ಕಲಬುರಗಿ; ಜೇವರ್ಗಿ ರಸ್ತೆಯ ಹೊನ್ನಕಿರಣಗಿ-ಫರಹತಾಬಾದ ಬಳಿ ಕೇಂದ್ರ ಸರ್ಕಾರದಿಂದ ನಿರ್ಮಿಸಲು ಉದ್ದೇಶಿಸಿರುವ ಮೆಗಾ ಟೆಕ್ಸ್ ಟೈಲ್ ಪಾರ್ಕ್ ಇದೇ ವರ್ಷಾಂತ್ಯಕ್ಕೆ ಆರಂಭಿಸಲಿ ಎಲ್ಲಾ ಪೂರ್ವಸಿದ್ಧತೆ ಮಾಡಿಕೊಳ್ಳಬೇಕು ಎಂದು ಸಂಸದ ಡಾ.ಉಮೇಶ ಜಾಧವ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರವಿವಾರ ಇಲ್ಲಿನ ಡಿ.ಸಿ ಕಛೇರಿ ಸಭಾಂಗಣದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಮೇಲುಸ್ತುವಾರಿ “ದಿಶಾ” ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಾರ್ಕ್ ಸ್ಫಾನೆಯಾದಲ್ಲಿ ಸ್ಥಳೀಯರಿಗೆ ಉದ್ಯೋಗ ಸಿಗಲಿದ. ಪ್ರತ್ಯಕ್ಷ ಮತ್ತು ಪರೋಕ್ಷವಾಗಿ 2 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದರು.
ಈಗಾಗಲೆ ಸೂರತ್-ಚೆನ್ನೈ ಎಕಾನಾಮಿಕ್ ಕಾರಿಡಾರ್ ಹೈವೇ ಕಾಮಗಾರಿ ಜೇವರ್ಗಿ ಮೂಲಕ ಹಾದು ಹೋಗುತ್ತಿರುವುದರಿಂದ ಹತ್ತಿ ರಪ್ತಿಗೆ ಮತ್ತಷ್ಟು ಉತ್ತೇಜನ ಸಿಗಲಿದೆ. ಭವಿಷ್ಯದಲ್ಲಿ ಹತ್ತಿ ಉದ್ಯಮದಲ್ಲಿ ಕಲಬುರಗಿ ದಾಪುಗಾಲು ಇಡಲಿದೆ ಎಂದರು.
ಮೆಗಾ ಟೆಕ್ಸ್ ಟೈಲ್ ಪಾರ್ಕ್ ಕುರಿತು ಮಾಹಿತಿ ನೀಡಿದ ಅಧಿಕಾರಿಗಳು, ಫೆನ್ಸಿಂಗ್ ಕಾರ್ಯ ಲೋಕೋಪಯೋಗಿ ಇಲಾಖೆ ಮಾಡುತ್ತಿದೆ. ನೀರಿನ ಸಮಸ್ಯೆ ಇದ್ದು, 76 ಎಂ.ಎಲ್.ಡಿ ನೀರಿನ ಅವಶ್ಯಕತೆ ಇದೆ. ಈಗಾಗಲೆ ಇಲ್ಲಿ ಹೂಡಿಕೆಗೆ 10 ಕಂಪನಿಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು, ಶೀಘ್ರದಲ್ಲಿಯೇ ಎರಡನೇ ಸ್ಟೇಕ್ ಹೋಲ್ಡರ್ ಸಭೆ ಕರೆದಿದ್ದು, ಅಲ್ಲಿ ಇನ್ನು 10-12 ಕಂಪನಿಗಳ ಹೂಡಿಕೆಗೆ ಒಪ್ಪಿಗೆ ಸಿಗಲಿದೆ ಎಂದು ಮಾಹಿತಿ ನೀಡಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…