ಕಲಬುರಗಿ: ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಫೆ.14 ರಂದು ರಾತ್ರಿ 8 ಗಂಟೆ ಸುಮಾರಿಗೆ ಧಾರ್ಮಿಕ ಧ್ವಜದ ಕಂಬಕ್ಕೆ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ವಾಡಿ ಪಟ್ಟಣದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು ಪೊಲೀಸರ ಮಧ್ಯಪ್ರವೇಶದಿಂದ ಸಂಘರ್ಷ ತಪ್ಪಿದ್ದು, ಎರಡು ಗುಂಪುಗಳ ಮಧ್ಯೆ ಮಾತಿನ ಚಕಮಕಿ ನಡೆಯುತ್ತಿದ್ದ ವಿಷಯ ಅರಿತ ಪೊಲೀಸರು ಲಘು ಲಾಠಿ ಪ್ರಹಾರ ಮಾಡುವ ಮೂಲಕ ಗುಂಪುಗಳನ್ನು ಚದುರಿಸಿದ್ದಾರೆ.
ವಾಡಿ ಪಟ್ಟಣದಲ್ಲಿ ಫೆ.15ರಂದು ಸಂತ ಸೇವಾಲಾಲ್ ಜಯಂತಿ ಪ್ರಯುಕ್ತ ಮೆರವಣಿಗೆ ಕಾರಣಕ್ಕೆ ಬಂಜಾರಾ ಸಮುದಾಯದ ಯುವಕರು ಮೌಲಾನಾ ಅಬ್ದುಲ್ ಕಲಾಂ ಆಜಾದ್ ವೃತ್ತದಲ್ಲಿರುವ ಆಜಾದ್ ಧ್ವಜ ಸ್ತಂಭಕ್ಕೆ ಸೇವಾಲಾಲ್ ಬಾವುಟ ಕಟ್ಟಲು ಮುಂದಾದಾಗ ಕೆಲ ಮುಸ್ಲಿಂ ಯುವಕರು ಆಕ್ಷೇಪ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.
ಸ್ಥಳದಲ್ಲಿದ್ದ ಎರಡು ಗುಂಪಿನ ಯುವಕರ ನಡುವೆ ವಾಗ್ವಾದ ಉಂಟಾಗಿದೆ. ಆಗ ಪೊಲೀಸರು ಕ್ರೈಂ ಪಿಎಸ್‌ಐ ದಿವ್ಯಾ ಮಹಾದೇವ ನೇತೃತ್ವದಲ್ಲಿ ಲಘು ಲಾಠಿ ಪ್ರಹಾರ ನಡೆಸಿದ್ದಾರೆ.
ಕಲಬುರಗಿ: ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಸರ್ಕಾರಿ ಪದವಿ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಮಹಾನಗರ ಪಾಲಿಕೆ,ಸಮಾಜ ಕಲ್ಯಾಣ ಇಲಾಖೆ, ಕನ್ನಡ…
ಕಲಬುರಗಿ: ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರಗಿ ಹಾಗೂ ಸಿ.ಆರ್.ಸಿ ಸ್ನೇಹ ಬಳಗ ಕಲಬುರಗಿ ಮತ್ತು ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ…
ಕಲಬುರಗಿ: ಸುವರ್ಣ ಭವನ (ಕನ್ನಡ ಭವನ)ದಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಜಿಲ್ಲಾ ಘಟಕ ವತಿಯಿಂದ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ…
ಕಲಬುರಗಿ : ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರಗಿಯಲ್ಲಿ ಎನ್.ಎಸ್.ಎಸ್, ರೆಡ್‍ಕ್ರಾಸ್, ಸ್ಕೌಟ್ಸ್ ಆಂಡ್ ಗೈಡ್ಸ್, ಐ.ಕ್ಯೂ.ಎ.ಸಿ ಮತ್ತು ಸಾಂಸ್ಕøತಿಕ ಘಟಕಗಳ…
ಕಲಬುರಗಿ; ಶಿಶು ಮಗುವಿಗೆ ಅಪಹರಣಕಾರರನ್ನು ಬಂಧಿಸಿದ ಕಲಬುರಗಿ ಪೆÇೀಲೀಸ್ ಇಲಾಖೆಗೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಅಭಿನಂದನೆ ವ್ಯಕ್ತಪಡಿಸಿದೆ.…
ಕಲಬುರಗಿ; ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಜೇವರ್ಗಿ, ಯಡ್ರಾಮಿ, ಅಫಜಲಪೂರ, ಸೇಡಂ, ಆಳಂದ, ಚಿಂಚೋಳಿ ತಾಲೂಕಿನಲ್ಲಿ ಜಂಗಲ್ ಕಟಿಂಗ್ ಹಾಗೂ ಮೆಂಟನೆನ್ಸ್…