ಕಲಬುರಗಿ: ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನಿಗೆ ಗುಂಡಿಟ್ಟು ಹತ್ಯೆ ಮಾಡಿ ಪರಾರಿಯಾದ ಘಟನೆ ಜಿಲ್ಲೆಯ ಅಫಜಲಪೂರ್ ತಾಲ್ಲೂಕಿನ ಕರ್ಜಗಿ ಗ್ರಾಮದಲ್ಲಿ ವರದಿಯಾಗಿದೆ. ಮೃತನಿಗೆ ಕರ್ಜಗಿ ಗ್ರಾಮದ ಸಾಯಬಣ್ಣ ತಳವಾರ್ (೨೮) ಎಂದು ಗುರುತಿಸಲಾಗಿದೆ.
ಹತ್ಯೆ ಪ್ರಕರಣದ ಆರೋಪಿಯನ್ನು ಹತ್ಯೆಗೆ ಒಳಗಾದ ಸಾಯಬಣ್ಣ ತಳವಾರನ ಹತ್ತಿರದ ಸಂಬಂಧಿ ರವಿ ಅಲಿಯಾಸ್ ಅಭಿಷೇಕ್ ಜಮಾದಾರ್ ಎನ್ನಲಾಗಿದ್ದು, ಆತನ ಪತ್ತೆಗೆ ಪೋಲಿಸರು ಕಾರ್ಯಾಚರಣೆ ಮುಂದುವರೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಭಿಷೇಕ್ ಜಮಾದಾರ್‌ನ ಗೆಳೆಯ ದತ್ತು ಎಂಬಾತನಿಗೆ ಪೋಲಿಸರು ವಿಚಾರಣೆಗೆ ಒಳಪಡಿಸಿದ್ದಾರೆ.
ಕರ್ಜಗಿ ಗ್ರಾಮದ ಮಹಾರಾಷ್ಟ್ರ ಬ್ಯಾಂಕ್ ಎದುರುಗಡೆ ಸಾಯಬಣ್ಣ ಹಾಗೂ ಅಭಿಷೇಕ್ ಅವರು ಸೋಮವಾರ ಸಂಜೆ ಮಾತನಾಡುತ್ತ ನಿಂತಿದ್ದರು. ಆ ವೇಳೆ ಇದ್ದಕ್ಕಿದ್ದಂತೆ ವಿವಾದ ಉಂಟಾಗಿ ಅಭಿಷೇಕನು ತನ್ನಲ್ಲಿದ್ದ ಪಿಸ್ತೂಲ್‌ನಿಂದ ಸಾಯಬಣ್ಣ ಬಾಯಿಯೊಳಗೆ ಇಟ್ಟು ಗುಂಡು ಹಾರಿಸಿದ. ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿ ಒದ್ದಾಡುತ್ತಿದ್ದ ಸಾಯಿಬಣ್ಣನಿಗೆ ಕೂಡಲೇ ಜಿಮ್ಸ್ ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಆತ ಅಸುನೀಗಿದ.
ಹತ್ಯೆ ಪ್ರಕರಣದ ಆರೋಪಿ ಅಭಿಷೇಕ್ ವಿರುದ್ಧ ಅಕ್ರಮ ಪಿಸ್ತೂಲ್ ಮಾರಾಟಕ್ಕೆ ಸಂಬಂಧಿಸಿದಂತೆ ನೆರೆಯ ವಿಜಯಪೂರ್ ಹಾಗೂ ಇಂಡಿ ಪೋಲಿಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಅಲ್ಲದೇ ಅಕ್ರಮ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಹಿನ್ನೆಲೆಯಲ್ಲಿ ಮೂರ‍್ನಾಲ್ಕು ಬಾರಿ ಜೈಲಿಗೂ ಸಹ ಹೋಗಿ ಬಂದಿದ್ದ. ಆತನ ಹತ್ತಿರ ಯಾವಾಗಲೂ ಅಕ್ರಮ ಪಿಸ್ತೂಲ್ ಇರುತ್ತಿತ್ತು ಎನ್ನಲಾಗಿದೆ.
ಹತ್ಯೆ ಸುದ್ದಿ ತಿಳಿಯುತ್ತಿದ್ದಂತೆಯೇ ಅಫಜಲಪೂರ್ ಪೋಲಿಸ್ ಠಾಣೆಯ ಸಿಪಿಐ ಮಹಾಂತೇಶ್ ಪಾಟೀಲ್ ಹಾಗೂ ಪಿಎಸ್‌ಐ ಮಂಜುನಾಥ್ ಹೂಗಾರ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದ್ದು, ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…