ಸುರಪುರ: ನಗರದ ತಹಸಿಲ್ದಾರ್ ಕಚೇರಿಯಲ್ಲಿ ಸವಿತಾ ಮಹರ್ಷಿ ಹಾಗೂ ಛತ್ರಪತಿ ಶಿವಾಜಿ ಜಯಂತಿ ಆಚರಣೆ ಅಂಗವಾಗಿ ತಹಸಿಲ್ದಾರ್ ಕೆ.ವಿಜಯಕುಮಾರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷತೆ ವಹಿಸಿದ್ದ ತಹಸಿಲ್ದಾರ್ ಕೆ.ವಿಜಯಕುಮಾರ ಮಾತನಾಡಿ,ಇದೇ ಫೆಬ್ರವರಿ 16ನೇ ತಾರಿಖು ಸವಿತಾ ಮಹರ್ಷಿಯವರ ಜಯಂತಿ ಆಚರಿಸಲಾಗುವುದು,ಅದೇರೀತಿಯಾಗಿ 19ನೇ ತಾರಿಖು ಛತ್ರಪತಿ ಶಿವಾಜಿ ಜಯಂತಿಯನ್ನು ಆಚರಿಸಲಾಗುವುದು ಎಂದು ತಿಳಿಸಿದರು.
ಈಗಾಗಲೇ ಸವಿತಾ ಸಮಾಜದ ಅನೇಕ ಮುಖಂಡರು ಸಲಹೆ ನೀಡಿದಂತೆ 16 ರಂದು ಸವಿತಾ ಮಹರ್ಷಿ ಜಯಂತಿಯನ್ನು ತಹಸಿಲ್ ಕಚೇರಿಯಲ್ಲಿ ಸವಿತಾ ಮಹರ್ಷಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಗುವುದು ಎಂದು ತಿಳಿಸಿದರು.
ಅಲ್ಲದೆ 19 ರಂದು ಛತ್ರಪತಿ ಶೀವಾಜಿ ಜಯಂತಿಯನ್ನು ತಹಸಿಲ್ ಕಚೇರಿಯ ಸಭಾಂಗಣದಲ್ಲಿ ಉಪನ್ಯಾಸ ಕಾರ್ಯಕ್ರಮವನ್ನು ನಡೆಸಲಾಗುವುದು ಎಂದು ತಿಳಿಸಿದರು.ಎರಡೂ ಜಯಂತಿ ಕಾರ್ಯಕ್ರಮಗಳ ಯಶಸ್ಸಿಗೆ ಎಲ್ಲ ಇಲಖೆಯ ಅನುಷ್ಠಾಧಿಕಾರಿಗಳು ಹಾಗೂ ಇಬ್ಬರು ಮಹನಿಯರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಸಭೆಯಲ್ಲಿ ತಾ.ಪಂ ಇ.ಓ ಬಸವರಾಜ ಸಜ್ಜನ್,ಸಮಾಜ ಕಲ್ಯಾಣ ಇಲಾಖೆ ಎ.ಡಿ ಶೃತಿ ಎಸ್,ಪರಿಶಿಷ್ಟ ಪಂಗಡ ಇಲಾಖೆ ಅಧಿಕಾರಿ ಮಹ್ಮದ್ ಸಲೀಂ,ಕೃಷಿ ಇಲಾಖೆ ಎ.ಡಿ ಭೀಮರಾಯ ಹವಲ್ದಾರ್,ಪಶು ಸಂಗೋಪನ ಇಲಾಖೆ ಎ.ಡಿ ಸುರೇಶ ಅಚ್ಚಡ್,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃಧ್ಧಿ ಇಲಾಖೆ ಅಧಿಕಾರಿ ಅನಿಲಕುಮಾರ್ ಕಾಂಬ್ಳೆ,ಸವಿತಾ ಸಮಾಜದ ಅಧ್ಯಕ್ಷ ದೇವಿಂದ್ರ ಅಜ್ಜಕೊಲಿ,ಚಂದ್ರಾಮ ಮುಂದಿನಮನಿ,ಬಾಲರಾಜ ಚಿನ್ನಾಕಾರ,ಗೋಪಾಲ ಚಿನ್ನಾಕಾರ,ಭೀಮಣ್ಣ ದೇವರಗೋನಾಲ,ರಾಘವೇಂದ್ರ ಮುಂದಿನಮನಿ,ರಾಘವೇಂದ್ರ ಬಾದ್ಯಾಪುರ,ರಾಮು ದೇವಿಕೇರಾ ಛತ್ರಪತಿ ಶಿವಾಜಿ ಅಭಿಮಾನಿಗಳಾದ ರಾಜು ಪುಲ್ಸೆ,ಶ್ರೀನಿವಾಸ ದಾಯಪುಲೆ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…