ಕಲಬುರಗಿ: ವಿಜ್ಞಾನ ರಾಷ್ಟ್ರದ ಪ್ರಗತಿಯ ಚಾಲನಾ ಶಕ್ತಿಯಾಗಿದೆ. ವಿಜ್ಞಾನ ಕ್ಷೇತ್ರದ ಬೆಳವಣಿಗೆಗೆ ಮೇರಿ ಕ್ಯೂರಿ, ಜಾನಕಿ ಅಮ್ಮಾಳ್, ಆನಂದಿಬಾಯಿ, ಡಾ.ಇಂದಿರಾ, ಸುನೀತಾ ಗುಪ್ತಾ, ಕಲ್ಪನಾ ಚಾವ್ಲಾ, ಸುನೀತಾ ವಿಲಿಯಮ್ಸ್ ಸೇರಿದಂತೆ ಅನೇಕ ಮಹಿಳೆಯರು ತಮ್ಮದೇ ಆದ ಅಮೋಘವಾದ ಕೊಡುಗೆಯನ್ನು ನೀಡಿದ್ದಾರೆ. ಆದರೆ ವಿಜ್ಞಾನ ಕ್ಷೇತ್ರದಲ್ಲಿ ಮಹಿಳೆಯರ ಪ್ರಮಾಣ ಇನ್ನೂ ಹೆಚ್ಚಾಗಬೇಕಾಗಿದೆ ಎಂದು ವಿಜ್ಞಾನ ಶಿಕ್ಷಕಿಯರಾದ ಸಂಗೀತಾ ಸಾಲಿ, ಪೂರ್ಣಿಮಾ ಪಾಟೀಲ ಮತ್ತು ರೇಖಾ ಅವರು ಸಾಮೂಹಿಕವಾಗಿ ಆಶಯ ವ್ಯಕ್ತಪಡಿಸಿದರು.
ನಗರದ ಮಹಾದೇವ ನಗರದಲ್ಲಿರುವ ‘ಶಿವಾ ವಿದ್ಯಾ ಮಂದಿರ ಮತ್ತು ಸ್ವಾತಿ ಪ್ರೌಢಶಾಲೆ’ಯಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಭಾನುವಾರ ಏರ್ಪಡಿಸಲಾಗಿದ್ದ ‘ಅಂತಾರಾಷ್ಟ್ರೀಯ ವಿಜ್ಞಾನ ಕ್ಷೇತ್ರದ ಬಾಲಕಿಯರು ಮತ್ತು ಮಹಿಳೆಯರ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಉಪನ್ಯಾಸಕ ಎಚ್.ಬಿ.ಪಾಟೀಲ ಮಾತನಾಡಿ, ವಿಜ್ಞಾನ ಕ್ಷೇತ್ರಕ್ಕೆ ಲಿಂಗ ತಾರತಮ್ಯವಿಲ್ಲ. ಈ ಕ್ಷೇತ್ರದಲ್ಲಿ ಮಹಿಳೆಯರ ಅಧ್ಯಯನ, ಭಾಗವಹಿಸುವಿಕೆಯ ಪ್ರಮಾಣ ಶೇ.30 ಮತ್ತು ನೋಬೆಲ್ ಪ್ರಶಸ್ತಿ ಪುರಷ್ಕøತರ ಶೇಕಡಾವಾರು ಪ್ರಮಾಣ ಕೇವಲ ಸುಮಾರು 3ರಷ್ಟಿದ್ದು ಇದು ಹೆಚ್ಚಾಗಬೇಕಾಗಿದೆ. ವಿದ್ಯಾರ್ಥಿ ದೆಸೆಯಿಂದಲೇ ಮೂಲ ವಿಜ್ಞಾನದತ್ತ ಹೆಚ್ಚಿನ ಆಸಕ್ತಿ, ಕುತೋಹಲ ಬೆಳೆಸಿಕೊಂಡು ಸಂಶೋಧನೆಯಲ್ಲಿ ತೊಡಗಬೇಕು. ಅದು ಮುಂದೆ ದೊಡ್ಡ ವಿಜ್ಞಾನಿಗಳಾಗಿ ಮಾಡುತ್ತದೆ. ವಿಜ್ಞಾನದಿಂದ ಸಾಕಷ್ಟು ಪ್ರಯೋಜನೆಗಳಿದ್ದು, ಅದನ್ನು ಶಾಂತಿ ಮತ್ತು ಅಭಿವೃದ್ಧಿಗಾಗಿ ಬಳಸುವ ಮೂಲಕ ಸಮಾಜ ಮತ್ತು ರಾಷ್ಟ್ರದ ಅಭಿವೃದ್ಧಿಗೆ ಬಳಸಬೇಕು ಎಂದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಚನ್ನಬಸಪ್ಪ ಗಾರಂಪಳ್ಳಿ, ಕಸಾಪ ಉತ್ತರ ವಲಯದ ಗೌರವ ಅಧ್ಯಕ್ಷ ಶಿವಯೋಗೆಪ್ಪಾ ಎಸ್.ಬಿರಾದಾರ, ಶಾಲೆಯ ಶಿಕ್ಷಕರಾದ ಪ್ರಿಯಾಂಕಾ ಪಿ.ಕೆ., ಶಿಲ್ಪಾ ಎಸ್.ಕೆ., ವರ್ಷಾರಾಣಿ, ಮಲ್ಲಮ್ಮ ಬಿ.ಕೆ., ಪ್ರೀತಿ ಜೆ.ಬಿ., ಖಮರೂನ್ನೀಸ್, ರೋಹಿತ್, ಕಾಶಮ್ಮ, ವಂದನಾ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…