ಬಿಸಿ ಬಿಸಿ ಸುದ್ದಿ

ಕರ್ನಾಟಕ ದರ್ಶನ ಚಿಣ್ಣರ ಪ್ರವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಚಾಲನೆ

ಕಲಬುರಗಿ; ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ “ಕರ್ನಾಟಕ ದರ್ಶನ” ಕಾರ್ತಕ್ರಮ ಅಂಗವಾಗಿ ಜಿಲ್ಲೆಯ ಕಲಬುರಗಿ ದಕ್ಷಿಣ ಮತ್ತು ಉತ್ತರ ತಾಲೂಕಿನ ಸರ್ಕಾರಿ ಶಾಲೆಯ 8ನೇ ತರಗತಿ ಮಕ್ಕಳ ಶೈಕ್ಷಣಿಕ ಪ್ರವಾಸಕ್ಕೆ ಶನಿವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಚಾಲನೆ ನೀಡಿದರು.

ಶಾಲಾ ಮಕ್ಕಳೊಂದಿಗೆ ಪ್ರವಾಸ ಕುರಿತು ಕುಶಲೋಪರಿ ವಿಚಾರಿಸಿದ ಸಚಿವರು, ಪ್ರವಾಸಕ್ಕೆ ಶುಭ ಕೋರಿದರು. ಇದೇ ಸಂದರ್ಭದಲ್ಲಿ ಮಕ್ಕಳೊಂದಿಗೆ ಗ್ರೂಪ್ ಪೋಟೋ ತೆಗೆಸಿಕೊಂಡರು. ಪ್ರವಾಸಕ್ಕೆ ಹೊರಟ ಶಾಲಾ ಮಕ್ಕಳಲ್ಲಿ ಸಂಭ್ರಮ ಮನೆ ಮಾಡಿದ್ದು, ಹಸಿರು ಟಿಶರ್ಟ್ ನಲ್ಲಿ ಕಂಗೊಳಿಸಿದರು.

824 ಮಕ್ಕಳ ಪ್ರಯಾಣ: ಕರ್ನಾಟಕ ದರ್ಶನ ಅಂಗವಾಗಿ ಪ್ರಸಕ್ತ 2023-24ನೇ ಸಾಲಿಗೆ ಜಿಲ್ಲೆಯ 8ನೇ ತರಗತಿಯ 824 ಶಾಲಾ ಮಕ್ಕಳು ಪ್ರವಾಸ ಕೈಗೊಳ್ಳಲಿದ್ದಾರೆ. ಜಿಲ್ಲೆಯಿಂದ ಶನಿವಾರ ಕಲಬುರಗಿ ದಕ್ಷಿಣ ಮತ್ತು ಉತ್ತರ ವಲಯದ 208 ಮಕ್ಕಳು ಪ್ರಯಾಣ ಬೆಳಸಿದರು. ಫೆ.11ಕ್ಕೆ ಆಳಂದ ಮತ್ತು ಅಫಜಲಪೂರ ತಾಲೂಕಿನಿಂದ 204 ಮಕ್ಕಳು, ಫೆ.12ಕ್ಕೆ ಜೇವರ್ಗಿ ಮತ್ತು ಚಿತ್ತಾಪುರದಿಂದ‌ 206 ಮಕ್ಕಳು ಹಾಗೂ ಫೆ.13ಕ್ಕೆ ಚಿಂಚೋಳಿ ಮತ್ತು ಸೇಡಂ ತಾಲೂಕಿನಿಂದ 206 ಮಕ್ಕಳು ಪ್ರವಾಸ ಮಾಡಲಿದ್ದಾರೆ. ಪ್ರತಿ ತಾಲೂಕಿಗೆ 5 ಬಸ್ ಗಳ ವ್ಯವಸ್ಥೆ ಮಾಡಿದ್ದು, ಪ್ರಯಾಣದ ಸಂದರ್ಭದಲ್ಲಿ ವಸತಿ, ಊಟೋಪಚಾರಕ್ಕೂ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ಎಲ್ಲೆಲ್ಲಿ ಪ್ರವಾಸ?; ಮೊದಲನೇ ದಿನ ವಿಜಯಪುರ ಗೋಲಗುಮ್ಮಟ ನೋಡಿಕೊಂಡು ತಂಡ ಅಲ್ಲಿಯೆ ವಾಸ್ತವ್ಯ ಮಾಡಲಿದೆ. ಎರಡನೇ ದಿನ ಬದಾಮಿ, ಪಟ್ಟದಕಲ್ಲು ವೀಕ್ಷಿಸಿ ಐಹೊಳೆಯಲ್ಲಿ ವಾಸ್ತವ್ಯ ಮಾಡಲಿದೆ. ಮೂರನೇ ದಿನ ವಿಶ್ವ ಪ್ರಸಿದ್ಧ ಹಂಪಿ, ತುಂಗಭದ್ರ ಆಣೆಕಟ್ಟು ಕಣ್ತುಂಬಿಕೊಂಡು ಹೊಸಪೇಟೆಯಲ್ಲಿ ತಂಗಲಿದೆ. ನಾಲ್ಕನೇ ದಿನ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಅಂಜನಾದ್ರಿ ಬೆಟ್ಟ ವೀಕ್ಷಿಸಿ ಮರಳಿ ಕಲಬುರಗಿಯತ್ತ ಪ್ರಯಾಣ ಬೆಳಸಲಿದೆ.

ಈ ಸಂದರ್ಭದಲ್ಲಿ ಶಾಸಕರಾದ ಅಲ್ಲಮಪ್ರಭು ಪಾಟೀಲ, ಬಸವರಾಜ ಮತ್ತಿಮೂಡ, ಡಿ.ಸಿ.ಬಿ.ಫೌಜಿಯಾ ತರನ್ನುಮ್, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಪ್ರವಾಸೋದ್ಯಮ ಇಲಾಖೆಯ ಪ್ರಭಾರಿ ಉಪನಿರ್ದೇಶಕ ಸತೀಷಕುಮಾರ ಡಿ.ಡಿ.ಪಿ.ಐ ಸಕ್ರೆಪ್ಪಗೌಡ ಬಿರಾದಾರ, ಕೆ.ಎಸ್.ಟಿ.ಡಿ.ಸಿ. ನಿಗಮದ ಸಹಾಯಕ ವ್ಯವಸ್ಥಾಪಕ ಯಶವಂತರಾಯ ಸೇರಿದಂತೆ ಅನೇಕರು ಇದ್ದರು.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

1 hour ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

1 hour ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

3 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

3 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

4 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

4 hours ago