ಶ್ರೀ ಸ್ವಾಮಿ ನಾರಾಯಣ ಗುರುಕುಲ ಅಂತಾರಾಷ್ಟ್ರೀಯ ಶಾಲೆ; ಸಾಂಸ್ಕøತಿಕ ಕಾರ್ಯಕ್ರಮ

0
18

ಕಲಬುರಗಿ: ಪ್ರತಿ ವರ್ಷದಂತೆ ಈ ವರ್ಷವೂ ಸಹ ಶ್ರೀ ಸ್ವಾಮಿ ನಾರಾಯಣ ಗುರುಕುಲ ಅಂತಾರಾಷ್ಟ್ರೀಯ ಶಾಲೆಯ ಆವರಣದಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಗುರುಕುಲ ಸಾಂಸ್ಕøತಿಕ ಕಾರ್ಯಕ್ರಮವನ್ನು ಪರಮಪೂಜ್ಯ ಶ್ರೀ ನಯನ ಪ್ರಿಯದಾಸ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ಪರಮಪೂಜ್ಯರು ವಹಿಸಿದ್ದರು. ಈ ಕಾರ್ಯಕ್ರಮವನ್ನು ಕಲಬುರಗಿ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ಸದಸ್ಯರು ಹಾಗೂ ಗುರುಜಿ ಪದವಿ ಮಹಾವಿದ್ಯಾಲಯ ಮತ್ತು ಕೆವಿಪಿ ದಣ್ಣೂರ ಪಿಯು ಕಾಲೇಜಿನ ಅಧ್ಯಕ್ಷರಾದ ಕಲ್ಯಾಣಕುಮಾರ ಶೀಲವಂತ ಅವರು ಉದ್ಘಾಟಿಸಿ ಮಾತನಾಡುತ್ತಾ ವಿದ್ಯಾರ್ಥಿಗಳ ಜೀವನದಲ್ಲಿ ಶಿಕ್ಷಣ ಮತ್ತು ಶಿಕ್ಷಕರ ಪಾತ್ರ, ಪಾಲಕರ ಮಹತ್ವ ಹಾಗೂ ಶಾಲೆಯ ಶಿಸ್ತು, ಸಂಸ್ಕಾರ, ವಿದ್ಯಾ, ಸದ್ವಿದ್ಯಾ, ಬ್ರಹ್ಮವಿದ್ಯಾ ತ್ರಿವಳಿ ಶಿಕ್ಷಣ ಮಾದರಿಯನ್ನು ನೀಡುವ ಬಗ್ಗೆ ಹೇಳಿದರು.

Contact Your\'s Advertisement; 9902492681

ಸಮಾರಂಭದಲ್ಲಿ ಶಾಲೆಯ ಪ್ರಾಂಶುಪಾಲರು ಶಾಲೆಯ ವಾರ್ಷಿಕ ವರದಿ ವಾಚನ ಹೇಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕರುಗಳು ಭಾಗವಹಿಸಿ ಪ್ರಾಥಮಿಕ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿಕ್ಷೀಸಿದರು. ಈ ಕಾರ್ಯಕ್ರಮದ ಜೊತೆಗೆ ಜೀ ಸ್ಟಾರ್ ಪ್ರಶಸ್ತಿಯನ್ನು ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಪದಕಗಳನ್ನು ಪಾಲಕರೊಂದಿಗೆ ನೀಡಿ ಸನ್ಮಾನಿಸಲಾಯಿತು.

ಈ ಕಾರ್ಯಕ್ರಮದ ಯಶಸ್ಸಿಗೆ ಸರ್ವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಕ ಶಿಕ್ಷಕಿಯರ ಬಳಗ, ಆಡಳಿತ ಮಂಡಳಿ, ಬೋಧಕೇತರ ಸಿಬ್ಬಂದಿ ವರ್ಗದವರಿಗೆ ಸಂಸ್ಥೆ ಅಭಿನಂದಿಸಿದೆ.ಈ ಕಾರ್ಯಕ್ರಮವನ್ನು ಶ್ರೀಯುತ ಶಿವಾಜಿ ಕುಂಬಾರ ನಿರೂಪಿಸಿದರು ಹಾಗೂ ಡಾ.ಜಗದೀಶ ಕೆ ವಂದಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here