ಆಳಂದ; ಖಜೂರಿ ಬಾರ್ಡರ್‍ನಿಂದ ಆಳಂದಕ್ಕೆ ಸಂಪರ್ಕ ಕಲ್ಪಿಸುವ ಚಿತಲಿ ಕ್ರಾಸ್ ಮಧ್ಯದಲ್ಲಿ ಕಳಪೆ ರಸ್ತೆ ರಿಪೇರಿ ಮಾಡಲಾಗಿದೆ ಎಂದು ನಾಗರಿಕರು ಆರೋಪಿಸಿದ್ದಾರೆ.
ಈ ಕುರಿತು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಪತ್ರ ಬರೆದಿರುವ ನಾಗರಿಕರು, ಖಜೂರಿ ಬಾರ್ಡರ್‍ನಿಂದ ಆಳಂದ ಮಾರ್ಗದ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ರಸ್ತೆಯ ಮಧ್ಯದಲ್ಲಿ ಅಲ್ಲಲ್ಲಿ ತೆಗ್ಗುಗಳು ಬಿದ್ದಿವೆ. ಅನೇಕ ಅಪಘಾತಗಳು ಸಂಭವಿಸಿವೆ. ಅನೇಕ ಜನರು ಪ್ರಾಣವನ್ನು ಕಳೆದುಕೊಂಡಿದ್ದಾರೆ.
ಆದರೆ 8ನೇ ಫೆಬ್ರುವರಿ 2024ರಂದು ರಸ್ತೆಯ ಮಧ್ಯದಲ್ಲಿ ಬರುವ ಚಿತಲಿ- ತೇಲಾಕುಣಿ ಮಾರ್ಗದಲ್ಲಿ ತೆಗ್ಗು ಬಿದ್ದ ಮೂರು ಸ್ಥಳಗಳಲ್ಲಿ ರಸ್ತೆ ರಿಪೇರಿ ಮಾಡಿದ್ದಾರೆ ಆದರೆ ಅತ್ಯಂತ ಕಳಪೆ ಮಟ್ಟದಿಂದ ರಿಪೇರಿ ಮಾಡಿದ್ದಾರೆ. ರಿಪೇರಿ ಮಾಡಿದ ಕೆಲವೇ ಘಂಟೆಗಳಲ್ಲಿ ಅದು ಕಿತ್ತು ಬಂದಿದೆ. ಅಲ್ಲದೇ ರಿಪೇರಿ ಕೆಲಸಕ್ಕೆ ಕೇವಲ ಸಿಮೆಂಟ್ ಮತ್ತು ಉಸುಕು ಬಳಸಿದ್ದಾರೆ ಎಂದು ಆರೋಪಿಸಿದ್ದಾರೆ.
ಆಳಂದ- ಖಜೂರಿ ಬಾರ್ಡರ್ ಮಧ್ಯದಲ್ಲಿ ಕಳಪೆ ರಸ್ತೆ ರಿಪೇರಿ ಮಾಡಿರುವ ಗುತ್ತಿಗೆದಾರರ ಬಿಲ್ ತಡೆ ಹಿಡಿಯಬೇಕು ಒಂದು ವೇಳೆ ಈ ಕೆಲಸವನ್ನು ವಾರ್ಷಿಕ ನಿರ್ವಹಣಾ ವೆಚ್ಚದಲ್ಲಿ ಕೈಗೊಂಡಿದ್ದರೇ ಅದನ್ನು ಕೂಡ ಇಲಾಖೆ ಮತ್ತೊಮ್ಮೆ ಉತ್ತಮ ಗುಣಮಟ್ಟದ ಸಿಮೆಂಟ್, ಉಸುಕು ಹಾಗೂ ಕಾಂಕ್ರೀಟ್ ಬಳಸಿ ರಸ್ತೆ ರಿಪೇರಿ ಮಾಡಬೇಕು.
ಇಲ್ಲದಿದ್ದರೇ ಸಾರ್ವಜನಿಕರೊಂದಿಗೆ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ಲೋಕೋಪಯೋಗಿ ಇಲಾಖೆಗೆ ಬರೆದಿರುವ ಪತ್ರಕ್ಕೆ ಬಿಜೆಪಿ ಯುವ ಮೋರ್ಚಾ ತಾಲೂಕಾ ಉಪಾಧ್ಯಕ್ಷ ಪ್ರಕಾಶ ತೋಳೆ, ಕರವೇ ಅಧ್ಯಕ್ಷ ಈರಣ್ಣ ಆಳಂದ, ಮಲ್ಲಿನಾಥ ಶೇಗಜೀ ಸಹಿ ಮಾಡಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…