ಬಿಸಿ ಬಿಸಿ ಸುದ್ದಿ

ನನ್ನ ಶಾಲೆ ನನ್ನ ಜವಾಬ್ದಾರಿ ಕಾರ್ಯರೂಪಕ್ಕಿಳಿಸಿದ ಹಳೆಯ ವಿದ್ಯಾರ್ಥಿಗಳು

ಆಳಂದ: ಇತ್ತೀಚಿಗಷ್ಟೇ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪನವರು ಸರ್ಕಾರಿ ಶಾಲೆಗಳು ಹಳೆಯ ವಿದ್ಯಾರ್ಥಿಗಳ ನೆರವಿನಿಂದ ಅಭಿವೃದ್ಧಿ ಕಾಣಲಿ ಎಂದು ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ನೂತನ ಕಾರ್ಯಕ್ರಮವನ್ನು ಘೋಷಿಸಿದ್ದಾರೆ ಆದರೆ ಅದು ಸರ್ಕಾರದ ಮಟ್ಟದಲ್ಲಿ ಅನುಷ್ಠಾನ ಆಗುವುದಕ್ಕಿಂತ ಮುಂಚೆಯೇ ಈ ಗ್ರಾಮದ ವಿದ್ಯಾರ್ಥಿಗಳು ತಮ್ಮ ಶಾಲೆಯಲ್ಲಿ ಅನುಷ್ಠಾನಗೊಳಿಸಿದ್ದಾರೆ.

ನೆರೆಯ ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ಆಳಂದ ತಾಲೂಕಿನ ಜವಳಗಾ ಜೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿಗಳು ಶಾಲೆಗೆ ಬೇಕಾದ ಅನೂಕೂಲ ಮಾಡಿಕೊಡುವುದರ ಮೂಲಕ ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ.

ಸಧ್ಯ ಈ ಗ್ರಾಮದಲ್ಲಿ 1ರಿಂದ 8ನೇ ತರಗತಿಯವರೆಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದ್ದು ಇಲ್ಲಿ 141 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ಗ್ರಾಮವಾಗಿರುವುದರಿಂದ ಇಲ್ಲಿಯ ಜನರು ಹೆಚ್ಚಾಗಿ ಮರಾಠಿ ಮತ್ತು ಕನ್ನಡ ಮಾತನಾಡುತ್ತಾರೆ. ಆಂಗ್ಲ್ ಭಾಷಾ ಮಾಧ್ಯಮದ ಹಾವಳಿಯ ಹಾಗೂ ಮರಾಠಿ ಭಾಷೆಯ ನಡುವೆಯೂ ಕನ್ನಡ ಶಾಲೆಗಳು ಉಳಿಯಲಿ, ಬೆಳೆಯಲಿ ಎನ್ನುವುದು ಹಳೆಯ ವಿದ್ಯಾರ್ಥಿಗಳ ಆಶಯ. ತಾವು ಕಲಿತ ಶಾಲೆಗೆ ಏನಾದರೂ ಅಳಿಲು ಸೇವೆ ಮಾಡಬೇಕು ಎಂದು ನಿಶ್ಚಯಿಸಿದ ಹಳೆಯ ವಿದ್ಯಾರ್ಥಿಗಳು ಶಾಲೆಗೆ ಬೇಕಾದ ಉಪಕರಣಗಳನ್ನು ನೀಡಿ ಮತ್ತೆ ಸರ್ಕಾರಿ ಶಾಲೆಗಳ ಕಡೆ ವಿದ್ಯಾರ್ಥಿಗಳು ತಿರುಗಿ ಬರುವಂತೆ ಮಾಡಿದ್ದಾರೆ.

ಈ ಶಾಲೆಯ ಮತ್ತೊಂದು ವಿಶೇಷವೆಂದರೆ ಇಲ್ಲಿ ಒಬ್ಬ ಗೌರವ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಪಕ್ಕದ ಅಣೂರ ಊರಿನವರಾಗಿದ್ದು ಬಿಎಸ್ಸಿಯಲ್ಲಿ ಕಂಪ್ಯೂಟರ್ ಸೈನ್ಸ್ ಓದಿದ್ದಾರೆ. ಯಾವುದೇ ಫಲಾಪೇಕ್ಷೆಯಿಲ್ಲದೇ ಸ್ವಂತ ಊರಿನಿಂದ ಬಂದು ಮಕ್ಕಳಿಗೆ ಗಣಿತದ ಜೊತೆಗೆ ಕಂಪ್ಯೂಟರ್ ಕಲಿಸುತ್ತಿದ್ದಾರೆ. ಇವರ ನಿಸ್ವಾರ್ಥ ಸೇವೆಗೆ ಗ್ರಾಮದ ಜನ ಕೊಂಡಾಡುತ್ತಿದ್ದಾರೆ.

ಈ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಓದಿ ಈಗ ಬೇರೆ ಬೇರೆ ಊರುಗಳಲ್ಲಿ ಉದ್ಯೋಗದಲ್ಲಿರುವ ಹಳೆಯ ವಿದ್ಯಾರ್ಥಿಗಳು ತಮ್ಮ ಕೈಲಾದ ದೇಣಿಗೆ ಸಂಗ್ರಹಿಸಿ ಶಾಲೆಗೆ ಬೇಕಾದ 11 ಕಂಪ್ಯೂಟರ್, 1 ಪ್ರಿಂಟರ್, 1 ಅಲ್ಮೇರಾ ಮತ್ತು ಶಾಲೆಯಲ್ಲಿ ಸಣ್ಣ ಪುಟ್ಟ ಕಾರ್ಯಕ್ರಮಗಳು ನಡೆಸಿಕೊಂಡು ಹೋಗಲು 1 ಟೆಂಟ್ ಖರೀದಿಸಿ ಕೊಟ್ಟಿದ್ದಾರೆ ಕೆಲವು ಜನ ನಗದು ಹಣವನ್ನು ನೀಡಿ ಶಾಲೆಗೆ ಬೇಕಾದ ಸಂಪನ್ಮೂಲಗಳನ್ನು ಖರೀದಿಸಿ ಎಂದು ಹೇಳಿದ್ದಾರೆ.

ಗ್ರಾಮದ ಹಳೆಯ ವಿದ್ಯಾರ್ಥಿಗಳು ಸೇರಿ ಶಾಲೆಗೆ ಹೊಸ ಸ್ವರೂಪ ಕೊಡುವ ನಿಟ್ಟಿನಲ್ಲಿ ಒಂದು ಸಣ್ಣ ಸಹಾಯ ಮಾಡಿದ್ದೇವೆ. ಮುಂದೆಯೂ ಕೂಡ ಸಹಾಯ ಮಾಡುತ್ತೇವೆ. ಒಟ್ಟಿನಲ್ಲಿ ನಮಗೆ ಅಕ್ಷರ ಕಲಿಸಿದ ಶಾಲೆಯ ಋಣ ತೀರಿಸುವ ಕಾರ್ಯ ಮಾಡುತ್ತೇವೆ. ಶಾಲೆಯಲ್ಲಿ ಕಂಪ್ಯೂಟರಗಳು ಬಂದಾಗಿನಿಂದ ವಿದ್ಯಾರ್ಥಿಗಳು ಆಸಕ್ತಿಯಿಂದ ಶಾಲೆಗೆ ಬರುತ್ತಿದ್ದಾರೆ. – ಲಿಂಗರಾಜ ಲೆಂಡೆ, ಹಳೆಯ ವಿದ್ಯಾರ್ಥಿ, ಸರ್ಕಾರಿ, ಹಿರಿಯ ಪ್ರಾಥಮಿಕ ಶಾಲೆ, ಜವಳಗಾ ಜೆ

ಗ್ರಾಮದ ವಿದ್ಯಾರ್ಥಿಗಳು ಶಾಲೆಯ ಬೆಳವಣಿಗೆಗೆ ಸಹಕಾರ ನೀಡಿದ್ದಾರೆ. ಇದರಿಂದ ಖಾಸಗಿ, ಆಂಗ್ಲ್ ಮಾಧ್ಯಮ ಹಾಗೂ ನೆರೆಯ ಮಹಾರಾಷ್ಟ್ರಕ್ಕೆ ಹೋಗುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಆಗಬಹುದು ಎನ್ನುವ ನೀರಿಕ್ಷೆಯಿದೆ. ಸರ್ಕಾರವು ಕೂಡ ಶಾಲಾ ಕೋಣೆಗಳ ನಿರ್ಮಾಣಕ್ಕೆ ಆದ್ಯತೆ ನೀಡಿದರೇ ಸಮಸ್ಯೆ ಬಗೆಹರಿದಂತೆ ಆಗುತ್ತದೆ. – ಬಸವರಾಜ ಗುತ್ತೇದಾರ, ಎಸ್‍ಡಿಎಂಸಿ ಅಧ್ಯಕ್ಷ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಜವಳಗಾ ಜೆ.

ಶಾಲೆಯಲ್ಲಿ ಸಂಪನ್ಮೂಲದ ಕೊರತೆ ಇತ್ತು ಇದನ್ನು ಮನಗಂಡು ಇಲ್ಲಿ ಕಲಿತ ವಿದ್ಯಾರ್ಥಿಗಳು ಶಾಲೆಗೆ ಬಂದು ಏನೇನು ಬೇಕು ಎಂದು ಪಟ್ಟಿ ಮಾಡಿಕೊಂಡು ಹೋಗಿದ್ದರು ಅದರಂತೆ ಅವರು ಶಾಲೆಗೆ ಅವಶ್ಯಕವಾಗಿ ಬೇಕಾದ ಸಾಮಗ್ರಿಗಳನ್ನು ನೀಡಿದ್ದಾರೆ. ಇದರಿಂದ ಮಕ್ಕಳಲ್ಲಿ ಹೊಸ ಚೈತನ್ಯ ಬಂದಂತಾಗಿದೆ. ಕಂಪ್ಯೂಟರಗಳು ಬಂದ ಮೇಲೆ ವಿದ್ಯಾರ್ಥಿಗಳು ಶಾಲೆ ತಪ್ಪಿಸುವುದನ್ನು ಬಿಟ್ಟಿದ್ದಾರೆ ಅಲ್ಲದೇ ಆಸಕ್ತಿಯಿಂದ ಕಲಿಕೆಯಲ್ಲಿ ತೊಡಗಿದ್ದಾರೆ.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

3 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

3 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

6 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

6 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

6 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

6 hours ago