ಕಲಬುರಗಿ: ವಿಶ್ವಗುರು ಬಸವಣ್ಣನವರನ್ನು “ಕರ್ನಾಟಕದ ಸಾಂಸ್ಕೃತಿಕ ನಾಯಕ” ಜಗ ಜ್ಯೋತಿ ಬಸವಣ್ಣ ಅವರ ಭಾವ ಚಿತ್ರವನ್ನು ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ‘ವಿಶ್ವಗುರು ಬಸವಣ್ಣನವರು ಸಾಂಸ್ಕೃತಿಕ ನಾಯಕ’ ಎಂಬ ಘೋಷಣೆಯುಳ್ಳ ಈ ಭಾವಚಿತ್ರವನ್ನು ಅಳವಡಿಸುವಂತೆ ಸರ್ಕಾರ ಸೂಚನೆ ನೀಡಿ ಮುಖ್ಯಮಂತ್ರಿಗಳ ಕಚೇರಿಯಿಂದಲೇ ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಅಳವಡಿಸುವ ಮೂಲಕ ಅಧಿಕೃತವಾಗಿ ಚಾಲನೆ ನೀಡಿದ್ದು ಹೆಮ್ಮೆಯ ವಿಷಯ ಮತ್ತು ಸಂತೋಷದ ವಿಷಯ ಎಂದು ವೀರಶೈವ ಲಿಂಗಾಯತ ಮಹಾ ವೇದಿಕೆಯ ರಾಜ್ಯ ಸಮಿತಿ ಶ್ರೀಧರ್ ಎಮ್. ನಾಗನಹಳ್ಳಿ ಹರ್ಷ ವ್ಯಕ್ತಪಡಿಸಿದ್ದಾರೆ.