ಬಿಸಿ ಬಿಸಿ ಸುದ್ದಿ

ಅಮೃತ ಮಾಲಾ ಯೋಜನೆಯಡಿ ಆಯ್ಕೆಯಾದ ರೈಲ್ವೆ ನಿಲ್ದಾಣದ ನವೀಕರಣ ಕಾಮಗಾರಿ ತೀವ್ರಗೊಳಿಸಿ; ಡಾ.ಉಮೇಶ ಜಾಧವ

ಕಲಬುರಗಿ; ಅಮೃತ ಮಾಲಾ ಯೋಜನೆಯಡಿ ಜಿಲ್ಲೆಯ ಕಲಬುರಗಿ, ವಾಡಿ, ಶಹಾಬಾದ, ಗಾಣಗಾಪುರ ರೈಲ್ವೆ ನಿಲ್ದಾಣ ನವೀಕರಣ ಕಾಮಗಾರಿ ಕೈಗೆತ್ತಿಕೊಂಡಿದ್ದು, ಕಾಮಗಾರಿ ವೇಗ ಹೆಚ್ಚಿಸಬೇಕು ಎಂದು ಸಂಸದ ಡಾ.ಉಮೇಶ ಜಾಧವ ಅವರು ಸೆಂಟ್ರಲ್ ರೈಲ್ವೆ ವಿಭಾಗದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರವಿವಾರ ಇಲ್ಲಿನ ಡಿ.ಸಿ ಕಛೇರಿ ಸಭಾಂಗಣದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾ‌ ಅಭಿವೃದ್ಧಿ ಸಮನ್ವಯ ಹಾಗೂ ಮೇಲುಸ್ತುವಾರಿ “ದಿಶಾ” ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಐತಿಹಾಸಿಕ ನಿಲ್ದಾಣಗಳನ್ನು ನವೀಕರಿಸುವ ಮಹತ್ತರ ಯೋಜನೆ ಇವುಗಳಾಗಿದ್ದು, ಕೂಡಲೆ ಪೂರ್ಣಗೊಳಿಸಬೇಕು ಎಂದರು.

ಕಲಬುರಗಿ ರೈಲ್ವೆ ನಿಲ್ದಾಣದ ಸೋಲಾಪುರ ಕಡೆ ಹಳೇ ಜೇವರ್ಗಿ ರಸ್ತೆಯ ಅರ್.ಯು.ಬಿ. ಬಳಿ ಇರುವ ಇಂಡಿಯನ್ ಆಯಿಲ್ ಕಾರ್ಪೋರೇಷನ್ ಸ್ಥಳವನ್ನು ವಶಕ್ಕೆ ಪಡೆದು ಅಲ್ಲಿ ರೇಲ್ವೆ ನಿಲ್ದಾಣಕ್ಕೆ ಮೂರನೇ‌ ಎಂಟ್ರಿ ಮಾಡಬೇಕಿದ್ದು, ರೈಲ್ವೆ ಅಧಿಕಾರಿಗಳು ಕಲಬುರಗಿ ಡಿ.ಸಿ. ಅವರನ್ನು ಪ್ರತ್ಯೇಕವಾಗಿ ಭೇಟಿಯಾಗಿ ಈ ಕುರಿತು ಚರ್ಚಿಸಬೇಕು ಎಂದರು.

ಕಲಬುರಗಿ ರೈಲ್ವೆ ನಿಲ್ದಾಣದಲ್ಲಿ 5 ಮತ್ತು 6ನೇ ಪ್ಲಾಟಫಾರ್ಮ್ ನಿರ್ಮಿಸಬೇಕೆಂಬ ಬೇಡಿಕೆ ಪರಿಶೀಲಿಸಿದ್ದು, ಅದು ಕಾರ್ಯಸಾಧುವಲ್ಲ ಎಂದು ವರದಿ ಬಂದಿದೆ. ನಿಲ್ದಾಣದಲ್ಲಿ ಸೋಲಾಪುರ ಕಡೆಗೆ ಹೊಸದಾಗಿ ಅರ್.ಓ.ಬಿ ನಿರ್ಮಾಣಕ್ಕೆ, ಕಲಬುರಗಿ-ತಾಜಸುಲ್ತಾನಪುರ ನಡುವಿನ ಆರ್.ಯು.ಬಿ. ನಿರ್ಮಾಣಕ್ಕೆ ಒಪ್ಪಿಗೆ ಸಿಕ್ಕಿದೆ ಎಂದು ರೈಲ್ವೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಇನ್ನುಳಿದಂತೆ ರೈಲು ನಿಲ್ದಾಣದಲ್ಲಿ ಶೌಚಾಲಯ ಸ್ವಚ್ಛತೆ, ಎಸ್ಕೆಲೆಟರ್ ಸಮಸ್ಯೆ ಕೂಡಲೆ ಬಗೆಹರಿಸಲಾಗುವುದು ಎಂದರು.

