ಬಿಸಿ ಬಿಸಿ ಸುದ್ದಿ

ವಿಧಾನ ಸಬೆ ಕಲಾಪದಲ್ಲಿ ಗಮನ ಸೆಳೆದ ಶಾಸಕ ಅಲ್ಲಂಪ್ರಭು ಪಾಟೀಲ್

 

ಕಲಬುರಗಿ: ಜಿಲ್ಲೆಯಲ್ಲಿ ಬರಗಾಲ ಮತ್ತು ಕುಡಿಯುವ ನೀರಿನ ಸಮಸ್ಯೆಯಿಂದ ಉದ್ಭವವಾಗಬಹುದಾದ ಅನೇಕ ತೊಂದರೆಗಳನ್ನು ಪರಿಹರಿಸಲು, ನಿಭಾಯಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಬರ ನಿರ್ವಹಣ ಸಮೀತಿಯು ಜಿಲ್ಲೆಯ 11 ತಾಲೂಕುಗಳಲ್ಲಿ ನೀರಿನ ಸಮಸ್ಯೆ ಎದುರಾಗಬಹುದಾದ 282 ಗ್ರಾಮಗಳನ್ನ ಗುರುತಿಸಿದೆ, ಈ ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆ ಮೇಲೆ ನಿಗಾ ಇಟ್ಟಿದೆ ಎಂದು ಆರ್‌ಡಿಪಿಆರ್‌ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ವಿಧಾನ ಸಭೆಯಲ್ಲಿಂದು ಕಲಬುರಗಿ ದಕ್ಷಿಣ ಮತಕ್ಷೇತ್ರ ಶಾಸಕರಾದ ಅಲ್ಲಂಪ್ರಭು ಪಾಟೀಲರ ಗಮನ ಸೆಳೆಯುವ ಗೊತ್ತುವಳಿಗೆ ಉತ್ತರಿಸಿದ ಅವರು, ಸಮಸ್ಯೆ ಎದುರಾಗಬಹುದಾದ 282 ಗಾಮಗಳ ಪೈಕಿ 157 ಗ್ರಾಮಗಳಲ್ಲಿ ಅದಾಗಲೇ ಖಾಸಗಿಯವರ ಕೊಳವೆ ಬಾವಿಗಳನ್ನೂ ಗುರುತಿಸಲಾಗಿದೆ. 185 ಗ್ರಾಮಗಳಲ್ಲಿ ಅಗತ್ಯ ಬಿದ್ದರೆ ಟ್ಯಾಂಕರ್‌ ಮೂಲಕ ನೀರು ಸರಬರಾಜಿಗೂ ಸಿದಧತೆ ಮಾಡಿಟ್ಟುಕೊಳ್ಳಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಕಲಬುರಗಿ ಜಿಲ್ಲಾದ್ಯಂತ ಕಂಡಿರುವ ಬರಗಾಲ ನಿರ್ವಹಣೆಗೆ ತುರ್ತು ಬರ ಕಾಮಗಾರಿ ರೂಪದಲ್ಲಿ ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ. 193 ಕಾಮಗಾರಿಗಳನ್ನು ಅಳ‍ಡಿಸಿಕೊಳ್ಳಲಾಗಿದೆ. ಅದರಲ್ಲಿ 164 ಕೊಳವೆ ಬಾವಿ ಕೊರೆಯಿಸುವುದು, ಸ್ವಚ್ಚಗೊಳಿಸುವುದು, ಅಣಿಗೊಳಿಸುವುದು ಹಾಗೂ ಪೈಪ್‌ಲೈನ್‌ ಮತ್ತು ಮೋಟರ್‌ ಅಳವಡಿಸುವ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ ಸದನದಲ್ಲಿ ಶಾಸಕರಾದ ಅಲ್ಲಂಪ್ರಭು ಪಾಟೀಲರ ಗಮನ ಸೆಳೆಯುವ ಗೊತ್ತುವಳಿಗೆ ಉತ್ತರಿಸುತ್ತ ಮಾಹಿತಿ ನೀಡಿದ್ದಾರೆ.

ಇಂದು ಸದನದಲ್ಲಿ ತಮ್ಮ ಗಮನ ಸೆಳೆಯುವ ಗೊತ್ತುವಳಿ ಮೇಲೆ ಮಾತನಾಡಿದ ಕಲಬುರಗಿ ಶಾಸಕ ಅಲ್ಲಂಪ್ರಭು ಪಾಟೀಲರು, ಕಲಬುರಗಿ ಜಿಲ್ಲೆಯಲ್ಲಿ ಭೀಮಾ, ಅಮರ್ಜಾ ಸೇರಿದಂತೆ ನದಿಗಳೆಲ್ಲವೂ ಬತ್ತಿ ಹೋಗಿವೆ. ಅಂತರ್ಜಲ ಮಟ್ಟ ಕುಸಿದಿದೆ. ಕೆರೆಗಳಲ್ಲಿ ನೀರಿಲ್ಲ, ಜನ- ಜಾನುವರು ಹಾಹಾಕಾರ ಬರುವ ದಿನಗಳಲ್ಲಿ ಹೆಚ್ಚಾಗುವ ಆತಂಕವನ್ನು ಹೊರಹಾಕಿದರಲ್ಲದೆ ಭೀಮಾ ನದಿಗೆ ಕೃಷ್ಣಾ ನದಿಯಿಂದ ಹೆಚ್ಚುವರಿ ನೀರು ಹರಿಸುವ ಮೂಲಕ ನದಿಯಲ್ಲಿ ನೀರು ಇರುವಂತೆ ನೋಡಿಕೊಳ್ಳಬೇಕೆಂದು ಆಗ್ರಹಿಸಿದರು.

ಕಲಬುರಗಿ ನಗರದಲ್ಲಿನ ಬಹುಕೋಟಿ ಮೊತ್ತದ ನಿರಂತರ ನೀರು ಪೂರೈಕೆ ಯೋಜನೆ ವಿಳಂಬವಾಗುತ್ತಿರೋದರ ಬಗ್ಗೆಯೂ ಶಾಸಕರು ಸದನದಲ್ಲಿ ಗಮನ ಸೆಳೆಯುತ್ತ ಬೇಗನೇ ಕಾಮಗಾರಿ ಪೂರ್ಣಗೊಳಿಸಲು ಆಗ್ರಹಿಸಿದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

53 mins ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

11 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

11 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

11 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago