ಕಲಬುರಗಿ: ನಾಳೆ ಶ್ರೀ ಸವಿತಾ ಮಹರ್ಷಿ ಜಯಂತಿ ನಿಮಿತ್ತ ಕರ್ನಾಟಕ ಸರ್ಕಾರದಿಂದ ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ ಹಾಗೂ ಸರ್ಕಾರದ ಎಲ್ಲಾ ಶಾಲಾ ಕಾಲೇಜುಗಳು, ಕಂದಾಯ ಇಲಾಖೆ, ಗ್ರಾಮ ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಅಡಿಯಲ್ಲಿ ಬರುವ ಎಲ್ಲಾ ಇಲಾಖೆಗಳಲ್ಲಿ ಅಂದು ಜಯಂತಿ ಕಡ್ಡಾಯವಾಗಿ ಆಚರಿಸಲು ಜಿಲ್ಲಾಡಳಿತ ಸೂಚನೆ ನೀಡಬೇಕೆಂದು ಅವರು ಸುದ್ದಿಗೋಷ್ಠಿಯಲ್ಲಿ ಜಯಂತಿ ಉತ್ಸವ ಸಮಿತಿ ಅಧ್ಯಕ್ಷ ಸೂರ್ಯಕಾಂತ ಜಿ ಬೆಣ್ಣೂರ ಅವರು ಒತ್ತಾಯಿಸಿದರು.
ಅವರು ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ. ಕಲಬುರಗಿ ಅಪರ ಜಿಲ್ಲಾಧಿಕಾರಿಗಳು, ಅವರ ಅಧ್ಯಕ್ಷತೆಯಲ್ಲಿ ಜಯಂತಿ ಆಚರಣೆಯ ಪೂರ್ವಭಾವಿ ಸಭೆ ಮಾಡಿ, ಜಯಂತಿ ಕುರಿತು ಸರ್ಕಾರದ ಎಲ್ಲಾ ಕಚೇರಿಗಳಲ್ಲಿ ಕಡ್ಡಾಯವಾಗಿ ಶ್ರೀ ಸವಿತಾ ಮಹರ್ಷಿ ಜಯಂತಿ ಆಚರಿಸಲು ಆದೇಶ ನೀಡಿರುತ್ತಾರೆ.
ಹಾಗೂ ಫೆ.16 ರಂದು ಡಾ.ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಸರ್ಕಾರದ ವತಿಯಿಂದ ಜಿಲ್ಲಾಡಳಿತದಿಂದ ಜಯಂತಿ ಆಚರಣೆ ಮಾಡಲಾಗುತ್ತಿದ್ದು, ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಪ್ರಿಯಾಂಕ್ ಖರ್ಗೆ, ಹಾಗೂ, ಲೋಕಸಭಾ ಸದಸ್ಯರು, ರಾಜ್ಯಸಭಾ ಸದಸ್ಯರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಆಗಮಿಸುತ್ತಿದ್ದು, ಕಲಬುರಗಿ ಜಿಲ್ಲಾ ಸವಿತಾ ಸಮಾಜದ ಪದಾಧಿಕಾರಿಗಳು, ಎಲ್ಲ ಮಂಡಲದ ಅಧ್ಯಕ್ಷರು ಸದಸ್ಯರು, ಎಲ್ಲಾ ತಾಲೂಕಾ ಅಧ್ಯಕ್ಷರು, ಸರ್ಕಾರಿ ಮತ್ತು ಅರೆಸರ್ಕಾರಿ ನೌಕರರ ಸಂಘದ ಸದಸ್ಯರು ಮತ್ತು ಪದಾಧಿಕಾರಿಗಳು, ಮಹಿಳಾ ಘಟಕದ ಎಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರು, ಜಿಲ್ಲಾ ಸವಿತಾ ಸಮಾಜ ಯುವಕ ಘಟಕದ ಎಲ್ಲಾ ಪದಾಧಿಕಾರಿಗಳು, ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಬಾಂಧವರು ಕಾರ್ಯಕ್ರಮದಲ್ಲಿ ಭಾಗಿ ಕಾರ್ಯಕ್ರಮವನ್ನು ಯಶ್ವಸಿಗೊಳಿಸಬೇಕೆಂದು ಮನವಿ ಮಾಡಿದರು.