ತುಮಕೂರು; 13ರಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ಸಿಟ್ಟಿಂಗ್ಸ್

0
17

ಬೆಂಗಳೂರು; ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಲ್ಲಿ ನೊಂದವರಿಗೆ ಸೂಕ್ತ ನೆರವನ್ನು ಒದಗಿಸುವ ನಿಟ್ಟಿನಲ್ಲಿ 1993ರ ಮಾನವ ಹಕ್ಕುಗಳ ಸಂರಕ್ಷಣಾ ಅಧಿನಿಯಮದ ಅಡಿಯಲ್ಲಿ ಸ್ಥಾಪಿತವಾಗಿರುವ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗವು ಫೆಬ್ರವರಿ 13 ರಂದು ತುಮಕೂರು ಜಿಲ್ಲೆಯಲ್ಲಿ ಸಿಟ್ಟಿಂಗ್ಸ್ ನಡೆಸಲು ಉದ್ದೇಶಿಸಿರುತ್ತದೆ.

ಈ ಸಂದರ್ಭದಲ್ಲಿ ತುಮಕೂರು ಜಿಲ್ಲೆಗೆ ಸಂಬಂಧಿಸಿದಂತೆ ಆಯೋಗದಲ್ಲಿ ನೋಂದಣಿಯಾಗಿರುವ ಪ್ರಕರಣಗಳನ್ನು ಆಯಾ ಜಿಲ್ಲೆಯಲ್ಲಿ ಇತ್ಯರ್ಥಪಡಿಸಿ, ವಿಲೇ ಮಾಡಲು ಕ್ರಮ ಜರುಗಿಸಲು ಉದ್ದೇಶಿಸಲಾಗಿದೆ. ದೂರುದಾರರು ಹಾಗೂ ಪ್ರತಿವಾದಿ ಪ್ರಾಧಿಕಾರಗಳು ಈ ಸೌಲಭ್ಯದ ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಲಾಗಿದೆ.

Contact Your\'s Advertisement; 9902492681

ಮಾನವ ಹಕ್ಕು ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಸದರಿ ಜಿಲ್ಲೆಗಳಲ್ಲಿನ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತುಮಕೂರು ಜಿಲ್ಲೆಯಲ್ಲಿಯೇ ಸಾರ್ವಜನಿಕರಿಂದ ದೂರುಗಳು / ಅಹವಾಲುಗಳನ್ನು ಸಹ ಸ್ವೀಕರಿಸಲು ಉದ್ದೇಶಿಸಲಾಗಿದೆ. ಸಾರ್ವಜನಿಕರು ತುಮಕೂರು ಜಿಲ್ಲೆಯಲ್ಲಿ ನಿಗದಿತ ದಿನಾಂಕಗಳಂದು ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರುಗಳನ್ನು ಸಂಪರ್ಕಿಸಿ, ದೂರುಗಳನ್ನು ಸಲ್ಲಿಸಬಹುದು ಎಂದು ಆಯೋಗದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here