ಬಿಸಿ ಬಿಸಿ ಸುದ್ದಿ

ಎಸ್‍ಸಿಎಸ್‍ಪಿ-ಟಿಎಸ್‍ಪಿ ಅನುದಾನ ಸಮರ್ಪಕ ಬಳಸಿ; ಜಿಲ್ಲಾಧಿಕಾರಿ ಬಿ ಫೌಜಿಯಾ ತರನ್ನುಮ್ ಸೂಚನೆ

ಜೀತ ಪದ್ಧತಿ ರದ್ಧತಿ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರಿಂದ ಪ್ರತಿಜ್ಞೆ ವಿಧಿ ಬೋಧನೆ
ಕಲಬುರಗಿ: ಜೀತ ಪದ್ದತಿ ರದ್ದತಿ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಪ್ರತಿಜ್ಞೆ ವಿಧಿ ಬೋಧಿಸಿದರು. ಮಹಾನಗರ ಪಾಲಿಕೆ ಉಪಾಯುಕ್ತರಾದ ಮಾಧವ ಗಿತ್ತೆ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಸೇರಿದಂತೆ ಜಿಲ್ಲಾಧಿಕಾರಿಗಳ ಕಚೇರಿ ಸಮಾಜಿಕ ಭದ್ರತೆ ಮತ್ತು ಪಿಂಚಣಿಯ ಸಹಾಯಕ ನಿರ್ದೇಶಕರಾದ ಶಿವಶರಣ್ನಪ್ಪ ದನ್ನಿ ಉಪಸ್ಥಿತರಿದ್ದರು.

ಪ್ರಸಕ್ತ 2024-2025ನೇ ಸಾಲಿನ ಎಸ್‍ಸಿಎಸ್‍ಪಿ-ಟಿಎಸ್‍ಪಿ ಅನುದಾನ ಸಮರ್ಪಕವಾಗಿ ಬಳಸಿಕೊಳ್ಳಲು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಂಭಾಗಣದಲ್ಲಿ ಎಸ್‍ಸಿಎಸ್‍ಪಿ-ಟಿಎಸ್‍ಪಿ ಯೋಜನೆ ವಿವಿಧ ಇಲಾಖೆಗಳಿಂದ ಸಮರ್ಪಕ ಅನುಷ್ಠಾನಕ್ಕೆ ತರುತ್ತಿರುವ ಕುರಿತು ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇಲಾಖೆಗಳು ಅನುದಾನವನ್ನು ಸಮರ್ಪಕ ಬಳಕೆ ಮಾಡಿಕೊಂಡು ತಮಗೆ ನೀಡಿರುವ ಸಮಯದಲ್ಲಿ ಸಂಪೂರ್ಣಗೊಳಿಸಲು ಸೂಚನೆ ನೀಡಿದರಲ್ಲದೇ ನಿರ್ಲಕ್ಷ ವಹಿಸಿದರೆ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದೆಂದು ಅಧಿಕಾರಿಗಳಿಗೆ ಎಚ್ಚರಿಸಿದರು.

ಕೃಷಿ ಇಲಾಖೆ ತೋಟಗಾರಿಕೆ ಇಲಾಖೆ ಪಶುಸಂಗೋಪನೆ ಇಲಾಖೆ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ತಮಗೆ ನೀಡಿರುವ ಅನುದಾನವನ್ನು ಶೀಘ್ರವೇ ಮುಗಿಸಲು ಆದೇಶಿಸಿದ್ದರು. ಅಲ್ಲದೇ ಲೋಕೋಪಯೋಗಿ ಇಲಾಖೆ ಬಾಕಿ ಕಾಮಗಾರಿಗಳನ್ನು ತುರ್ತಾಗಿ ಮುಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗಂಗಾ ಕಲ್ಯಾಣ ಯೋಜನೆಗಳು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು ಪ್ರತಿಯೊಂದು ಇಲಾಖೆ ಮಾಹಿತಿ ಪಡೆದ ಜಿಲ್ಲಾಧಿಕಾರಿ ಕೆಲವೊಂದು ಇಲಾಖೆಗಳು ಕಡಿಮೆ ಪ್ರಮಾಣದಲ್ಲಿ ಪ್ರಗತಿ ಸಾಧಿಸಿದ್ದಾರೆ. ಮುಂದಿನ ಹದಿನೈದು ದಿನಗಳಲ್ಲಿ 100 ಪ್ರತಿಶತ ಗುರಿ ಮುಟ್ಟಬೇಕು. ಅಲ್ಲದೇ ಯಾರು ಇಲ್ಲಿಯವರೆಗೆ ಅನುದಾನ ಬಳಕೆ ಮಾಡಿಕೊಂಡಿಲ್ಲವೊ ಅವರು ಬೇಗನೆ ಅನುದಾನ ಬಳಕೆ ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ನಿಗಮ-ಮಂಡಳಿಗಳು ಕೂಡಲೇ ಸಂಬಂಧಪಟ್ಟ ಶಾಸಕರಿಂದ ಆಯ್ಕೆ ಪಟ್ಟಿಯನ್ನು ಮಾಡಿಕೊಂಡು ಕೂಡಲೇ ಫಲಾನುಭವಿಗಳನ್ನು ಆಯ್ಕೆ ಮಾಡಿ ನಿಗದಿ ಪಡಿಸಿದ ಅನುದಾನಕ್ಕೆ ಅನುಗುಣವಾಗಿ ಆರ್ಥಿಕ ಮತ್ತು ಭೌತಿಕ ಪ್ರಗತಿಯನ್ನು ಸಾಧಿಸಲು ಸೂಚಿಸಿದರು.