ಇನ್ನು ವಾಡಿ ರೈಲ್ವೆ ನಿಲ್ದಾಣದಲ್ಲಿ ಪಟ್ಟಣ ಕಡೆಗಿನ ಪ್ರಯಾಣಿಕರು ಅರ್.ಓ.ಬಿ. ಹತ್ತಿ ಪ್ಲಾಟಫಾರ್ಮ್ ಪ್ರವೇಶಿಸಬೇಕಿತ್ತು.‌ ನೇರವಾಗಿ ಪ್ಲಾಟಫಾರ್ಮ್ ಪ್ರವೇಶ ಕಲ್ಪಿಸಲು ಪ್ಲಾಟಫಾರ್ಮ್ ವಿಸ್ತರಣೆ ಬಹುದಿನಗಳ ಬೇಡಿಕೆಗೆ ರೈಲ್ವೆ ಇಲಾಖೆ ಅನುಮತಿ ನೀಡಿದೆ. ಇದಲ್ಲದೆ ಅಫಲಪೂರ ತಾಲೂಕಿನ ಕುಲಾಲಿ ಬಳಿ ದಶಕದ ಬೇಡಿಕೆ ಅರ್.ಯು.ಬಿ. ನಿರ್ಮಿಸಿದ್ದು, ಇದರಿಂದ ಕಬ್ಬು ಲಾರಿಗಳು ಸಂಚರಿಸಬಹುದಾಗಿದೆ ಎಂದು ಸೆಂಟ್ರಲ್ ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದರು.

ದಕ್ಷಿಣ ಮದ್ಯ ರೈಲ್ವೆ ವಿಭಾಗದಲ್ಲಿ ಬರುವ‌ ಜಿಲ್ಲೆಯ ಮಳಖೇಡನಲ್ಲಿ ಹೈಕ್ಲಾಸ್ ಪ್ಲಾಟಫಾರ್ಮ್ ನಿರ್ಮಿಸಲಾಗುತ್ತಿದೆ. ಸೇಡಂ ರೈಲ್ವೆ ನಿಲ್ದಾಣದಲ್ಲಿ ಪ್ಲಾಟಫಾರ್ಮ ಸಂಖ್ಯೆ-2ರ ಎತ್ತರ ಹೆಚ್ಚಿಸಬೇಕೆಂಬ ಬೇಡಿಕೆಗೆ ಡಿ.ಆರ್.ಎಂ ಕಚೇರಿ ಒಪ್ಪಿಗೆ ನೀಡಿದೆ. ಚಿತ್ತಾಪುರ ರೈಲ್ವೆ ನಿಲ್ದಾಣದಲ್ಲಿ ಸ್ವಚ್ಚತೆಗೆ ಆದ್ಯತೆ ನೀಡಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ನಾಲವಾರ ರೈಲು ನಿಲ್ದಾಣದ ಪ್ಲಾಟಫಾರ್ಮ್ 1 ರಲ್ಲಿ ಕೋಚ್ ಪೋಸಿಷನ್ ಇಂಡಿಕೇಷನ್ ಅಳವಡಿಸಿದೆ ಎಂದು ಗುಂತಕಲ್ ವಿಭಾಗದ ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯೆಸಿದ ಸಂಸದ ಡಾ.ಉಮೇಶ ಜಾಧವ ಅವರು, ಎರಡನೇ ಪ್ಲಾಟಫಾರ್ಮ್ ನಲ್ಲಿಯೂ ಕೋಚ್ ಪೋಸಿಷನ್ ಇಂಡಿಕೇಷನ್ ಹಾಕಬೇಕು ಎಂದರು.

ಶಹಾಬಾದ ಬಳಿ ಅರ್.ಯು.ಬಿ ನಿರ್ಮಾಣಕ್ಕೆ ಒಪ್ಪಿಗೆ: ಶಹಾಬಾದ ರೈಲ್ವೆ ನಿಲ್ದಾಣದ ಬಳಿ ಚುನ್ನಾ ಬಟ್ಟಿ ಪ್ರದೇಶಕ್ಕೆ ಹೋಗಬೇಕಾದರೆ ಜನ ರೈಲ್ವೆ ಕ್ರಾಸ್ ಮಾಡಿ ಹೋಗುತ್ತಿದ್ದಾರೆ. ಕೂಡಲೆ ಅಲ್ಲಿ ಆರ್.ಯು.ಬಿ. ನಿರ್ಮಿಸಬೇಕು ಎಂದು ಸಂಸದರು ತಿಳಿಸಿದಾಗ, ಈಗಾಗಲೆ ಇದಕ್ಕೆ ಅನುಮೋದನೆ ಸಿಕ್ಕಿದೆ, ಕೆಲಸ‌ ಶೀಘ್ರದಲ್ಲಿ ಆರಂಭಿಸಲಾಗುವುದು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಎಂ.ಎಲ್.ಸಿ ಬಿ.ಜಿ.ಪಾಟೀಲ, ಸುನೀಲ ವಲ್ಯಾಪುರೆ, ಶಶೀಲ ನಮೋಶಿ, ತಿಪ್ಪಣ್ಣಪ್ಪ ಕಮಕನೂರ, ಡಿ.ಸಿ. ಬಿ.ಫೌಜಿಯಾ ತರನ್ನುಮ್, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಡಿ.ಸಿ.ಪಿ ಕನಿಕ ಸಿಕ್ರಿವಾಲ್, ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ ದೇವಿದಾಸ್, ಉಪ ಆಯುಕ್ತ ಮಾಧವ ಗಿತ್ತೆ ಸೇರಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಇಲಾಖೆಯ ಅನೇಕ ಅಧಿಕಾರಿಗಳು ಇದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

7 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

7 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

7 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

24 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago