ಬಿಸಿ ಬಿಸಿ ಸುದ್ದಿ

ಗುವಿವಿಯ 44ನೇ ಸಂಸ್ಥಾಪನಾ ದಿನ ಆಚರಣೆ; ಉದ್ಯೋಗಶೀಲ ಕೌಶಲ್ಯ ಜ್ಞಾನ ಅಗತ್ಯ

ಕಲಬುರಗಿ: 21ನೇ ಶತಮಾನದದಲ್ಲಿ ಜಾಗತಿಕ ಹಂತದಲ್ಲಿ ಶೈಕ್ಷಣಿಕ ಅಭಿವೃದ್ಧಿ ಮತ್ತು ಭವಿಷ್ಯದ ಉನ್ನತ ಶಿಕ್ಷಣದ ಬಲವರ್ಧನೆಗೆ ಪೂರಕವಾದ ಆಲೋಚನೆ ಮತ್ತು ವಿಸ್ತೃತ ಚಿಂತನೆಗಳು ಜಗತ್ತಿನಲ್ಲಿ ನಡೆಯುತ್ತಿವೆ. ಗುಣಮಟ್ಟದ ಉನ್ನತ ಶಿಕ್ಷಣದ ಮೂಲಕ ಉದ್ಯೋಗ ಅವಕಾಶಗಳನ್ನು ಪಡೆಯಲು ಅಗತ್ಯವಿರುವ ಜ್ಞಾನ ವೃದ್ಧಿ ಮತ್ತು ನೈಪುಣ್ಯತೆಗೆ ಆದ್ಯತೆ ನೀಡಬೇಕು ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಎಂ. ಮುನಿಯಮ್ಮ ಹೇಳಿದರು.

ಗುಲಬರ್ಗಾ ವಿಶ್ವವಿದ್ಯಾಲಯದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ 44ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿ ವಿದೇಶಿ ವಿಶ್ವವಿದ್ಯಾಲಯಗಳು ಭವಿಷ್ಯದ ಶೈಕ್ಷಣಿಕ ಅಭಿವೃದ್ಧಿ, ಸಂಶೋಧನೆ ವಿಸ್ತರಣೆ, ಉದ್ಯೋಗಾಧಾರಿತ ಶಿಕ್ಷಣ ಮತ್ತು ಕೌಶಲ್ಯ ಜ್ಞಾನದ ಅವಶ್ಯಕತೆ ಕುರಿತು ಚಿಂತನೆ ನಡೆಸುತ್ತಿವೆ. ಆದರಿಂದ ಭವಿಷ್ಯದ ಹೊಸ ಕೋರ್ಸುಗಳು, ಉದ್ಯೋಗ ಸೃಷ್ಠಿ, ಕೌಶಲ್ಯ ಅಭಿವೃದ್ಧಿ, ಸಂಶೋಧನೆ ಕ್ಷೇತ್ರಗಳ ಪ್ರಗತಿ ಸಾಧನೆಗೆ ಅಗತ್ಯವಿರುವ ಅನುದಾನವನ್ನು ಸರ್ಕಾರದಿಂದ ಪಡೆಯುವ ಮೂಲಕ ಆರ್ಥಿಕ ಸಂಪನ್ಮೂಲಗಳನ್ನು ಯಶಸ್ವಿಯಾಗಿ ಬಳಕೆ ಮಾಡಿಕೊಳ್ಳಬೇಕು ಎಂದರು.

ವಿದ್ಯಾರ್ಥಿ ಸಮುದಾಯ ಕುವೆಂಪು ಅವರ ವಿಶ್ವಮಾನವ ಚಿಂತನೆಯನ್ನು ಅರ್ಥಮಾಡಿಕೊಂಡು ಭವಿಷ್ಯದಲ್ಲಿನ ಯಶಸ್ಸಿಗೆ ದೂರದೃಷ್ಠಿ, ವಿಭಿನ್ನ ಆಲೋಚನೆ ಮತ್ತು ನಾಯಕತ್ವದ ಗುಣವನ್ನು ಮೈಗೂಡಿಸಿಕೊಳ್ಳಬೇಕು. ಉದ್ಯಮ ಮತ್ತು ಕೈಗಾರಿಕೆ ಸಂಸ್ಥೆಗಳು ವೃತ್ತಿಕಾರ್ಯ ನೈಪುಣ್ಯತೆ, ಸಮಯೋಚಿತ ಜ್ಞಾನ, ಕಾರ್ಯ ತಂತ್ರಗಳಿಗೆ ಆದ್ಯತೆ ನೀಡುತ್ತಿವೆ. ಆದರಿಂದ ವಿದ್ಯಾರ್ಥಿಗಳು ವೃತ್ತಿ ಪೂರಕ ಜ್ಞಾನ ಮತ್ತು ಕೌಶಲ್ಯ ತರಬೇತಿಗೆ ವಿಶೇಷ ಆಸಕ್ತಿವಹಿಸಬೇಕು ಎಂದರು.

ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ದಯಾನಂದ ಅಗಸರ ಅಧ್ಯಕ್ಷತೆ ವಹಿಸಿ ಮಾತನಾಡಿ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿರುವ ಸಿಬ್ಬಂದಿಗಳ ಅವಿರತ ಶ್ರಮದಿಂದ ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಸಾಧನೆಯಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯ ಹೆಮ್ಮರವಾಗಿ ಬೆಳೆದಿದೆ. ಗುಣಮಟ್ಟದ ಬೋಧನೆ, ಸಂಶೋಧನೆ, ಪ್ರಕಟಣೆ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರಾಗಿದೆ. ಆದರೂ ನಮ್ಮ ಮುಂದೆ ಅನೇಕ ಸವಾಲುಗಳಿವೆ. ಅವುಗಳನ್ನು ಸಮರ್ಪಕವಾಗಿ ಎದುರಿಸಲು ಗುಣಮಟ್ಟದ ಪಠ್ಯಕ್ರಮ, ನಾವೀನ್ಯತೆ, ಪಠ್ಯದಲ್ಲಿ ಕೌಶಲ್ಯ ಅಳವಡಿಕೆ, ಪಠ್ಯಕ್ರಮ ಆಕಾರದೊಂದಿಗೆ ಸೃಜನಶೀಲತೆಗೆ ಆದ್ಯತೆ ನೀಡಲಾಗಿದೆ.

ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಠಿಯಿಂದ ಬೋಧನಾ ಕೌಶಲ್ಯ, ನಾವೀನ್ಯ ಚಿಂತನೆ ಮತ್ತು ಸಂಶೋಧನೆಗೆ ಒತ್ತು ನೀಡಲಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ಜಾಗತಿಕ ಜ್ಞಾನ ಕಲಿಕೆಗೆ ಪೂರಕ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಪ್ರೋತ್ಸಾಹಿಸಲಾಗುತ್ತಿದೆ. ಅದರ ಸದುಪಯೋಗ ವಿದ್ಯಾರ್ಥಿಗಳು ಯೋಗ್ಯ ರೀತಿಯಲ್ಲಿ ಬಳಸಿಕೊಂಡು ಪ್ರಾಯೋಗಿಕವಾಗಿ ಪ್ರಬುತ್ವ ಸಾಧಿಸಬೇಕು ಎಂದ ಅವರು ವಿವಿಯ ನಾಲ್ಕು ದಶಕಗಳ ಶೈಕ್ಷಣಿಕ ಸೇವೆಗೆ ಶ್ರಮಿಸಿದ ಸಿಬ್ಬಂದಿಗಳ ಸೇವೆಯನ್ನು ಸ್ಮರಿಸುವುದು ನಿಜಕ್ಕೂ ಹೆಮ್ಮೆಯ ವಿಷಯ ಎಂದರು.

