ಬಿಸಿ ಬಿಸಿ ಸುದ್ದಿ

ಐದು ಗ್ಯಾರಂಟಿಗಳ ಸಮರ್ಪಕ ಜಾರಿಗೆ ಅಗತ್ಯ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಐದು ಗ್ಯಾರಂಟಿಗಳನ್ನು ಜಾರಿಗೆ ತರುವ ಮೂಲಕ ಕೊಟ್ಟ ಮಾತು ಉಳಿಸಿಕೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ದಿ ಸಂಸ್ಥೆ ಕಲಬುರಗಿ ವತಿಯಿಂದ 2019-20 ಸಾಲಿನ ಡಿಎಮ್ಎಫ್ ಯೋಜನೆಯಡಿಯಲ್ಲಿ ಚಿತ್ತಾಪುರ ತಾಲೂಕಿನ ಸಾವಂತಖೇಡ ಗ್ರಾಮದಿಂದ ಜೀವನ ಮಾರಡಗಿವರೆಗೆ ರಸ್ತೆ ಸುಧಾರಣೆ ಕಾಮಗಾರಿಗೆ ಅಡಿಗಲ್ಲು (ಅಂದಾಜು ಮೊತ್ತ ರೂ 266.55 ಲಕ್ಷ.) ನೆರವೇರಿಸಿ ಅವರು ಮಾತನಾಡುತ್ತಿದ್ದರು.

ಜೀವನ ಮಾರಡಗಿ ಗ್ರಾಮದಲ್ಲಿ ಮಹಿಳೆಯರಿಗಾಗಿ ಅಂದಾಜು ರೂ‌30 ಲಕ್ಷ ವೆಚ್ಚದಲ್ಲಿ‌ ಮಹಿಳೆಯರ‌ ಶೌಚಾಲಯ ಕಟ್ಟಿಸುವುದಾಗಿ ವಾಗ್ದಾನ ನೀಡಿದ ಸಚಿವರು ಅದನ್ನು ನೀವು ಚೆನ್ನಾಗಿ ನೋಡಿಕೊಳ್ಳಬೇಕು ಎಂದು ಹೇಳಿ, ಗ್ರಾಮದ ಇನ್ನಿತರ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳಿದರು.

ರಾಜ್ಯದ ಸರ್ವಾಂಗೀಣ ಅಭಿವೃದ್ದಿಗೆ ಸರ್ಕಾರ ಬದ್ಧವಾಗಿದ್ದು ರಸ್ತೆ, ಕುಡಿಯುವ ನೀರು, ರಸ್ತೆ ನಿರ್ಮಾಣದಂತ ಮೂಲಭೂತ ಸೌಲಭ್ಯ ಒದಗಿಸುವದಕ್ಕೆ ಮೊದಲ ಆದ್ಯತೆ ನೀಡಲಾಗುವುದು. ಜೊತೆಗೆ ಐದು ಗ್ಯಾರಂಟಿಗಳ ಸಮರ್ಪಕ ಅನುಷ್ಠಾನಕ್ಕೆ ಅಗತ್ಯ ಕ್ರಮವಹಿಸಲಾಗುತ್ತಿದೆ. ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳು ಫಲಾನುಭವಿಗಳಿಗೆ ತಲುಪಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ. ಈ ಬಗ್ಗೆ ಬಿಜೆಪಿಯವರು ಏನೇ ಹೇಳಿದರೂ ಯಾರೂ ಗಂಭೀರವಾಗಿ ಪರಿಗಣಿಸಬಾರದು ಎಂದು ಮನವಿ ಮಾಡಿದರು.

ರಾಜ್ಯ ಸರ್ಕಾರ ಆಳುವ ಸರ್ಕಾರ ಬದಲಿಗೆ ಆಲಿಸುವ ಸರ್ಕಾರವಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ವಿಧಾನಸೌಧವನ್ನು‌ ವ್ಯಾಪಾರಸೌಧವನ್ನಾಗಿ ಮಾಡಿದ್ದರು. ಆದರೆ ನಾವು ಅಧಿಕಾರಕ್ಕೆ‌ ಬಂದ ಮೇಲೆ ವಿಧಾನಸೌಧವನ್ನು ಸಾರ್ವಜನಿಕರಿಗೆ ಮುಕ್ತವಾಗಿಸಿದ್ದೇವೆ.‌ ನಿನ್ನೆ ನಡೆದ ಸಾರ್ವಜನಿಕರ ಆವಾಹಲು ( ಜನಸ್ಪಂದನ ) ಕಾರ್ಯಕ್ರಮದಲ್ಲಿ ಸುಮಾರು 20,000 ಜನರು ಭಾಗವಹಿಸಿ ತಮ್ಮ ಕುಂದುಕೊರತೆಗಳನ್ನು ಸಿಎಂ ಅವರ ಗಮನಕ್ಕೆ ತಂದು, ಪರಿಹಾರ ಕಂಡುಕೊಂಡರು. ಇದು ಜನಪರ ಸರ್ಕಾರವೊಂದರ ಬದ್ದತೆಯ ಪ್ರತೀಕವಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ರೇಲ್ವೆ ವಲಯ, ನಿಮ್ಝ್ ಸೇರಿದಂತೆ ಹಲವಾರು ಅಭಿವೃದ್ದಿ ಪರವಾದ ಯೋಜನೆಗಳು ಮಂಜೂರಾಗಿದ್ದರೂ ಕೂಡಾ ಜಾರಿಗೆ ಬಂದಿಲ್ಲ. ಕಾರಣ, ಕೇಂದ್ರ ಸರ್ಕಾರದ ಹಾಗೂ ಕಲಬುರಗಿ ಸಂಸದರ ನಿರ್ಲಕ್ಷ್ಯತನ ಎಂದು‌ ದೂರಿದರು. ಕೇಂದ್ರ ಸರ್ಕಾರದ ನಿರ್ಲಕ್ಷ್ಯತನ ಎಷ್ಟು ಮುಂದುವರೆದಿದೆ ಎಂದರೆ ನಮ್ಮ ರಾಜ್ಯ ಸರ್ಕಾರಕ್ಕೆ ಬರಬೇಕಿದ್ದ ಅನುದಾನದ ಪಾಲು ಸರಿಯಾಗಿ ಕೊಡುತ್ತಿಲ್ಲ. ಈ ಬಗ್ಗೆ ನಾವು ಕೇಳಲು ದೆಹಲಿಗೆ ಹೋಗಿ ಪ್ರತಿಭಟನೆ ಮಾಡಿ ಬಂದೆವು ಎಂದು ಕೇಂದ್ರದ ವಿರುದ್ದ ಹರಿಹಾಯ್ದರು.

ವೇದಿಕೆಯ ಮೇಲೆ ಜಿಪಂ ಮಾಜಿ ಅಧ್ಯಕ್ಷ ರಮೇಶ ಮರಗೋಳ, ರಾಜೇಶ್ ಗುತ್ತೇದಾರ ಸೇರಿದಂತೆ ಹಲವರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

15 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago