಿ, ಮಧ್ಯಪ್ರದೇಶಕ್ಕೆ‌ 292 ರೂಪಾಯಿ, ಬಿಹಾರಕ್ಕೆ 972 ರೂಪಾಯಿ, ಓಡಿಶಾಕ್ಕೆ 197 ರೂಪಾಯಿಯನ್ನು ಕೇಂದ್ರ ನೀಡುತ್ತಿದೆ. ಈ ತಾರತಮ್ಯದ ವಿರುದ್ದ ಹೋರಾಟ ಮಾಡಿದರೆ ನಮ್ಮನ್ನೇ ದೇಶ ಒಡೆಯುವವರು ಹಾಗೂ ದೇಶದ್ರೋಹಿಗಳು ಎಂದು ನಮ್ಮನ್ನು ಕರೆಯುತ್ತಿದ್ದಾರೆ” ಎಂದು ಟೀಕಿಸಿದರು.

ಸಾರಿಗೆ ನೌಕರರ ಬೇಡಿಕೆ‌ ಕುರಿತಂತೆ ಭರವಸೆ ನೀಡಿದ ಖರ್ಗೆ, ನೀವೆಲ್ಲ ಈಗಾಗಲೇ ಬೇಡಿಕೆ ಪಟ್ಟಿಯನ್ನು ಸಾರಿಗೆ ಸಚಿವರಿಗೆ ಸಲ್ಲಿಸಿದ್ದೀರಿ, ಈ ಬಗ್ಗೆ ಸಚಿವರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ವೇದಿಕೆಯ ಮೇಲೆ ಸಚಿವರಾದ ಶಾಸಕರಾದ ಎಂ ವೈ ಪಾಟೀಲ, ಅಲ್ಲಮಪ್ರಭು ಪಾಟೀಲ, ಕನೀಜ್ ಫಾತೀಮಾ, ತಿಪ್ಪಣ್ಣಪ್ಪ ಕಮಕನೂರು, ಜಗದೇವ ಗುತ್ತೇದಾರ, ಕೆಕೆಆರ್ ಟಿಸಿ ಎಂಡಿ ರಾಚಪ್ಪ, ಚಂದ್ರಕಾಂತ ಗದ್ದಿಗಿ, ಸಂಗಮನಾಥ ರಬಶೆಟ್ಟಿ ಸೇರಿದಂತೆ ಹಲವರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here