ಗುಲಬರ್ಗಾ ವಿಶ್ವವಿದ್ಯಾಲಯದ ಕುಲಸಚಿವ ಡಾ. ಬಿ. ಶರಣಪ್ಪ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತವಿಕವಾಗಿ ಮಾತನಾಡಿ ವಿಶ್ವವಿದ್ಯಾಲಯ 43 ವಸಂತಗಳನ್ನು ಯಶಸ್ವಿಯಾಗಿ ಪೂರೈಸಿದೆ. ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಅನೇಕ ಶೈಕ್ಷಣಿಕ ಯೋಜನೆ, ಮೌಲಿಕ ಪ್ರಕಟಣೆ, ಸಂಶೋಧನೆ ಕ್ಷೇತ್ರ ವಿಸ್ತರಣೆ, ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ತರಬೇತಿ, ಕ್ರೀಡೆ, ಸಾಂಸ್ಕೃತಿಕಮತ್ತು ಪಠ್ಯೇತರ ಚಟುವಟಿಕೆಗಳಿಗೆ ವಿಶೇಷ ಪ್ರೋತ್ಸಾಹ ನೀಡುತ್ತಿದೆ. ಉನ್ನತ ಶಿಕ್ಷಣ ನೀಡಿಕೆ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೆ ವಿಶ್ವಾವಿದ್ಯಾಲಯ ಬೆನ್ನೆಲುಬಾಗಿ ನಿಂತಿದೆ ಎಂದರು.

ಗುಲಬರ್ಗಾ ವಿಶ್ವವಿದ್ಯಾಲಯದ ವಿದ್ಯಾ ವಿಷೇಯಕ ಪರಿಷತ್ ಸದಸ್ಯ ಪ್ರೊ. ಕೆ. ಲಿಂಗಪ್ಪ, ಮೌಲ್ಯಮಾಪನ ಕುಲಸಚಿವ ಪ್ರೊ. ಜ್ಯೋತಿ ಧಮ್ಮ ಪ್ರಕಾಶ್, ವಿತ್ತಾಧಿಕಾರಿ ಪ್ರೊ. ರಾಜನಾಳ್ಕರ್ ಲಕ್ಷ್ಮಣ ಉಪಸ್ಥಿತರಿದ್ದರು. ಜೈವಿಕ ತಂತ್ರಜ್ಞಾನ ವಿಭಾಗದ ಪ್ರಾಧ್ಯಾಪಕ ಪ್ರೊ. ಚಂದ್ರಕಾಂತ್ ಕೆಳಮನಿ ಅತಿಥಿ ಪರಿಚಯಿಸಿದರು. ವಿತ್ತಾಧಿಕಾರಿ ಪ್ರೊ. ರಾಜನಾಳ್ಕರ್ ಲಕ್ಷ್ಮಣ ಪ್ರಸಕ್ತ ಶೈಕ್ಷಣಿಕ ಸಾಲಿನ ವರದಿ ಮಂಡಿಸಿದರು.

ಸಂಶೋಧನೆ ಮತ್ತು ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಬಂಧ ಮಂಡಿಸಿ ವಿಶ್ವವಿದ್ಯಾಲಯಕ್ಕೆ ಕೀರ್ತಿ ತಂದಿರುವ ಹಾಗೂ ವಿವಿಧ ಕಾರ್ಯ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಪ್ರಾಧ್ಯಾಪಕರು ಹಾಗೂ ಶಿಕ್ಷಕೇತರ ಸಿಬಂಧಿಗಳನ್ನು ಅತಿಥಿಗಣ್ಯರು ಸನ್ಮಾನಿಸಿ ಅಭಿನಂದಿಸಿದರು. ನಿವೃತ್ತರಾದ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳನ್ನು ಈ ಸಂದರ್ಭದಲ್ಲಿ ಅತಿಥಿಗಳು ಸನ್ಮಾನಿಸಿದರು.

ಗುಲಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರು, ವಿದ್ಯಾವಿಷೇಯಕ ಪರಿಷತ್ ಸದಸ್ಯರು, ವಿವಿಧ ನಿಕಾಯಗಳ ಡೀನರು, ಸ್ನಾತಕೋತ್ತರ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ, ಸೇವಾ ನಿವೃತ್ತ ಸಿಬ್ಬಂದಿಗಳು, ಸ್ನಾತಕೋತ್ತರ ಹಾಗೂ ಸಂಶೋಧನಾ ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರು ಭಾಗವಹಿಸಿದ್ದರು.