ಫೆಬ್ರುವರಿ ತಿಂಗಳಲ್ಲಿ ಲೋಕರ್ಪಣೆ ಹಾಗೂ ಉದ್ಫಾಟನೆ ಕಾಮಗಾರಿಗಳ ಮಾಹಿತಿಯನ್ನು ನೀಡಲು ಎಲ್ಲಾ ಜಿಲ್ಲಾಮಟ್ಟದ ಅನುಷ್ಠಾನ ಅಧಿಕಾರಿಗಳಿಗೆ ತಿಳಿಸಿದರು.

ಪ್ರಗತಿ ಹೊಂದಿರುವ ಇಲಾಖೆಗಳ ಪ್ರಗತಿ ಪರಿಶೀಲನೆ ಮಾಡಲಾಯಿತು. ಮುಂದಿನ ಮಾರ್ಚ 9 ರಂದು ನಡೆಯುವ ಸಭೆಗೆ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಫೆಬ್ರುವರಿ 2024 ಅಂತ್ಯದ ವರೆಗೆ ಎಲ್ಲ ಅನುದಾನ ಖರ್ಚು ಮಾಡಲು ಅಧಿಕಾರಿಗಳಿಗೆ ಸೂಚಿಸಿದರು.

ಮ್ಯಾನವಲ್ ಸ್ಕ್ಯಾವಂಜರ್ ಸಭೆ:- ಮಹಾನಗರ ಪಾಲಿಕೆ ಕಲಬುರಗಿ ರವರು ಹಾಗೂ ಯೋಜನಾ ನಿರ್ದೇಶಕರು ಡಿ.ಯು.ಡಿ.ಸಿ. ರವರು ಮಾತನಾಡಿ, ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮ್ಯಾನಹೋಲ್ ಸ್ವಚ್ಫಗೊಳಿಸಲು ಜಟ್ಟಿಂಗ್ ಮತ್ತು ಸಕ್ಕಿಂಗ್ ಮಶೀನಗಳ ಮೂಲಕ ಸ್ವಚ್ಫತಾ ಕಾರ್ಯಕೈಗೊಳ್ಳಲಾಗುತ್ತಿದೆ. ಸಭೆಯ ಗಮನಕ್ಕೆ ತಂದರು.

ಗೃಹ ಭಾಗ್ಯ ಯೋಜನೆ ಅಡಿಯಲ್ಲಿ ಏನು ಕ್ರಮಕೈಗೊಳ್ಳಲಾಗಿದೆ ಎಷ್ಟು ಮನೆಗಳು ಮತ್ತು ನಿವೇಶನಗಳು ಕುರಿತು ಎಲ್ಲಾ ಮಾಹಿತಿಯೊಂದಿಗೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಫಾಯಿ ಕರ್ಮಚಾರಿ ನಿಗಮದವರು ಸೂಚಿಸಿದರು.

ವಿವಿಧ ಸ್ವಯಂ ಉದ್ಯೋಗ ಪಡೆಯುವ ಅನೇಕ ಕೌಶಲ್ಯ ತರಬೇತಿಗಳನ್ನು ಹಮ್ಮಿಕೊಂಡು ಸದುಪಯೋಗ ಪಡೆದುಕೊಳ್ಳಬೇಕು. ನಿವೇಶನ ಇಲ್ಲದವರಿಗೆ ನಿವೇಶನ ಕೊಡಬೇಕು ಮತ್ತು ಪೌರಕಾರ್ಮಿಕರಿಗೆ ನಿವೇಶನ ಹಾಗೂ ಸ್ಧಳ ಗುರುತಿಸಬೇಕು ಕೌಶಲ್ಯ ತರಬೇತಿ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಪೌರಕಾರ್ಮಿಕರಿಗೆ ಕನಿಷ್ಟ ವೇತನ ಇ.ಎಸ್.ಐ, ಪಿ.ಎಫ್ ಹಣವನ್ನು ಸರಿಯಾಗಿ ಕಡಿತಗೊಳಿಸಲಾಗುತ್ತಿದೆ. ಎಲ್ಲಾ ಐದು ಆರು ತಿಂಗಳಿನ ವೇತನವನ್ನು ಅಧಿಕಾರಿಗಳು ಪರಿಶೀಲನೆ ಮಾಡಬೇಕು. ಪೌರಕಾರ್ಮಿಕರಿಗೆ ಬೆಳಗಿನ ಉಪಹಾರ ಗುಣಮಟ್ಟದಾಗಿರಬೇಕು ಅದನ್ನು ಪರಿಶೀಲಿಸಿ ನೀಡಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ ಸಿಂಗ್ ಮೀನಾ ಮತ್ತು ಮಹಾನಗರ ಪಾಲಿಕೆಯ ಉಪಯುಕ್ತರಾದ ಮಾಧವ ಗಿತ್ತೆ ಸಮಾಜ ಕಲ್ಯಾಣ ಜಂಟಿ ನಿರ್ದೇಶಕರಾದ ಪಿ. ಶುಭ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಜಗದೇವಪ್ಪ ಜಿಲ್ಲಾ ನಗರಾಭಿವೃದ್ದಿ ಯೋಜನಾ ನಿರ್ದೇಶಕ ಮನೋಹರ್ ದೌಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಭಿವೃದ್ದಿ ಉಪನಿರ್ದೇಶಕ ನವಿನ ಯು ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳು ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‍ಗಳ ಸಮಿತಿ ಸದಸ್ಯರು ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

3 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

3 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

3 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

19 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

21 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago