ವಾಡಿ ಎಸಿಸಿ ಕಂಪೆನಿಯಲ್ಲಿ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ಗಾಂಜಾ ವಿಲೇವಾರಿ

0
5
  • ಎಂ.ಡಿ ಮಶಾಖ ಚಿತ್ತಾಪುರ

ಕಲಬುರಗಿ; ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಸಕ್ತ ಸಾಲಿನ ಎನ್.ಡಿ.ಪಿ.ಎಸ್ ಕಾಯ್ದೆ ಅಡಿಯಲ್ಲಿ ದಾಖಲಾದ 14 ಪ್ರಕರಣಗಳಲ್ಲಿ ವಶಪಡಿಸಿಕೊಂಡ 276.245 ಕೆ.ಜಿ ಗಾಂಜಾ ಸೆರಿದಂತೆ ಒಟ್ಟು 28,32,351 ರೂ. ಮೌಲ್ಯದ ಮಾದಕ ವಸ್ತುವನ್ನು ಕಲಬುರಗಿ ಎಸ್ಪಿ ಅಡ್ಡೂರು ಶ್ರೀನಿವಾಸಲು ಅವರ ನೇತೃತ್ವದಲ್ಲಿ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಎಸಿಸಿ ಸಿಮೆಂಟ್ ಕಾರ್ಖಾನೆಯಲ್ಲಿ ವಿಲೇವಾರಿ ಮಾಡಲಾಯಿತು.

ಈ ಸಂದರ್ಭದಲ್ಲಿ ವಾಡಿ ಪಿಎಸ್’ಐ ಮಂಜುನಾಥ ರೆಡ್ಡಿ ಸೇರಿದಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಎಸಿಸಿ ಸಿಮೆಂಟ್ ಕಾರ್ಖಾನೆಯ ಅಧಿಕಾರಿಗಳು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here