ಸಂಗೀತ ವಿಭಾಗದ ಅತಿಥಿ ಉಪನ್ಯಾಸಕಿ ಡಾ. ದಾನಮ್ಮ ಹಾಗೂ ವಿದ್ಯಾರ್ಥಿಗಳು ನಾಡಗೀತೆ ಹಾಗೂ ವಿಶ್ವವಿದ್ಯಾಲಯ ಗೀತೆ ಹಾಡಿದರು. ಹಿಂದಿ ವಿಭಾಗದ ಮುಖ್ಯಸ್ಥೆ ಪ್ರೊ. ಪರಿಮಳ ಅಂಬೇಕರ್, ಜೈವಿಕ ತಂತ್ರಜ್ಞಾನ ವಿಭಾಗದ ಪ್ರಾಧ್ಯಾಪಕ ಪ್ರೊ. ಚಂದ್ರಕಾಂತ್ ಕೆಳಮನಿ ಕಾರ್ಯಕ್ರಮ ನಿರ್ವಹಿಸಿದರು. ವಂದಿಸಿದರು.

ಗುಲಬರ್ಗಾ ವಿವಿಯಲ್ಲಿ ಆಯೋಜಿಸಿರುವ ರಾಷ್ಟ್ರೀಯ ಭಾವಕ್ಯತಾ ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳು ಭರತನಾಟ್ಯ, ಬುಡಕಟ್ಟು ನೃತ್ಯಹಾಗೂ ಗುಲಬರ್ಗಾ ವಿಶ್ವವಿದ್ಯಾಲಯದ ಯುವಜನೋತ್ಸವ ತಂಡದ ಜಾನಪದ ಸಮೂಹ ನೃತ್ಯ ಪ್ರೇಕ್ಷಕರ ಮನಸೆಳೆಯಿತು.

ವಿಶ್ವವಿದ್ಯಾಲಯದ ಸಮಗ್ರ ಶೈಕ್ಷಣಿಕ ಸಾಧನೆಗೆ ವಿಶ್ವವಿದ್ಯಾಲಯ ವಿಶೇಷ ಒತ್ತು ನೀಡಿದೆ. ವಿದೇಶಿ ವಿಶ್ವವಿದ್ಯಾಲಯಗಳ ಜೊತೆಗೆ ಅಕಾಡೆಮಿಕ್ ಸ್ಟಾö್ಯಂಡರ್ಡ್ನ ಒಮ್ಮತದಿಂದ ಒಡಂಬಡಿಕೆ ಮತ್ತು ಒಪ್ಪಂದ ಮಾಡಿಕೊಳ್ಳಲಾಗಿದೆ. ಕೆಕೆಆರ್‌ಡಿಬಿಯಿಂದ ೨೧ಕೋಟಿ ಅನುದಾನ ದೊರೆತಿದ್ದು, ಗುಣಮಟ್ಟದ ಶಿಕ್ಷಣ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಬಳಕೆ ಮಾಡಲಾಗುತ್ತಿದೆ. ಉನ್ನತ ಶಿಕ್ಷಣದ ಉತ್ಕೃಷ್ಠತೆಗೆ ಪೂರಕ ಪಠ್ಯಕ್ರಮದ ಆಕಾರ ಮತ್ತು ನಾವೀನ್ಯತೆ, ಬೋಧನೆಯಲ್ಲಿ ಕೌಶಲ್ಯ ಕಲಿಕೆ ಮಹತ್ವ ನೀಡಲಾಗಿದೆ. ಜೊತೆಗೆ ನ್ಯಾಕ್‌ನ ನಾಲ್ಕನೇ ಆವೃತ್ತಿಗೆ ಈಗಾಗಲೇ ಸಿದ್ಧತೆ ನಡೆದಿದೆ. ಸಿಬ್ಬಂದಿ ನೇಮಕಾತಿ ಪ್ರಕ್ರಿಯೆಗೆ ಎಲ್ಲಾ ತಯಾರಿಯೊಂದಿಗೆ ಅಂತಿಮಗೊಳಿಸಲಾಗುತ್ತಿದೆ. – ಪ್ರೊ. ದಯಾನಂದ ಅಗಸರ, ಕುಲಪತಿ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

8 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

8 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

8 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago