ಬಿಜೆಪಿಗೆ ಭದ್ರ ಬುನಾದಿ ಹಾಕಿದವರು ಪಂಡಿತ್ ದೀನ್‍ದಯಾಳ ಉಪಾಧ್ಯಾಯ

ಶಹಾಬಾದ: ಪಂಡಿತ್ ದೀನ್‍ದಯಾಳ ಉಪಾಧ್ಯಾಯ ಅವರು ಸರಳ ಜೀವಿಯಾಗಿದ್ದು, ಬಿಜೆಪಿಗೆ ಭದ್ರ ಬುನಾದಿ ಹಾಕಿದ ದೀಮಂತ ನಾಯಕರಲ್ಲಿ ಅವರು ಒಬ್ಬರಾಗಿದ್ದರು ಎಂದು ಬಿಜೆಪಿ ಹಿರಿಯ ಮುಖಂಡ ಅರುಣ ಪಟ್ಟಣಕರ್
ಹೇಳಿದರು.

ಅವರು ರವಿವಾರ ಬಿಜೆಪಿ ಪಕ್ಷದ ವತಿಯಿಂದ ನಗರದ ಬಿಜೆಪಿ ಕಛೇರಿಯಲ್ಲಿ ಪಂಡಿತ್ ದೀನ್‍ದಯಾಳ ಉಪಾಧ್ಯಾಯರ ಪುಣ್ಯತಿಥಿ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

ದೀನ್ ದಯಾಳ್ ಅವರು ಜನರ ನಾಡಿ ಮಿಡಿತಗಳನ್ನು ಅರ್ಥೆಸಿಕೊಳ್ಳುವ ಮೂಲಕ ಹೋರಾಟ ಮನೋಭಾವ ಹೆಚ್ಚಿಸಿಕೊಂಡಿದ್ದರು.ಪಕ್ಷ ಸಂಘಟನೆಗಾಗಿ ಸಾಕಷ್ಟ ಶ್ರಮಿಸಿದ್ದಾರೆ.ಅವರ ಆದರ್ಶ ಗುಣಗಳು, ಮಾರ್ಗದರ್ಶನಗಳನ್ನು ಎಲ್ಲಾ ಕಾರ್ಯಕರ್ತರು ಪಾಲಿಸಬೇಕೆಂದು ಹೇಳಿದರು.

ಬಿಜೆಪಿ ಮುಖಂಡ ಶರಣು ವಸ್ತ್ರದ್ ಮಾತನಾಡಿ,ಪಕ್ಷ ಸಂಘಟನೆಯಲ್ಲಿ ಪ್ರತಿಯೊಬ್ಬರೂ ಶ್ರದ್ಧೆಯಿಂದ ಪಾಲ್ಗೊಳ್ಳಬೇಕು.ಇಂದು ಪಕ್ಷಕ್ಕಾಗಿ ದುಡಿದು ತನ್ನನ್ನು ತಾನು ಅರ್ಪಿಸಿಕೊಂಡವರು ಉತ್ತಮ ನಾಯಕರಾಗಿ ಹೊರಹೊಮ್ಮಿದ್ದಾರೆ.ಅಂದಿನ ದಿನಗಳಲ್ಲಿ ಭೂತಪೂರ್ವ ಪತ್ರಿಕೆಯನ್ನು ಹೊರತಂದು ಬ್ರಿಟಿಷರ ದೌರ್ಜನ್ಯದ ವಿರುದ್ಧ ನೇರ ನುಡಿಗಳ ಮೂಲಕ ಪತ್ರಿಕೆಯ ಶಕ್ತಿ, ಸಾಮಥ್ರ್ಯ ಎಷ್ಟು ಎಂಬುದನ್ನು ತೋರಿಸಿದ್ದರು.ಅವರ ಕೆಲ ಪುಸ್ತಕಗಳು ಜೀವನಕ್ಕೆ ದಾರಿದೀಪವಾಗಿವೆ ಎಂದು ಹೇಳಿದರು.

ಪ್ರಮುಖರಾದ ಅನೀಲ ಬೋರಗಾಂವಕರ್, ಮಹಾದೇವ ಗೊಬ್ಬೂರಕರ, ಸದಾನಂದ ಕುಂಬಾರ, ಸಾಯಿಬಣ್ಣ ಬೆಳಗುಂಪಿ, ಯಲ್ಲಪ್ಪ ದಂಡಗುಲಕರ, ಜಗದೇವ ಸುಬೇದಾರ, ಶ್ರೀನಿವಾಸ ದೇವಕರ, ಮೋಹನ ಹಳ್ಳಿ, ರಹೀಮಸಾಬ, ಅಂಬರೀಶ್ ಕಲ್ಯಾಣಿ, ವಿನೋದ ಕಟ್ಟಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

emedialine

Recent Posts

ಕಲಬುರಗಿ: ಹಜರತ್ ಲಾಡ್ಲೆ ಮಶಾಕ(ರ.ಅ) ದರ್ಗಾದ 669ನೇ ಉರುಸ್ 13 ರಿಂದ

ಕಲಬುರಗಿ: ಇಲ್ಲಿನ ಪ್ರಸಿದ್ಧಿ ಸೂಫಿ ಸಂತ ಹಜರತ್ ಖಾಜಾ ಶೇಖ ಮಗದೂಮ್ ಅಲ್ಲಾವುದ್ದೀನ್ ಅನ್ಸಾರಿ ಚಿಸ್ತಿ ಲಾಡ್ಲೆ ಮಶಾಕ ಅನ್ಸಾರಿ…

1 hour ago

ಪತ್ರಕರ್ತ ಮಣೂರರಿಗೆ ಟಿಎಸ್‍ಆರ್ ಪ್ರಶಸ್ತಿ ಪ್ರದಾನ

ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…

2 hours ago

ನವರಾತ್ರಿ ಮಹೋತ್ಸವದ ನಿಮಿತ್ತ ದೇವಿ ಪೂಜಾ ಕಾರ್ಯಕ್ರಮ

ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…

2 hours ago

ಶ್ರೀ ಭವಾನಿ 1ನೇ ದಿನದ ಪುರಾಣ, ಕಳಸ ರೋಹಣ

ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…

2 hours ago

ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ: ಮುದ್ದಾ

ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…

2 hours ago

ಅಹಿಂಸೆಯ ದಾರಿಯಲ್ಲಿ ನಡೆದಾಗ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯ

ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420